ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 18ನೇ ಸೀಸನ್‌ಗೆ ಕಾಲಿಟ್ಟಿದೆ. ಐಪಿಎಲ್‌ನಲ್ಲಿ ಹಲವು ವರ್ಷಗಳಿಂದ ಆಡುತ್ತಿರುವ ಆಟಗಾರರಿದ್ದಾರೆ. ಮೆಗಾ ಲೀಗ್‌ನಲ್ಲಿ ಈ ಸ್ಟಾರ್ ಆಟಗಾರರು ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಈ ಆಟಗಾರರು ಮೈದಾನಕ್ಕಿಳಿದು ದಾಖಲೆಗಳನ್ನು ಮಾಡಿದ್ದಾರೆ. ಕಡಿಮೆ ಎಸೆತಗಳಲ್ಲಿ ಬಿರುಸಿನ ಅರ್ಧಶತಕ ಸಿಡಿಸಿ ದಾಖಲೆಯನ್ನೂ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಟಾಪ್-8 ಆಟಗಾರರಿದ್ದಾರೆ. ಈ ಆಟಗಾರರ ಕುರಿತು ಮಾಹಿತಿ ಇಲ್ಲಿದೆ.
ರಾಜಸ್ಥಾನ ರಾಯಲ್ಸ್ ಪರ ಆಡುವ ಯಶಸ್ವಿ ಜೈಸ್ವಾಲ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಸ್ಟಾರ್ ಎಡಗೈ ಬ್ಯಾಟರ್ ಆಗಿರುವ ಜೈಸ್ವಾಲ್ ಮೇ 11, 2023 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಐಪಿಎಲ್ 2025ರಲ್ಲಿಯೂ ಜೈಸ್ವಾಲ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಜಿ ನಾಯಕ ಕೆಎಲ್ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ 50 ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದರು. 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಬಾರಿ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ.
ಐಪಿಎಲ್ 2022ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಆಡುವಾಗ ಪ್ಯಾಟ್ ಕಮ್ಮಿನ್ಸ್ ಮೂರನೇ ವೇಗದ ಅರ್ಧಶತಕ ಸಿಡಿಸಿದ್ದರು. ಪ್ಯಾಟ್ ಕಮ್ಮಿನ್ಸ್ 14 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಸದ್ಯ ಪ್ಯಾಟ್ ಕಮ್ಮಿನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದಾರೆ.
ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024 ರ 25 ನೇ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಇಶಾನ್ ಕಿಶನ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಮುಂಬೈ ಪರ ಆಡಿದ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದಾರೆ.
ಮಾರ್ಚ್ 27, 2024 ರಂದು ಹೈದರಾಬಾದ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಆಟಗಾರ ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
ಐಪಿಎಲ್ 2024ರ 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 17 ಎಸೆತಗಳಲ್ಲಿ 52 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಿಂದಾಗಿ ಮುಂಬೈ ತಂಡ ಗೆಲುವು ಸಾಧಿಸಿತ್ತು.
ಐಪಿಎಲ್ 2014 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದ ಭಾರತದ ಮಾಜಿ ಬ್ಯಾಟರ್ ಯೂಸುಫ್ ಪಠಾಣ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಅಮೋಘ ಇನ್ನಿಂಗ್ಸ್ ಆಡಿದ ಯೂಸುಫ್ ಪಠಾಣ್ ಪಂದ್ಯದ ಹೀರೋ ಎನಿಸಿಕೊಂಡಿದ್ದರು.
ಐಪಿಎಲ್ 2017 ರಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಸುನಿಲ್ ನರೈನ್ ಬಿರುಸಿನ ಅರ್ಧಶತಕ ಸಿಡಿಸಿದ್ದಾರೆ. ನರೈನ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.