For Quick Alerts
ALLOW NOTIFICATIONS  
For Daily Alerts
 

ಖಾಲಿ ಸ್ಟೇಡಿಯಂನಲ್ಲಿ ವಿಶ್ವಕಪ್ ಉದ್ಘಾಟನಾ ಪಂದ್ಯ!!: Eng vs NZ ಪಂದ್ಯಕ್ಕೆ ನೀರಸ ಪ್ರತಿಕ್ರಿಯೆ

ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗುತ್ತಿದ್ದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಆದರೆ ಈ ಪಂದ್ಯಕ್ಕೆ ಅಭಿಮಾನಿಗಳಿಂದ ಅತ್ಯಂತ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರೀಡಾಂಗಣ ಸಂಪೂರ್ಣವಾಗಿ ಖಾಲಿ ಖಾಲಿಯಾಗಿ ಗೋಚರಿಸುತ್ತಿದೆ.

ಕಳೆದ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಎರಡು ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯೊಂದಿಗೆ ವಿಶ್ವಕಪ್‌ಗೆ ಕಣಕ್ಕಿಳಿದಿದ್ದು ಪೈಪೋಟಿಯ ಕದನ ಏರ್ಪಟ್ಇದೆ. ಆದರೆ ಈ ಪಂದ್ಯಕ್ಕೆ ಅಭಿಮಾನಿಗಳಿಂದ ನೀರಸ ಪ್ರತಿಕ್ರಿಯೆ ದೊರೆತಿದೆ.

Fans not interest on World cup Inaugural match: Eng vs NZ match almost empty stadium

ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಈ ಪಂದ್ಯದ ಅಗತ್ಯವಿತ್ತಾ?

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ 1,32,000 ದಷ್ಟು ಅಭಿಮಾನಿಗಳ ಸಾಮರ್ಥ್ಯವನ್ನು ಹೊಂದಿದೆ. ಆದರೆ ಇಷ್ಟು ಬೃಹತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಅಲ್ಲಿನ ಸ್ಥಳೀಯ ಅಭಿಮಾನಿಗಳು ಅತ್ಯಂತ ನೀರಸವಾದ ಪ್ರತಿಕ್ರಿಯೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ತಂಡ ಭಾಗಿಯಾಗುತ್ತಿಲ್ಲವಾದ ಕಾರಣ ಅಭಿಮಾಣಿಗಳಿಗೆ ಈ ಪಂದ್ಯದ ಮೇಲೆ ಹೆಚ್ಚಿನ ಕುತೂಹಲ ಇಲ್ಲ. ಹಾಗಾಗಿ ಇಷ್ಟು ದೊಡ್ಡ ಕ್ರೀಡಾಂಗಣದಲ್ಲಿ ಈ ಉದ್ಘಾಟನಾ ಪಂದ್ಯವನ್ನು ಆಯೋಜನೆ ಮಾಡಿ ಮುಜುಗರಕ್ಕೆ ಒಳಗಾಗುವ ಅಗತ್ಯವಿತ್ತಾ ಎನ್ನುವ ಪ್ರಶ್ನೆಗಳು ಈಗ ಎದ್ದಿದೆ.

ಟೀಕೆಗಳನ್ನು ಮಾಡುತ್ತಿದ್ದಾರೆ ಅಭಿಮಾನಿಗಳು

ಇನ್ನು ಬಹುತೇಕ ಖಾಲಿಯಾಗಿರುವ ಸ್ಟೇಡಿಯಂನಲ್ಲಿ ಈ ಉದ್ಘಾಟನಾ ಪಂದ್ಯ ಆಯೋಜನೆಯಾಗುತ್ತಿರುವ ಕಾರಣ ಅಭಿಮಾನಿಗಳು ಕೂಡ ಟೀಕಿಸುತ್ತಿದ್ದಾರೆ. Xನಲ್ಲಿ ಅಭಿಮಾನಿಯೊಬ್ಬರು ಈ ಬಗ್ಗೆ ಕಠುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. "ಈ ಕ್ಷಣಕ್ಕೆ ಇದು ಬಹಳ ಮುಜುಗರದ ಸಂಗತಿ. ವಿಶ್ವಕಪ್ ಉದ್ಘಾಟನಾ ಪಂದ್ಯದ ಟಾಸ್ ಸಂಪೂರ್ಣ ಖಾಲಿ ಕ್ರೀಡಾಂಗಣದಲ್ಲಿ ನಡೆದಿದೆ" ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಬೆನ್ ಸ್ಟೋಕ್ಸ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಟಿಮ್ ಸೌಥಿ

Story first published: Thursday, October 5, 2023, 14:53 [IST]
Other articles published on Oct 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+