ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸಂಜು ಸ್ಯಾಮ್ಸನ್‌ಗೆ ಮತ್ತೆ ನಿರಾಸೆ: ಫಿಫಾ ವಿಶ್ವಕಪ್‌ನಿಂದಲೂ ಅಭಿಮಾನಿಗಳ ಬೆಂಬಲ

Fans shows banner wrote We support you Sanju Samson at FIFA World Cup 2022 in Qatar

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ವೈಟ್‌ ಬಾಲ್ ಸರಣಿಯಲ್ಲಿ ಭಾಗಿಯಾಗಿದ್ದರು ಕೂಡ ಅವರಿಗೆ ಆಡುವ ಅವಕಾಶಗಳು ದೊರೆತಿಲ್ಲ. ರಿಷಭ್ ಪಂತ್ ಪದೇ ಪದೇ ವೈಫಲ್ಯ ಅನುಭವಿಸುತ್ತಾ ಬಂದರು ಕೂಡ ಅವರನ್ನೇ ಮುಂದುವರಿಸಿಸುತ್ತಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರವನ್ನು ಆಕ್ರೋಶವನ್ನು ಹೊರಹಾಕುತ್ತಿರುವ ಸಂಜು ಸ್ಯಾಮ್ಸನ್ ಅಭಿಮಾನಿಗಳು ಈ ಭಾರಿ ಭಿನ್ನವಾಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈಗ ಸಂಜು ಸ್ಯಾಮ್ಸನ್ ಅಭಿಮಾನಿಗಳು ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್‌ನಲ್ಲಿಯೂ ಭಾರತೀಯ ಆಟಗಾರನ ಪರವಾಗಿ ಬ್ಯಾನರ್ ಹಿಡಿದು ಬೆಂಬಲ ವ್ಯಕ್ತಪಡಿಸಿದ್ದಾರೆ. ಫಿಫಾ ವಿಶ್ವಕಪ್‌ ವೀಕ್ಷಿಸಲು ಕತಾರ್‌ನ ಸ್ಟೇಡಿಯಂಗೆ ಆಗಮಿಸಿದ್ದ ಅಭಿಮಾನಿಗಳು ಸಂಜು ಸ್ಯಾಮ್ಸನ್ ಪರವಾಗಿ ಬ್ಯಾನರ್ ಹಿಡಿದು ತಮ್ಮ ಬೆಂಬಲ ಸಂಜುಗೆ ಇದೆ ಎಂದು ಬರೆದುಕೊಂಡಿದ್ದಾರೆ. ಇದರ ಫೋಟೋವನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಸಂಜು ಸ್ಯಾಮ್ಸನ್‌ಗೆ ಅವಕಾಶ ದೊರೆಯದ ಬಗ್ಗೆ ಮಾತನಾಡಿದ ಪಾಂಡ್ಯ: ಇನ್ನು ಈ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್‌ಗೆ ಒಂದು ಪಂದ್ಯದಲ್ಲಿಯೂ ಅವಕಾಶ ದೊರೆಯದ ಬಗ್ಗೆ ಹಾರ್ದಿಕ್ ಪಾಂಡ್ಯ ಮಾತಾನಾಡಿದ್ದಾರೆ. "ಉದಾಹರಣೆಗೆ ಸಂಜು ಸ್ಯಾಮ್ಸನ್ ಅವರಂತಾ ಆಟಗಾರರ ಹೊರಗೆ ಕುಳಿತಿದ್ದಾರೆ ಎಂದರೆ ನಾವು ಕೂಡ ಅವರು ಆಡುವುದ್ನು ಬಯಸುತ್ತೇವೆ. ಕಾರಣಗಳು ಏನೇ ಇದ್ದರೂ ನಮ್ಮಿಂದ ಅವರನ್ನು ಆಡಿಸಲು ಸಾಧ್ಯವಾಗಿಲ್ಲ. ಆದರೆ ಇಂಥಾ ಪರಿಸ್ಥಿತಿಯಲ್ಲಿ ಅವರು ಯಾವ ರೀತಿಯ ಮನಸ್ಸು ಹೊಂದಿರುತ್ತಾರೆ ಎಂಬುದನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಕ್ರಿಕೆಟಿಗನಾಗಿ ಇದು ಬಹಳ ಕಠಿಣ. ನೀವು ಏನೇ ಹೇಳಿದರೂ ಇದು ಕಷ್ಟ" ಎಂದಿದ್ದರು ಹಾರ್ದಿಕ್ ಪಾಂಡ್ಯ.

ಇನ್ನು ಭಾನುವಾರ ಮಳೆಯಿಂದಾಗಿ ರದ್ದಾರ ಎರಡನೇ ಪಂದ್ಯದ ಆಡುವ ಬಳಗದಲ್ಲಿಯೂ ಸಂಜು ಸ್ಯಾಮ್ಸನ್‌ಗೆ ಅವಕಾಶ ದೊರೆತಿರಲಿಲ್ಲ. ಟಿ20 ಸರಣಿಯಲ್ಲಿ ಸಂಪೂತರ್ಣವಾಗಿ ಬೆಂಚ್ ಕಾದಿದ್ದ ಸಂಜು ಮೊದಲ ಏಕದಿನ ಪಂದ್ಯದಲ್ಲಿಯೂ ಆಡುವ ಬಳಗಕ್ಕೆ ಆಯ್ಕೆಯಾಗಿರಲಿಲ್ಲ. ಎರಡನೇ ಪಂದ್ಯದಲ್ಲಿಯಾದರೂ ಅವರಿಗೆ ಅವಕಾಶ ದೊರೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮತ್ತೆ ನಿರಾಸೆಯುಂಟಾಗುವ ನಿರ್ಧಾರವನ್ನು ಮ್ಯಾನೇಜ್‌ಮೆಂಟ್ ತೆಗೆದುಕೊಂಡಿತ್ತು. ಈ ಬಾರಿ ಸಂಜು ಸ್ಯಮಾ್ಸನ್ ಬದಲಿಗೆ ದೀಪಕ್ ಹೂಡಾಗೆ ಅವಕಾಶ ನೀಡಲಾಗಿತ್ತು. ಈ ಬಗ್ಗೆ ನಾಯಕ ಶಿಖರ್ ಧವನ್ ಕಾರಣವನ್ನು ನೀಡಿದ್ದರು.

ಎರಡನೇ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ಆಲ್‌ರೌಂಡರ್ ದೀಪಕ್ ಹೂಡಾಗೆ ಅವಕಾಶ ನೀಡಲಾಗಿತ್ತು. ಆರನೇ ಬೌಲಿಂಗ್ ಆಯ್ಕೆಯ ಅವಕಾಶಕ್ಕಾಗಿ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ಹಂಗಾಮಿ ನಾಯಕ ಶಿಖರ್ ಧವನ್ ಹೇಳಿಕೆ ನೀಡಿದ್ದು ತಮ್ಮ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಎರಡನೇ ಏಕದಿನ ಪಂದ್ಯ ಹ್ಯಾಮಿಲ್ಟನ್‌ನಲ್ಲಿ ಭಾನುವಾರ ಆಯೋಜನೆಯಾಗಿತ್ತು. ಆದರೆ ಕೇವಲ 12.5 ಓವರ್‌ಗಳ ಬ್ಯಾಟಿಂಗ್ ಮಾತ್ರವೇ ನಡೆದಿದ್ದು ಬಳಿಕ ಮಳೆ ಸುರಿಯಲು ಆರಂಭಿಸಿತ್ತು. ಹೀಗಾಗಿ ಈ ಪಂದ್ಯ ಮಳೆಗೆ ಆಹುತಿಯಾಗಿದ್ದು ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು.

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಆಡಮ್ ಮಿಲ್ನೆ, ಜೇಮ್ಸ್ ನೀಶಮ್

ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಬೆಂಚ್: ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್

Story first published: Monday, November 28, 2022, 8:26 [IST]
Other articles published on Nov 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X