PAK vs SL: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುವುದು ಯಾರು?
ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಆಡಿರುವ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಮಂಗಳವಾರ ಕಾದಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಫೈನಲ್ ಪ್ರವೇಶಿಸುವ ಆಸೆ ಜೀವಂತವಾಗಿರುತ್ತದೆ. ಶ್ರೀಲಂಕಾ ಲೀಗ್ ಹಂತದಲ್ಲಿ ತಾನಾಡೀದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಸೂಪರ್ 4 ಹಂತದಲ್ಲಿ ಬಾಂಗ್ಲಾ ವಿರುದ್ಧ ಸೋಲು ಕಂಡಿತ್ತು. ಇತ್ತ ಪಾಕ್ ಸಹ ತಾನಾಡಿದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 6 ವಿಕೆಟ್ ಸೋಲು ಕಂಡಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದೆ.
ಅಬುದಾಬಿ ಅಂಗಳದಲ್ಲಿ ನಡೆಯಲಿರುವ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಶ್ರೀಲಂಕಾ ತಂಡ ಸದ್ಯ ಭರ್ಜರಿ ಪ್ರದರ್ಶನ ನೀಡುತ್ತಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಮಬಲದ ಪ್ರದರ್ಶನ ನೀಡುತ್ತಿರುವ ಲಂಕಾ, ಗೆಲುವಿನ ಕನಸು ಕಾಣುತ್ತಿದೆ. ಇನ್ನು ಪಾಕ್ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಫೈನಲ್ ಪ್ರವೇಶಿಸುವ ಅವಕಾಶವನ್ನು ಜೀವಂತವಾಗಿರಿಸಿಕೊಳ್ಳಲು ಜಯದ ಅನಿವಾರ್ಯತೆ ಇದೆ. ಉಭಯ ತಂಡದಲ್ಲೂ ಸ್ಟಾರ್ ಆಟಗಾರರು ಇದ್ದು ಕುತೂಹಲ ಮನೆ ಮಾಡಿದೆ.

ಶ್ರೀಲಂಕಾ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಆಗಿದ್ದರಿಂದ ಈ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯವಾಗಿದೆ. ಈ ಪಂದ್ಯಕ್ಕಾಗಿ ಲಂಕಾ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್‌ನಲ್ಲಿ ಸೋಲು ಕಂಡಿದ್ದ ಲಂಕಾ, ಗೆಲುವಿನ ಟ್ರ್ಯಾಕ್‌ಗೆ ಮರಳಲು ಬೇಕಾದ ತಯಾರಿ ನಡೆಸಿದೆ. ಮಹತ್ವದ ಪಂದ್ಯಕ್ಕೆ ಲಂಕಾ ತಂಡದಲ್ಲಿ ಮಥಿಸಾ ಪತಿರಾನ ಅಥವಾ ಮಹೇಶ್ ತೀಕ್ಷಣ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಶ್ರೀಲಂಕಾದ ಸಂಭಾವ್ಯ ತಂಡ: ಪಾತುಮ್ ನಿಸ್ಸಂಕಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಲ್ ಮಿಶಾರ, ಕುಸಲ್ ಪೆರೆರಾ, ಚರಿತ್ ಅಸಲಂಕಾ (ನಾಯಕ), ದಾಸುನ್ ಶನಕ, ಕಮಿಂಡು ಮೆಂಡಿಸ್, ವನಿಂದು ಹಸರಂಗ, ಮಥಿಸಾ ಪತಿರಾನ/ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ನುವಾನ್ ತುಷಾರ
ಪಾಕ್ ತಂಡದಲ್ಲಿ ಬದಲಾವಣೆ?
ಭಾರತದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಪಾಕ್ ತಂಡದಲ್ಲೂ ಬದಲಾವಣೆ ಹೆಚ್ಚಾಗಿದೆ. ಪಾಕ್ ತಂಡದ ಪರ ಸಾಹಿಬ್‌ಜಾದಾ ಫರ್ಹಾನ್ ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಈ ಸರಣಿಯಲ್ಲಿ ಫರ್ಹಾನ್ ಅಮೋಘ ಪ್ರದರ್ಶನ ನೀಡಿದ್ದು, 132 ರನ್ ಸಿಡಿಸಿದ್ದಾರೆ. ಇನ್ನು ಪಾಕ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಹುಸೇನ್ ತಲಾತ್ ಲಂಕಾ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶ ವಂಚಿತರಾಗಬಹುದು.

ಪಾಕಿಸ್ತಾನದ ಸಂಭಾವ್ಯ ತಂಡ: ಸೈಮ್ ಅಯೂಬ್, ಸಾಹಿಬ್‌ಜಾದಾ ಫರ್ಹಾನ್, ಫಖರ್ ಜಮಾನ್, ಸಲ್ಮಾನ್ ಆಘಾ (ನಾಯಕ), ಹಸನ್ ನವಾಜ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications