
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸಿದ್ದ ಶ್ರೀಲಂಕಾ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಸೋತು ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸುವುದರ ಮೂಲಕ ಸರಣಿಯನ್ನು ಹೀನಾಯವಾಗಿ ಸೋತಿತ್ತು. ಹೀಗೆ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡು ಮುಖಭಂಗಕ್ಕೊಳಗಾಗಿರುವ ಶ್ರೀಲಂಕಾ ಇದಾದ ಬೆನ್ನಲ್ಲೇ ಇದೀಗ ಭಾರತ ಪ್ರವಾಸವನ್ನು ಕೈಗೊಂಡು ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾ ಎರಡೂ ಸರಣಿಗಳ ಎಲ್ಲಾ ಪಂದ್ಯದಲ್ಲಿಯೂ ಕೂಡ ಕೆರಿಬಿಯನ್ನರಿಗೆ ಸೋಲುಣಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿದೆ. ಹೀಗೆ ಹಿಂದಿನ ಸರಣಿಯಲ್ಲಿ ಸೋಲುಂಡು ಮುಖಭಂಗಕ್ಕೊಳಗಾಗಿರುವ ಶ್ರೀಲಂಕಾ ಗೆಲುವಿನ ನಾಗಾಲೋಟದಲ್ಲಿರುವ ಟೀಮ್ ಇಂಡಿಯಾವನ್ನು ಎದುರಿಸಲಿದ್ದು ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿದೆ ಹಾಗೂ ಈ ಟಿ ಟ್ವೆಂಟಿ ಸರಣಿ ಮುಗಿದ ಬಳಿಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಹೀಗೆ ಭಾರತ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಫೆಬ್ರವರಿ 24ರಂದು ನಡೆಯಲಿರುವ ಮೊದಲ ಟಿ ಟ್ವೆಂಟಿ ಪಂದ್ಯದ ಮೂಲಕ ಆರಂಭವಾಗಲಿದ್ದು ಶ್ರೀಲಂಕಾ ಆಟಗಾರರು ಈಗಾಗಲೇ ಲಕ್ನೋ ತಲುಪಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಇತ್ತ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಪ್ರಕಟಿಸಿರುವ 18 ಆಟಗಾರರು ಭಾರತ ಪ್ರವಾಸವನ್ನು ಕೈಗೊಂಡು ಭಾರತ ವಿರುದ್ಧ ಸೆಣಸಾಟ ನಡೆಸಲು ಸಜ್ಜಾಗುತ್ತಿದ್ದರೆ, ಅತ್ತ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಕಚೇರಿಯ ಎದುರು ಉತ್ತಮ ಪ್ರದರ್ಶನ ನೀಡಬಲ್ಲ ಪ್ರತಿಭಾವಂತ ಆಟಗಾರನಿಗೆ ಭಾರತ ಪ್ರವಾಸಕ್ಕೆ ಪ್ರಕಟವಾಗಿರುವ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆದಿದೆ. ಹೌದು, ಶ್ರೀಲಂಕಾ ತಂಡದ ಎಡಗೈ ಬ್ಯಾಟ್ಸ್‌ಮನ್ ಭಾನುಕಾ ರಾಜಪಕ್ಸೆ ಅವರನ್ನು ಭಾರತ ಪ್ರವಾಸಕ್ಕೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಆಯ್ಕೆ ಮಾಡದೆ ಕೈಬಿಟ್ಟಿದೆ. ಹೀಗೆ ಭಾನುಕಾ ರಾಜಪಕ್ಸೆ ಅವರನ್ನು ಆಯ್ಕೆ ಮಾಡದ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಫಿಟ್‌ನೆಸ್ ಇಲ್ಲ ಎಂಬ ಕಾರಣವನ್ನು ನೀಡಿ ಈ ಕ್ರಿಕೆಟಿಗನನ್ನು ತಂಡದಿಂದ ಹೊರಗಿಟ್ಟಿದೆ.
ಹೀಗೆ ಪ್ರಮುಖ ಆಟಗಾರನನ್ನೇ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಕಡೆಗಣಿಸಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಭಾನುಕಾ ರಾಜಪಕ್ಸೆ ಅಭಿಮಾನಿಗಳು ಪ್ರತಿಭಟನೆ ನಡೆಸಿ ತಂಡದಲ್ಲಿ ಆತನಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ 50 ಲಕ್ಷಕ್ಕೆ ಪಂಜಾಬ್ ಕಿಂಗ್ಸ್ ತಂಡ ಸೇರಿದ ಭಾನುಕ ರಾಜಪಕ್ಸೆ ಹರಾಜಿನಲ್ಲಿ ಬಿಕರಿಯಾದ ಶ್ರೀಲಂಕಾದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಹೀಗೆ ಐಪಿಎಲ್ ಮೆಗಾ ಹರಾಜಿನಲ್ಲಿ ಬೇಡಿಕೆಯನ್ನು ಹೊಂದಿರುವಂತಹ ಆಟಗಾರನನ್ನು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ನಿರ್ಲಕ್ಷ್ಯ ಮಾಡಿದೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ಇನ್ನು ಒಟ್ಟಾರೆ 15 ಟಿ ಟ್ವೆಂಟಿ ಇನ್ನಿಂಗ್ಸ್ ಆಡಿರುವ ಭಾನುಕ ರಾಜಪಕ್ಸೆ 320 ರನ್ ಗಳಿಸಿದ್ದಾರೆ. ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿಯೂ ಮಿಂಚಿದ್ದ ಭಾನುಕ ರಾಜಪಕ್ಸೆ ಕಳೆದ ಜನವರಿ ತಿಂಗಳಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ತಮ್ಮ ನಿವೃತ್ತಿಯನ್ನು ವಾಪಸ್ ಪಡೆದ ಭಾನುಕ ರಾಜಪಕ್ಸೆ ಮತ್ತೆ ಕ್ರಿಕೆಟ್ ಆಡುವತ್ತ ಮನಸ್ಸು ಮಾಡಿದ್ದಾರೆ. ಆದರೆ ನಂತರ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ ಟ್ವೆಂಟಿ ಸರಣಿಗೆ ಪ್ರಕಟವಾದ ತಂಡದಲ್ಲಿ ಭಾನುಕ ರಾಜಪಕ್ಸೆ ಅವರನ್ನು ಆಯ್ಕೆ ಮಾಡಿರಲಿಲ್ಲ ಹಾಗೂ ಇದೀಗ ಭಾರತ ವಿರುದ್ಧ ನಡೆಯುತ್ತಿರುವ ಸರಣಿಗಳಿಗೆ ಪ್ರಕಟವಾಗಿರುವ ತಂಡದಲ್ಲಿ ಕೂಡ ಸ್ಥಾನ ನೀಡಿಲ್ಲ. ಹೀಗೆ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಭಾನುಕ ರಾಜಪಕ್ಸೆಗೆ ಅವಕಾಶ ಸಿಗದೇ ಇರುವುದು ಆತನ ಅಭಿಮಾನಿಗಳಲ್ಲಿ ಬೇಸರವನ್ನುಂಟು ಮಾಡಿದೆ.
ಶ್ರೀಲಂಕಾ ಟಿ 20 ಸ್ಕ್ವಾಡ್: ದಸುನ್ ಶನಕ - ನಾಯಕ, ಪಾತುಮ್ ನಿಸ್ಸಾಂಕ ಕುಸಲ್ ಮೆಂಡಿಸ್, ಚರಿತ್ ಅಸಲಂಕ - ಉಪನಾಯಕ, ದಿನೇಶ್ ಚಾಂಡಿಮಾಲ್, ದನುಷ್ಕ ಗುಣತಿಲಕ, ಕಾಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಎಫ್ ಜೆಫ್ರೆನ್, ಜೆಫ್ರೆನ್ ಜಯರಾಯ್ ಕುಮಾರ