Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮುಂಬೈ ಪರ ಕಣಕ್ಕಿಳಿದ ರೋಹಿತ್: ಬಿಸಿಸಿಐ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ ಅಭಿಮಾನಿಗಳು‌

Fans Question BCCI Selectors For Omitting MI Skipper From India Squad

ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಆಗಿದೆ.

ಗಾಯಾಳುವಾಗಿ ತಂಡದಿಂದ ಹೊರಬಿದ್ದಿದ್ದ ರೋಹಿತ್ ಶರ್ಮಾ ಕುರಿತು ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿದ್ದವು. ಆದರೆ ರೋಹಿತ್ ಮತ್ತೆ ಕಣಕ್ಕಿಳಿಯುವ ಮೂಲಕ ತಮ್ಮ ಫಿಟ್ನೆಸ್ ಸಾಭೀತುಪಡಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ರೋಹಿತ್ ಶರ್ಮಾ ಆಯ್ಕೆಯಾಗಿಲ್ಲ. ಮೂರು ಫಾರ್ಮೆಟ್‌ನ ಸರಣಿಗೆ ರೋಹಿತ್‌ರನ್ನು ಹೊರಗಿಡಲಾಗಿತ್ತು. ಆದರೆ ಎಸ್‌ಆರ್‌ಹೆಚ್‌ ವಿರುದ್ಧ ಹಿಟ್‌ಮ್ಯಾನ್ ಕಣಕ್ಕಿಳಿದು ಬಿಸಿಸಿಐ ಆಯ್ಕೆ ಸಮಿತಿಯ ನಿರ್ಧಾರವನ್ನೇ ಪ್ರಶ್ನಿಸಿದ್ದಾರೆ. ಅಭಿಮಾನಿಗಳು ಸಹ ರೋಹಿತ್ ಶರ್ಮಾ ಫಿಟ್ನೆಸ್ ಕುರಿತು ಬಿಸಿಸಿಐಗೆ ಯಾವುದೇ ಮಾಹಿತಿ ಇರಲಿಲ್ವ? ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ನಡೆದಿದ್ಯಾ ಎಂದು ಕಮೆಂಟ್ ಮಾಡುವ ಮೂಲಕ ಬಿಸಿಸಿಐಯನ್ನು ಪ್ರಶ್ನಿಸಿದ್ದಾರೆ.

ಇಷ್ಟೇ ಅಲ್ಲದೆ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ವಿರುದ್ಧ ಮೂರು ಸರಣಿಯಿಂದ ಹೊರಗಿಡಲು ಕಾರಣವೇನು ಎಂಬುದನ್ನು ಬಿಸಿಸಿಐ ಬಹಿರಂಗಪಡಿಸಲಿ ಎಂದು ಅಭಿಮಾನಿಗಳು ಟ್ವಿಟ್ಟರ್‌ನಲ್ಲಿ ಒತ್ತಾಯಿಸಿದ್ದಾರೆ.

Story first published: Wednesday, November 4, 2020, 9:46 [IST]
Other articles published on Nov 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+