Finn Allen ಆಟ ಕಂಡು ಐಪಿಎಲ್‌ನಲ್ಲಿ ಈ ತಂಡದ ಫ್ಯಾನ್ಸ್ ಫುಲ್ ಖುಷ್..
ಟಿ20 ವಿಶ್ವಕಪ್ ಅಂತಿಮ ಘಟ್ಟದತ್ತ ಮುಖಮಾಡಿದೆ. ಈಗಾಗಲೇ ನ್ಯೂಜಿಲೆಂಡ್ ತಂಡ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರ ಸ್ಪೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದವರು, ಆರಂಭಿಕ ಆಟಗಾರ ಫಿನ್ ಅಲೆನ್.
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯದಲ್ಲಿ 170 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಏಕ ಪಕ್ಷೀಯ ಜಯ ಸಾಧಿಸಿತು. ಈ ವೇಳೆ ನ್ಯೂಜಿಲೆಂಡ್ ತಂಡದ ಆರಂಭಿಕರಾದ ಟೀಮ್ ಸಿಫರ್ಟ್ ಹಾಗೂ ಫಿನ್ ಅಲೆನ್ ಅವರು ಅಮೋಘ ಜೊತೆಯಾದ ಕಾಣಿಕೆ ನೀಡಿ ತಂಡಕ್ಕೆ ಆಧಾರವಾದರು. ಈ ವೇಳೆ ಫಿನ್ ಅಲೆನ್ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಕೋಲ್ಕತ್ತಾದಲ್ಲಿ ಅಲೆನ್ ಬ್ಯಾಟಿಂಗ್ ನೋಡಿದ ಕೋಲ್ಕತ್ತಾದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಸದ್ಯ ನ್ಯೂಜಿಲೆಂಡ್ ತಂಡದ ಪರ ಆರಂಭಿಕರಾಗಿ ಕಾಣಿಸಿಕೊಂಡಿರುವ ಫಿನ್ ಅಲೆನ್ ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರಿಸಿದರು. ಇವರು ಕೇವಲ 33 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್ ಸಹಾಯದಿಂದ ಅಜೇಯ 100 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಫಿನ್ ಅಲೆನ್ ಟಿ20 ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಐಪಿಎಲ್‌ನಲ್ಲಿ ಯಾವ ತಂಡದ ಪರ ಅಲೆನ್ ಆಡುತ್ತಾರೆ?
ಈಗ ಅಭಿಮಾನಿಗಳಲ್ಲಿ ಮೂಡಿರುವ ಪ್ರಶ್ನೆ ಎಂದರೆ ಫಿನ್ ಅಲೆನ್ ಯಾವ ತಂಡದ ಪರ ಐಪಿಎಲ್‌ನಲ್ಲಿ ಆಡುತ್ತಾರೆ ಎಂದು? ಇದೇ ತಿಂಗಳ ಕೊನೆಯಲ್ಲಿ ಭಾರತದಲ್ಲಿ ಮತ್ತೆ ಐಪಿಎಲ್ ಆರಂಭವಾಗಲಿದೆ. ಫಿನ್ ಅಲೆನ್ ಸಹ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಆಡುವುದನ್ನು ಅಭಿಮಾನಿಗಳು ನೋಡಬಹುದಾಗಿದೆ. ಇವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. ಕಳೆದ ವರ್ಷದ ಅಂತ್ಯದಲ್ಲಿ ಅಬುಧಾಬಿಯಲ್ಲಿ ನಡೆದಿದ್ದ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫಿನ್ ಅಲೆನ್ ಅವರಿಗೆ 2 ಕೋಟಿ ರೂ. ನೀಡಿ ಖರೀದಿಸಿದೆ.
ಫಿನ್ ಅಲೆನ್ ಸಾಧನೆ
ಫಿನ್ ಅಲೆನ್ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡಲು ತಯಾರಾಗಿದ್ದಾರೆ. ಇವರ ಅನುಭವವನ್ನು ಬಳಸಿಕೊಳ್ಳಲು ಕೆಕೆಆರ್ ತಂಡ ತಯಾರಾಗಿದೆ. 26 ವರ್ಷದ ಫಿನ್ ಅಲೆನ್ ಅಂತಾರಾಷ್ಟ್ರೀಯ 20 ಕ್ರಿಕೆಟ್ ಟೂರ್ನಿಯಲ್ಲಿ ಅಬ್ಬರಿಸಿದ್ದಾರೆ. ಇವರು ಈಗಾಗಲೇ ನ್ಯೂಜಿಲೆಂಡ್ ಪರ 61 ಪಂದ್ಯಗಳನ್ನು ಆಡಿದ್ದು, 29ರ ಸರಾಸರಿಯಲ್ಲಿ 1654 ರನ್ ಸಿಡಿಸಿದ್ದಾರೆ. ಈ ವೇಳೆ 3 ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಫಿನ್ ಅಲೆನ್ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲೇ ಶತಕ ಬಾರಿಸಿದ್ದರಿಂದಲೇ ಅಲ್ಲಿ ನೆರೆದಿದ್ದ ಅಭಿಮಾನಿಗಳು ಡಬಲ್ ಖುಷ್ ಆಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications