Mohammed Shami: ಆಸ್ಟ್ರೇಲಿಯಾಕ್ಕೆ ಶುರುವಾಯ್ತ ಢವಢವ!
ಪ್ರಸ್ತುತ ಭಾರತ ಟೆಸ್ಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಪರ್ತ್‌ನಲ್ಲಿ ನವೆಂಬರ್ 22 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ತಂಡ ಈಗಾಗಲೇ ಪ್ರಕಟವಾಗಿದೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಬಿಸಿಸಿಐ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಮಧ್ಯಪ್ರದೇಶ ಮತ್ತು ಬಂಗಾಳ ತಂಡಗಳು ಮುಖಾಮುಖಿಯಾಗಿವೆ. ಬಂಗಾಳದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಶಮಿ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಶಿಸ್ತುಬದ್ಧ ಬೌಲಿಂಗ್ ಪ್ರದರ್ಶನ ನೀಡಿದ ಶಮಿ ಮಧ್ಯಪ್ರದೇಶ ಬ್ಯಾಟರ್‌ಗಳನ್ನು ಕಟ್ಟಿ ಹಾಕಿದ್ದಾರೆ. ಮೊಹಮ್ಮದ್ ಶಮಿ 19 ಓವರ್ ಗಳಲ್ಲಿ 54 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 228 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಮಧ್ಯಪ್ರದೇಶ ತಂಡ ಬಂಗಾಳ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ ಮಧ್ಯಪ್ರದೇಶ 167 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಂಗಾಳ 5 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದ್ದು, 231 ರನ್ ಮುನ್ನಡೆ ಸಾಧಿಸಿದೆ.
ಆಸ್ಟ್ರೇಲಿಯಾಕ್ಕೆ ಢವಢವ!
ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್ ಮೈದಾನಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ 360 ದಿನಗಳ ನಂತರ ಅದ್ಭುತ ಪುನರಾಗಮನ ಮಾಡಿರುವ ಶಮಿ ರಣಜಿ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಮಧ್ಯಪ್ರದೇಶದ ನಾಯಕ ಶುಭಂ ಶರ್ಮಾ ಮತ್ತು ಕೆಳ ಕ್ರಮಾಂಕದ ಬ್ಯಾಟರ್‌ಗಳಾದ ಸರನ್ಶ್ ಜೈನ್ ಮತ್ತು ಕುಮಾರ್ ಕಾರ್ತಿಕೇಯ ಅವರ ವಿಕೆಟ್‌ಗಳನ್ನು ಶಮಿ ಕಬಳಿಸಿದ್ದಾರೆ. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಶಮಿ ಅವರು ಆಸ್ಟ್ರೇಲಿಯಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆಯುವ ಸಾಧ್ಯತೆಯಿದೆ. ಅಲ್ಲದೆ ಶಮಿ ಪ್ರದರ್ಶನ ಗಮನಿಸಿರುವ ಆಸ್ಟ್ರೇಲಿಯಾಕ್ಕೆ ಢವಢವ ಹೆಚ್ಚಾಗಿದೆ.
ಮೊಹಮ್ಮದ್ ಶಮಿ ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ ಮೂಲಕ
ಮೈದಾನಕ್ಕೆ ಮರಳುವ ನಿರೀಕ್ಷೆ ಇತ್ತು. ಆದರೆ, ಅವರ ಮೊಣಕಾಲು ಊದಿಕೊಂಡಿತು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಆಡುವ ಅವಕಾಶ ಕಳೆದುಕೊಳ್ಳಬೇಕಾಯಿತು. ಇದೀಗ ರಣಜಿ ಟ್ರೋಫಿಯಲ್ಲಿ ಮಿಂಚು ಹರಿಸಿರುವ ಶಮಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಕೆಲವು ಪಂದ್ಯಗಳಿಗೆ ಆಯ್ಕೆಯಾಬಹುದು.
ಕೆಲವು ಮಾಧ್ಯಮ ವರದಿಗಳ ಪ್ರಕಾರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಶಮಿ ಗಾಯದ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications