ಭಾರತ ವಿರುದ್ಧ ಪಾಕಿಸ್ತಾನ ತಂಡದ ಗೆಲುವನ್ನ ಸಂಭಮಿಸಿದ್ದ ಮೂವರ ವಿರುದ್ಧ FIR: ಕೋಲಾರದಲ್ಲಿ ಒರ್ವನ ಬಂಧನ

ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2022ರ ಸೂಪರ್ 4 ಹಂತದಲ್ಲಿ ಸತತ ಎರಡು ಪಂದ್ಯಗಳನ್ನ ಸೋಲುವ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಕನಸನ್ನು ಕೈ ಬಿಟ್ಟಿತು. ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಮೋಘ ಗೆಲುವು ಸಾಧಿಸಿ ಟೂರ್ನಿಯಿಂದ ನಿರ್ಗಮಿಸಿತು.
ಸೂಪರ್ 4 ಹಂತದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನ್ನ ಕಾಣುವ ಮೂಲಕ ರೋಹಿತ್ ಶರ್ಮಾ ಪಡೆ ಹಿನ್ನಡೆ ಅನುಭವಿಸಿತು. ಈ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಸೋಲನ್ನ ಸಂಭ್ರಮಿಸಿದ್ದ ಕೋಲಾರದ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಬೆಂಬಲಿಸಿ ಪೋಸ್ಟ್‌ಗಳನ್ನು ಮತ್ತು ವಾಟ್ಸಾಪ್ ಸ್ಟೇಟಸ್‌ನಲ್ಲಿ ಪಠ್ಯಗಳನ್ನ ಹಾಕಿಕೊಂಡಿದ್ದ ಮೂವರ ವಿರುದ್ಧ ಕೇಸ್ ದಾಖಲಾಗಿದೆ.
ವೆಂಕಟೇಶಪ್ಪ ನೀಡಿದ ಆಧಾರದ ಮೇಲೆ ಕೋಲಾರ ಮೂಲದ ಸುಹೇಲ್, ತೌಹಿದ್ ಮತ್ತು ಮನ್ಸೂರ್ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಇನ್ನು ಎರಡು ಮಂದಿ ತಲೆಮರೆಸಿಕೊಂಡಿದ್ದಾರೆ.
ಕಳೆದ ಭಾನುವಾರ (ಸೆ. 4) ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಐದು ವಿಕೆಟ್‌ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿರಾಟ್ ಕೊಹ್ಲಿ 60 ರನ್‌ಗಳ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 181 ರನ್ ದಾಖಲಿಸಿತು. ಟೀಂ ಇಂಡಿಯಾ ನೀಡಿದ್ದ 182 ರನ್ ಗುರಿಯನ್ನ ಯಶಸ್ವಿಯಾಗಿ ಬೆನ್ನಟ್ಟಿದ ಪಾಕಿಸ್ತಾನ ಇನ್ನೊಂದು ಎಸೆತ ಬಾಕಿ ಇರುವಂತೆ ಐದು ವಿಕೆಟ್‌ಗಳ ಗೆಲುವು ಸಾಧಿಸಿತು. ಪಾಕ್ ಪರ ಮೊಹಮ್ಮದ್ ರಿಜ್ವಾನ್ 72, ಮೊಹಮ್ಮದ್ ನವಾಜ್ 42 ರನ್ ಗಳಿಸಿದರು.
ಪಾಕಿಸ್ತಾನ ಕ್ರಿಕೆಟ್ ತಂಡವು ಈಗಾಗಲೇ ಏಷ್ಯಾಕಪ್ ಫೈನಲ್ ತಲುಪಿದ್ದು, ಭಾನುವಾರ (ಸೆ.11) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನ ಎದುರಿಸಲಿದೆ. ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯದಲ್ಲಿ ಪಾಕ್ ಸೋಲನ್ನ ಕಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications