Team India: ಗೌತಮ್ ಗಂಭೀರ್ ಕೋಚಿಂಗ್‌ನಲ್ಲಿ ಭಾರತದ 15 ಅನಗತ್ಯ ದಾಖಲೆಗಳು
ಭಾರತ ಕ್ರಿಕೆಟ್ ತಂಡವು 2024ರ ವರ್ಷವನ್ನು ಉತ್ತಮ ಶೈಲಿಯಲ್ಲಿ ಪ್ರಾರಂಭಿಸಿತು. ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನು 4-1 ರಿಂದ ಗೆದ್ದುಕೊಂಡಿತ್ತು. ಆ ಬಳಿಕ ಅಮೆರಿಕಾ-ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತು. ಈ ಮೂಲಕ ಭಾರತ 11 ವರ್ಷಗಳ ಬಳಿಕ ಐಸಿಸಿ ಟೂರ್ನಿಯನ್ನು ಗೆದ್ದಿತ್ತು. ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಗೆಲ್ಲುವರೆಗೂ ಟೀಮ್ ಇಂಡಿಯಾದ ಕೋಚ್ ಆಗಿದ್ದರು. ಆ ನಂತರ ಈ ಜವಾಬ್ದಾರಿ ಗೌತಮ್ ಗಂಭೀರ್ ವಹಿಸಿಕೊಂಡರು
ಗೌತಮ್ ಗಂಭೀರ್ ಕೋಚ್ ಆದ ತಕ್ಷಣ ಟೀಮ್ ಇಂಡಿಯಾದ ಕಾಲವೇ ಬದಲಾಗಿದೆ. ವರ್ಷದ ಆರಂಭದಲ್ಲಿ ಸದೃಢವಾಗಿ ಕಾಣುತ್ತಿದ್ದ ಭಾರತ ತಂಡದ ಪ್ರದರ್ಶನ ದಿಢೀರ್ ಕುಸಿದೆ. ಗಂಭೀರ್ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾಗೆ ತವರಿನಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸೋಲಿನ ಗಾಯವಾಗಿದೆ. ಅವರ ಅಧಿಕಾರಾವಧಿಯಲ್ಲಿ ಹಲವು ಬೇಡವಾದ ದಾಖಲೆಗಳು ಸೃಷ್ಟಿಯಾಗಿವೆ. ಈ ಕುರಿತು ಇಲ್ಲಿದೆ ಮಾಹಿತಿ.

ಗಂಭೀರ್ ಕೋಚಿಂಗ್ ಅಡಿಯಲ್ಲಿ ಟೀಮ್ ಇಂಡಿಯಾ ಇಲ್ಲಿವರೆಗೆ 10 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 3 ರಲ್ಲಿ ಗೆದ್ದು, 6 ರಲ್ಲಿ ಸೋಲು ಕಂಡರೆ, ಒಂದು ಪಂದ್ಯ ಡ್ರಾ ಆಗಿದೆ. ಇನ್ನೂ ಆಡಿದ ಮೂರು ಏಕದಿನ ಪಂದ್ಯಗಳನ್ನು ಭಾರತ ಸೋತಿದೆ. ವಿಶೇಷವೆನೆಂದರೆ ಭಾರತ ಗಂಭೀರ್ ಕೋಚಿಂಗ್‌ನಲ್ಲಿ ಆಡಿರುವ 6 ಟಿ20 ಪಂದ್ಯಗಳನ್ನು ಗೆದ್ದು ತನ್ನ ಪ್ರಾಬಲ್ಯ ಉಳಿಸಿಕೊಂಡಿದೆ.
ಅನಗತ್ಯ 15 ದಾಖಲೆಗಳು
- ಭಾರತ ತಂಡವು 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಸೋತಿದೆ.
- ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯಲ್ಲಿ 30 ವಿಕೆಟ್‌ಗಳನ್ನು ಕಳೆದುಕೊಂಡು ದಾಖಲೆ ಮಾಡಿದೆ. ಶ್ರೀಲಂಕಾ ವಿರುದ್ಧದ ಆಡಿದ ಎಲ್ಲಾ ಮೂರು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಲೌಟ್ ಆಗಿತ್ತು.
- ಭಾರತ 45 ವರ್ಷಗಳ ನಂತರ ಕ್ಯಾಲೆಂಡರ್ ವರ್ಷದಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಶ್ರೀಲಂಕಾ ವಿರುದ್ಧ ಮಾತ್ರ ಮೂರು ಏಕದಿನ ಪಂದ್ಯಗಳನ್ನು ಆಡಲಾಗಿತ್ತು.
- ತವರಿನಲ್ಲಿ 36 ವರ್ಷಗಳ ನಂತರ ನ್ಯೂಜಿಲೆಂಡ್ ವಿರುದ್ಧ ಭಾರತ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತ್ತು.
- ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಭಾರತ ಸೋಲು ಕಂಡಿತ್ತು. ಇದೊಂದಿಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19 ವರ್ಷಗಳ ನಂತರ ಭಾರತ ಮೊದಲ ಬಾರಿಗೆ ಸೋಲು ಅನುಭವಿಸಬೇಕಾಯಿತು.
- ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 46 ರನ್‌ಗಳಿಗೆ ಆಲೌಟಾಗಿತ್ತು. ತವರು ನೆಲದಲ್ಲಿ ಮೊದಲ ಬಾರಿಗೆ ಟೀಮ್ ಇಂಡಿಯಾ 50 ರನ್‌ಗಳ ಕೆಳಗೆ ಸರ್ವಪತನವಾಗಿತ್ತು.
- ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಭಾರತ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತ್ತು. ಸತತ 3 ಪಂದ್ಯಗಳಲ್ಲಿ ಸೋಲು ಎದುರಿಸಬೇಕಾಯಿತು.
- ಭಾರತ ತಂಡ 12 ವರ್ಷಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿತ್ತು. 2012ರಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ 4-ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಸೋಲನುಭವಿಸಿತ್ತು.
- ಭಾರತ ತಂಡ 12 ವರ್ಷಗಳ ನಂತರ ತವರು ನೆಲದಲ್ಲಿ ಸತತ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತಿದೆ. ಇದು ಕೊನೆಯ ಬಾರಿಗೆ 2012 ರಲ್ಲಿ ನಡೆದಿತ್ತು. ಆಗ ಮುಂಬೈ ಮತ್ತು ಕೋಲ್ಕತ್ತಾ ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ ಸೋಲಿಸಿತ್ತು.
- ಮುಂಬೈನಲ್ಲಿ ಕಳೆದ 12 ವರ್ಷಗಳ ಟೀಮ್ ಇಂಡಿಯಾ ಸೋಲು ಕಂಡಿರಲಿಲ್ಲ. ಆದರೆ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿತ್ತು
- 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ತವರಿನಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಪಡೆಯುವುದು ಇದೇ ಮೊದಲು. ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಎಲ್ಲಾ ಮೂರು ಪಂದ್ಯಗಳಲ್ಲಿ ಸೋಲು ಎದುರಿಸಿತ್ತು.
- ಭಾರತವು ಮೆಲ್ಬೋರ್ನ್ ಮೈದಾನದಲ್ಲಿ 13 ವರ್ಷಗಳ ನಂತರ ಟೆಸ್ಟ್ ಪಂದ್ಯವನ್ನು ಸೋತಿತು. ಕಳೆದ ಬಾರಿ 2011ರಲ್ಲಿ ಇದೇ ಮೈದಾನದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಪಂದ್ಯ ಸೋತಿತ್ತು.
- ಸಿಡ್ನಿಯಲ್ಲಿ ಆಡಿದ ಐದನೇ ಟೆಸ್ಟ್‌ನಲ್ಲಿ ಸೋತ ನಂತರ ಟೀಮ್ ಇಂಡಿಯಾ ಅನಗತ್ಯ ದಾಖಲೆ ಮಾಡಿದೆ. ಈ ಮೂಲಕ 10 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಸೋತಿದೆ.
- ಆಸ್ಟ್ರೇಲಿಯಾ ವಿರುದ್ಧ 12 ವರ್ಷಗಳ ಬಳಿಕ ಒಂದು ಸರಣಿಯ ಮೂರು ಪಂದ್ಯಗಳಲ್ಲಿ ಭಾರತ ಸೋಲುಗಳನ್ನು ಎದುರಿಸಿದೆ. ಈ ಬಾರಿ ಅಡಿಲೇಡ್ ನಂತರ ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ತಂಡ ಸೋತಿದೆ.
ಸಿಡ್ನಿಯಲ್ಲಿ ನಡೆದ ಟೆಸ್ಟ್‌ನಲ್ಲಿ ಸೋತ ನಂತರ ಭಾರತ ತಂಡವು ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2025ರ ಫೈನಲ್ ತಲುಪಲು ಸಾಧ್ಯವಾಗಲಿಲ್ಲ. ಭಾರತ ಕಳೆದ ಎರಡು ಆವೃತ್ತಗಳಲ್ಲಿ ಫೈನಲ್ ಆಡಿತ್ತು. ಇದೀಗ ಮೂರನೇ ಬಾರಿ ಫೈನಲ್ ರೇಸ್‌ನಿಂದ ಹೊರಗುಳಿದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications