11 ಜನರ ಸಾವು: RCB ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಎಫ್‌ಐಆರ್ ದಾಖಲಾಗಿದೆ. ಆರ್‌ಸಿಬಿ, ಕಾರ್ಯಕ್ರಮ ಆಯೋಜಿಸಿದ್ದ ಡಿಎನ್‌ಎ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಡಳಿತ ಮಂಡಳಿಯ ವಿರುದ್ಧ ಕಬ್ಬನ್ನಪಾರ್ಕ ಪೋಲಿಸ್ ಠಾಣೆಯಲ್ಲಿ ಪ್ರಥಮ ಎಫ್‌ಐಆರ್ ದಾಖಲಿಸಲಾಗಿದೆ.
ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಖಂಡಿಸಿ ವಿರೋಧ ಪಕ್ಷಗಳು ಸಹ ಸರ್ಕಾರದ ವಿರುದ್ಧ ಧ್ವನಿ ಎತ್ತಿವೆ. ಈಗ ಈ ಕಾರ್ಯಕ್ರಮದ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಂಗಳವಾರ ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ್ದ ಆರ್‌ಸಿಬಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಇತ್ತ ಬೆಂಗಳೂರಿನ ರಸ್ತೆಗಳಲ್ಲಿ ಜನ ರಸ್ತೆಗಿಳಿದು ಸಂಭ್ರಮಿಸಿದರು. ಬುಧವಾರ ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಬರುತ್ತಿದ್ದಂತೆ ಅವರ ಸಾಧನೆಗೆ ತಕ್ಕ ಗೌರವವನ್ನು ನೀಡಲು ಕೆಎಸ್‌ಸಿಎ, ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದ್ದವು. ಆದರೆ ಈ ವೇಳೆ ದುರ್ಘಟನೆ ನಡೆದಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಎಷ್ಟು ಜನರು ಕುಳಿತುಕೊಳ್ಳವು ಸಾಮರ್ಥ್ಯ ಇದೆಯೋ, ಅದಕ್ಕಿಂತ ಹೆಚ್ಚು ಜನ ಜಮಾಯಿಸಿದ್ದರು, ಚಿನ್ನಸ್ವಾಮಿ ಕ್ರೀಡಾಂಗಣದ 21 ಗೇಟ್‌ಗಳಲ್ಲೂ ನೂಕುನುಗ್ಗಲು ಆಗಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ವಿಫಲರಾದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಕಾಲ್ತುಳಿತ ನಡೆಯಿತು. ಈ ವೇಳೆ 11 ಜನರು ಸಾವನ್ನಪ್ಪಿದರು.
ನೋ ರಿಯಾಕ್ಷನ್
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಪತ್ರಕತ್ರರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳಿಗೆ ಈ ಬಗ್ಗೆ ಪ್ರಶ್ನೆಗಳು ಕೇಳಿದ್ರು. ಆದರೆ ಅಧಿಕಾರಿ ತುಟಿ ಸಹ ಬಿಚ್ಚಲಿಲ್ಲ. ಕೆಎಸ್‌ಸಿಎ ಈ ನಡೆಯ ವಿರುದ್ಧವೂ ಈಗ ಆಕ್ರೋಶದ ಕೂಗು ಕೇಳಿ ಬರುತ್ತಿದೆ. 11 ಜನ ಸಾವನ್ನಪ್ಪಿದ್ರೂ ಸಹ ಈ ದುರ್ಘಟನೆಯ ಬಗ್ಗೆ ಕೆಎಸ್‌ಸಿಎ ಅಧಿಕಾರಿಗಳು ಜವಾಬ್ದಾರಿಯುತ ಸ್ಥಾನದಲ್ಲಿದ್ದರೂ, ನುಳುಚಿಕೊಳ್ಳುತ್ತಿದ್ದಾರೆ.
ಹೈಕೋರ್ಟ್‌ನಲ್ಲಿ ವಿಚಾರಣೆ
ಬುಧವಾರ ನಡೆದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ನಡೆದಿದ್ದ 11 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೈಕೋರ್ಟ್ ಪಿಐಎಲ್ ದಾಖಲಾಗಿದೆ. ಈ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಕೋರ್ಟ್ ದುರ್ಘಟನೆಗೆ ಕಾರಣ ಏನು ಎಂದು ಕೇಳಿದೆ. ಅಲ್ಲದೆ ಘಟನೆಯ ವೇಳೆ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತಾ ಎಂಬ ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸಿದ ಕೋರ್ಟ್, ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications