IND vs ENG: ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಸಿಹಿ ಸುದ್ದಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಫೈನಲ್ ಪಂದ್ಯವು ಮೇ 25 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಐಪಿಎಲ್ 2025ರ ಟೂರ್ನಿ ಮುಗಿದ ನಂತರ, ಭಾರತ ತತಡಡವು ಜೂನ್‌ನಲ್ಲಿ ಬಹುನಿರೀಕ್ಷಿತ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾಗೆ ಒಂದು ಸಿಹಿ ಸುದ್ದಿ ಬಂದಿದೆ. ಟೀಮ್ ಇಂಡಿಯಾದ ಬ್ಯಾಟರ್‌ಗಳನ್ನು ಯಾವಾಗಲೂ ತಮ್ಮ ಮಾರಕ ಬೌಲಿಂಗ್‌ನಿಂದ ಕಾಡುತ್ತಿದ್ದ ಇಂಗ್ಲೆಂಡ್‌ನ ಬಲಗೈ ವೇಗದ ಬೌಲರ್ ಮಾರ್ಕ್ ವುಡ್ ಟೆಸ್ಟ್ ಸರಣಿಯನ್ನು ಆಡುವುದು ಕಷ್ಟಕರವಾಗಿದೆ.
ಎಡ ಮೊಣಕಾಲಿಗೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಮಾರ್ಕ್ ವುಡ್ ನಾಲ್ಕು ತಿಂಗಳ ಕಾಲ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ವೇಳೆ ಅವರು ಅಸ್ಥಿರಜ್ಜು ಗಾಯದಿಂದ ಬಳಲುತ್ತಿದ್ದರು.

ಮಾರ್ಕ್ ವುಡ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ಜೂನ್ 20 ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ಇದೆ. ಚಾಂಪಿಯನ್ಸ್ ಟ್ರೋಫಿ 2025 ರ ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್ ತಂಡದ ನಾಲ್ಕನೇ ಓವರ್‌ನಲ್ಲಿ ವುಡ್ ಎಡ ಮೊಣಕಾಲಿಗೆ ಗಾಯ ಮಾಡಿಕೊಂಡು ಮೈದಾನದಿಂದ ಹೊರಗುಳಿದಿದ್ದರು.
ಮಾರ್ಕ್ ವುಡ್ ಒಂದು ವರ್ಷಕ್ಕೂ ಹೆಚ್ಚು ಕಾಲ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಸಮಯದಲ್ಲಿ ಹೆಚ್ಚಿನ ಬಿಗಿತ ಮತ್ತು ಅಸ್ವಸ್ಥತೆಯನ್ನು ಅನುಭವಿಸಿದರು ಎಂದು ಇಸಿಬಿ ತಿಳಿಸಿದೆ. ವುಡ್ 2019 ರಲ್ಲಿಯೂ ಅದೇ ಮೊಣಕಾಲಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.
ಕಳೆದ ವರ್ಷದ ಆರಂಭದಿಂದ ಎಲ್ಲಾ ಸ್ವರೂಪಗಳಲ್ಲಿ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ ನಂತರ ನಾನು ಇಷ್ಟು ದೀರ್ಘ ಕಾಲ ಹೊರಗುಳಿದಿರುವುದು ನಿರಾಶೆ ತಂದಿದೆ. ಆದರೆ ನನ್ನ ಮೊಣಕಾಲಿನ ಸಮಸ್ಯೆ ಗುಣಮುಖವಾದ ನಂತರ ನಾನು ಸಂಪೂರ್ಣವಾಗಿ ಫಿಟ್ ಆಗುತ್ತೇನೆ ಎಂಬ ವಿಶ್ವಾಸ ನನಗಿದೆ ಎಂದು ವುಡ್ ಇಸಿಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯೂ ಜೂನ್ 20 ರಿಂದ ಶುರುವಾಗಲಿದೆ. ಕೊನೆಯ ಪಂದ್ಯ ಜುಲೈ 31 ರಂದು ಲಂಡನ್‌ನ ಓವಲ್‌ನಲ್ಲಿ ನಡೆಯಲಿದೆ. ವುಡ್ ಅವರ ಅನುಪಸ್ಥಿಯೂ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡಕ್ಕೆ ಹಿನ್ನಡೆ ತರಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications