ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾ ಟಿ20 ವಿಶ್ವಕಪ್ ಆಯೋಜಿಸಲಿವೆ. ಈ ಮೆಗಾ ಟೂರ್ನಿಗೆ ಎಲ್ಲ ದೇಶಗಳು ತಯಾರಿ ನಡೆಸಿವೆ. ತೆರೆಯ ಹಿಂದಿನ ಕಾರ್ಯಗಳು ಸಹ ಭರದಿಂದ ನಡೆದಿವೆ. ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸುತ್ತಿವೆ. ಈ ತಂಡಗಳನ್ನು 4 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಭಾರತ ಈ ಟೂರ್ನಿಯನ್ನು ಗೆಲ್ಲುವ ಹಾಟ್ ಫೇವರಿಟ್ ತಂಡಗಳಲ್ಲಿ ಒಂದಾಗಿದೆ. ಚುಟುಕು ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳು ಹೆಸರು ಮಾಡಿದ್ದಾರೆ. ಸಿಕ್ಕ ಅವಕಾಶವನ್ನು ಬ್ಯಾಟರ್‌ಗಳು ಅಬ್ಬರಿಸಿದ್ದಾರೆ.
ಟಿ20 ಕ್ರಿಕೆಟ್ ಅಂದರೆ ಹೊಡಿ ಬಡಿ ಆಟ. ಈ ಆಟದಲ್ಲಿ ಬ್ಯಾಟರ್‌ಗಳು ಬೌಂಡರಿ ಸಿಕ್ಸರ್‌ಗಳ ಸುರಿಮಳೆ ಸುರಿಸಿ ಅಬ್ಬರಿಸಿದ್ದಾರೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ವೇಗವಾಗಿ ಅರ್ಧಶತಕ ಬಾರಿಸಿದ ಟಾಪ್ 5 ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ.

ಟೀಮ್ ಇಂಡಿಯಾದ ಪರ ಆಡಿ ಅಬ್ಬರಿಸಿರುವ ಯುವರಾಜ್ ಸಿಂಗ್, ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಇವರು ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಆರ್ಭಟಿಸಿದ್ದರು. ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದರಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅವರಿಗೆ ಒಂದೇ ಓವರ್‌ನಲ್ಲಿ ಬಾರಿಸಿದ 6 ಸಿಕ್ಸರ್‌ಗಳು ಸಹ ಸೇರಿವೆ.
ಟಿ20 ವಿಶ್ವಕಪ್‌ನಲ್ಲಿ ನೆದರ್ಲ್ಯಾಂಡ್ಸ್ ಪರ ಸ್ಟೀಫನ್ ಮೈಬರ್ಗ್ 2014ರಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದರು. ಇವರು ಕೇವಲ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇವರ 3 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಅರ್ಧಶತಕ ಬಾರಿಸಿದರು. ಇವರ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 4 ಬೌಂಡರಿ, 7 ಸಿಕ್ಸರ್ ನೆರವಿನಿಂದ 63 ರನ್ ಬಾರಿಸಿದರು. ಇವರ ಈ ಆರ್ಭಟದ ಇನಿಂಗ್ಸ್ ಐರ್ಲೆಂಡ್ ವಿರುದ್ಧ ಮೂಡಿ ಬಂದಿತ್ತು.
ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಸಹ ವೇಗವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಮಾರ್ಕಸ್ ಸ್ಟೋಯ್ನಿಸ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸ್ಟೋಯ್ನಿಸ್ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇವರ ಉತ್ತಮ ಆಟದ ನೆರವಿನಿಂದ ಆಸೀಸ್ ಭರ್ಜರಿ ಜಯ ದಾಖಲಿಸಿತ್ತು. ಇವರ ಇನಿಂಗ್ಸ್‌ನಲ್ಲಿ 4 ಬೌಂಡರಿ, 6 ಸಿಕ್ಸರ್‌ಗಳು ಸೇರಿವೆ.
ಟಿ20 ವಿಶ್ವಕಪ್‌ನಲ್ಲಿ ವೇಗವಾಗಿ ಅರ್ಧಶತಕ ಬಾರಿಸಿದ ನಾಲ್ಕನೇ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್. ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ 2014ರಲ್ಲಿ ಪಾಕಿಸ್ತಾನದ ವಿರುದ್ಧ ಅಬ್ಬರದ ಬ್ಯಾಟಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 191 ರನ್ ಸೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 175 ರನ್‌ಗಳಿಗೆ ಅಲೌಟ್ ಆಯಿತು. ಆದರೆ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇವರು ಈ ಇನಿಂಗ್ಸ್‌ನಲ್ಲಿ ಕೇವಲ 33 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್ ಸಹಾಯದಿಂದ 74 ರನ್ ಮಿಂಚಿದರು.
ಚುಟುಕು ವಿಶ್ವಕಪ್‌ನಲ್ಲಿ ವೇಗವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೂ ಸ್ಥಾನ. ಇವರು 2021ರ ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ವಿರುದ್ಧ 19 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 50 ರನ್ ಬಾರಿಸಿ ಔಟ್ ಆಗಿದ್ದರು. ಇವರು ಸಹ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.