For Quick Alerts
ALLOW NOTIFICATIONS  
For Daily Alerts
 

147 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು; ಯಶಸ್ವಿ ಜೈಸ್ವಾಲ್ ದ್ವಿಶತಕದಾಟಕ್ಕೆ ಹಳೆಯ ದಾಖಲೆಗಳೆಲ್ಲಾ ಧೂಳಿಪಟ!

ಭಾನುವಾರ, ಫೆಬ್ರವರಿ 18ರಂದು ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂರನೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಗೆಲುವಿನತ್ತ ದಾಪುಗಾಲಿಟ್ಟಿದೆ.

ಇದೇ ವೇಳೆ ಭಾರತ ತಂಡದ ಹೊಸ ಸೂಪರ್‌ಸ್ಟಾರ್ ಹಾಗೂ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ವೃತ್ತಿಜೀವನದ ಎರಡನೇ ದ್ವಿಶತಕವನ್ನು ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಅಳಿಸಿ ಹಾಕಿದರು.

ಯಶಸ್ವಿ ಜೈಸ್ವಾಲ್ 3ನೇ ದಿನದಂದು ಆರಂಭಿಕರಾಗಿ ಬ್ಯಾಟಿಂಗ್‌ಗೆ ಬಂದು ಶತಕ ಗಳಿಸಿದ ಕೂಡಲೇ ಗಾಯದಿಂದ ನಿವೃತ್ತರಾದರು. 4ನೇ ದಿನದಂದು ಶುಭ್ಮನ್ ಗಿಲ್ ಔಟಾಗುತ್ತಿದ್ದಂತೆಯೇ ಕ್ರೀಸ್‌ಗೆ ಬಂದ ಪಿಚ್‌ಗೆ ಬಂದ ಯಶಸ್ವಿ ಜೈಸ್ವಾಲ್ ಒಂದೇ ಟೆಸ್ಟ್ ಸರಣಿಯಲ್ಲಿ ಎರಡನೇ ದ್ವಿಶತಕ ಬಾರಿಸಿದ ಮೂರನೇ ಭಾರತೀಯ ಆಟಗಾರನಾದರು.

First time in 147-Year Test History; Yashasvi Jaiswal Double Century Breaks Many Records In Test Cricket

ಈ ಮೊದಲು 1955ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿನೂ ಮಂಕಡ್ ಮತ್ತು 2017ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಎರಡು ದ್ವಿಶತಕ ಬಾರಿಸಿದ ಇನ್ನಿಬ್ಬರು ಭಾರತೀಯ ಆಟಗಾರರಾಗಿದ್ದಾರೆ.

ಇನ್ನು ತಮ್ಮ ದ್ವಿಶತಕದ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು (12) ಬಾರಿಸುವ ಮೂಲಕ ಪಾಕಿಸ್ತಾನದ ವಾಸಿಂ ಅಕ್ರಮ್ ಅವರ ದಾಖಲೆಯನ್ನು ಸರಿಗಟ್ಟಿದರು.

1996ರಲ್ಲಿ ಜಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಪರವಾಗಿ ವಾಸಿಂ ಅಕ್ರಮ್ 12 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಸರಿಗಟ್ಟಿದರು.

ಒಂದೇ ಟೆಸ್ಟ್ ಸರಣಿಯಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಯಶಸ್ವಿ ಜೈಸ್ವಾಲ್ ಮೊದಲ ಬ್ಯಾಟರ್ ಆಗಿದ್ದಾರೆ. ಇದು 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲನೇ ನಿದರ್ಶನವಾಗಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಎರಡು ದ್ವಿಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಯಶಸ್ವಿ ಜೈಸ್ವಾಲ್ ಭಾನುವಾರ ಹೊಸ ಭಾರತೀಯ ದಾಖಲೆಯನ್ನು ನಿರ್ಮಿಸಿದರು.

ಯಶಸ್ವಿ ಜೈಸ್ವಾಲ್ ಅವರ ಸಿಕ್ಸರ್‌ಗಳು ತುಂಬಿದ ಪಂದ್ಯದಲ್ಲಿ ಭಾರತ ತಂಡವು ವಿಶ್ವದಾಖಲೆಯನ್ನು ಮುರಿಯಲು ಸಹಾಯ ಮಾಡಿತು. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ತಂಡವೆನಿಸಿತು.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ತಮ್ಮ ಹೆಸರಿಗೆ 48 ಸಿಕ್ಸರ್‌ಗಳೊಂದಿಗೆ ಭಾರತ ತಂಡವು 2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 47 ಸಿಕ್ಸರ್‌ಗಳನ್ನು ಬಾರಿಸಿದ್ದ ತಮ್ಮದೇ ಆದ ದಾಖಲೆಯನ್ನು ಅಳಿಸಿ ಹಾಕಿತು. ಇಂಗ್ಲೆಂಡ್ (43) ಮತ್ತು ಆಸ್ಟ್ರೇಲಿಯಾ (40) ತಂಡಗಳು ಪಟ್ಟಿಯಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ.

First time in 147-Year Test History; Yashasvi Jaiswal Double Century Breaks Many Records In Test Cricket

ಯಾವುದೇ ತಂಡದಿಂದ ಒಂದೇ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆಗೆ ಬಂದಾಗ, ರಾಜ್‌ಕೋಟ್ ಟೆಸ್ಟ್‌ ಪಂದ್ಯದಲ್ಲಿ 28 ಸಿಕ್ಸರ್‌ಗಳನ್ನು ದಾಖಲಿಸಿದ ಟೀಮ್ ಇಂಡಿಯಾ ಮತ್ತೊಮ್ಮೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 2019ರಲ್ಲಿ ವಿಶಾಖಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ (27 ಸಿಕ್ಸರ್) ಅವರ ಹಿಂದಿನ ಅತ್ಯುತ್ತಮ ಸಾಧನೆಯಾಗಿತ್ತು.

ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲೇ ಭಾರತ ಒಟ್ಟು 18 ಸಿಕ್ಸರ್‌ಗಳನ್ನು ಬಾರಿಸಿದ್ದು ತಂಡಕ್ಕೆ ದಾಖಲೆಯನ್ನು ಬರೆಯಲು ನೆರವಾಗಿದೆ.

ಇನ್ನು ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 98 ಓವರ್‌ಗಳಲ್ಲಿ 4 ವಿಕೆಟ್‌ಗೆ 430 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ 557 ರನ್‌ಗಳ ಬೃಹತ್ ಗುರಿ ನೀಡಿದೆ.

ದ್ವಿಶತಕ ವೀರ ಯಶಸ್ವಿ ಜೈಸ್ವಾಲ್ 236 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ 12 ಸಿಕ್ಸರ್‌ಗಳ ಸಮೇತ ಅಜೇಯ 214 ರನ್ ಬಾರಿಸಿದರು. ಇದೇ ವೇಳೆ ಸರ್ಫರಾಜ್ ಖಾನ್ 72 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ ಅಜೇಯ 68 ರನ್ ಗಳಿಸಿದರು.

ಯಶಸ್ವಿ ಜೈಸ್ವಾಲ್ ಮತ್ತು ಸರ್ಫರಾಜ್ ಖಾನ್ ಜೋಡಿ ಮುರಿಯದ ಐದನೇ ವಿಕೆಟ್‌ಗೆ 158 ಎಸೆತಗಳಲ್ಲಿ 172 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ರೆಹಾನ್ ಅಹ್ಮದ್ ತಮ್ಮ 25 ಓವರ್‌ಗಳಲ್ಲಿ 108 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್‌ ಪಡೆದರೆ, ಜೋ ರೂಟ್ 111 ರನ್‌ಗಳಿಗೆ 1 ವಿಕೆಟ್ ಮತ್ತು ಟಾಮ್ ಹಾರ್ಟ್ಲಿ 78 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ.

Story first published: Sunday, February 18, 2024, 16:34 [IST]
Other articles published on Feb 18, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+