
ಪೃಥ್ವಿ ಶಾ- 2018
2018ರಲ್ಲಿ ಟೀಮ್ ಇಂಡಿಯಾ ಪರವಾಗಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲಿಯೇ ಅಧ್ಬುತ ಪ್ರದರ್ಶನ ನೀಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆದ ಪಂದ್ಯದಲ್ಲಿ ಶಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 154 ಎಸೆತಗಳನ್ನು ಎದುರಿಸಿದ ಶಾ ಭರ್ಜರಿ 134 ರನ್‌ಗಳನ್ನು ಗಳಿಸಿದ್ದರು. ಈ ಪ್ರದರ್ಶನದ ಕಾರಣದಿಂದಾಗಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಪದಾರ್ಪಣಾ ಪಂದ್ಯದಲ್ಲಿಯೇ ಶಾ 19 ಬೌಂಡರಿ ಸಿಡಿಸಿದ್ದರು. ಹಾಗಿದ್ದರೂ ಟೀಮ್ ಇಂಡಿಯಾದಲ್ಲಿ ಖಾಯಂ ಸ್ಥಾನ ಸಂಪಾದಿಸಲು ಶಾಗೆ ಸಾಧ್ಯವಾಗಲಿಲ್ಲ. ಭಾರತದ ಪರವಾಗಿ ಈ ಯುವ ಬ್ಯಾಟರ್ ಕೇವಲ ಐದು ಟೆಸ್ಟ್ ಪಂದ್ಯಗಳಲ್ಲಿ ಮಾತ್ರವೇ ಆಡಿದ್ದಾರೆ.
ಐಪಿಎಲ್: ಆಟಗಾರರ ಹರಾಜಿಗೆ ಬ್ರೇಕ್; ಇನ್ನುಮುಂದೆ ಇರುವುದಿಲ್ಲ ಮೆಗಾ ಹರಾಜು?

ರೋಹಿತ್ ಶರ್ಮಾ- 2013
ಪೃಥ್ವಿ ಶಾ ರೀತಿಯಲ್ಲಿಯೇ ರೋಹಿತ್ ಶರ್ಮಾ ಕೂಡ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧವೇ ಆಡಿದ್ದು ಮೊದಲ ಪಂದ್ಯದಲ್ಲಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡಿದ್ದಾರೆ. 2013ರಲ್ಲಿ ರೋಹಿತ್ ಶರ್ಮಾ ಕೊಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯವನ್ನು ಆಡಿದ್ದು ಈ ಪಂದ್ಯದಲ್ಲಿ ಭರ್ಜರಿ 177 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಪ್ರದರ್ಶನದ ಕಾರಣದಿಂದಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಈಗ ಭಾರತೀಯ ಟಿ20 ಕ್ರಿಕೆಟ್ ತ,ಡದ ನಾಯಕನಾಗಿ ಜವಾಬ್ಧಾರಿ ವಹಿಸಿಕೊಂಡಿದ್ದು ಏಕದಿನ ತಂಡದ ಉಪನಾಯಕನಾಗಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರನಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಐಪಿಎಲ್: ಧೋನಿ ಬಿಟ್ಟು ಈ 4 ಪ್ರಮುಖ ಆಟಗಾರರನ್ನು ಸಿಎಸ್‌ಕೆ ಉಳಿಸಿಕೊಳ್ಳಲಿದೆ ಎಂದ ಮಾಜಿ ಕ್ರಿಕೆಟಿಗ!

ಶಿಖರ್ ಧವನ್- 2013
ಶಿಖರ್ ಧವನ್ 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನವನ್ನು ಆರಂಭಿಸಿದ್ದರು. ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಶಿಖರ್ ಧವನ್ ಚೊಚ್ಚಲ ಪಂದ್ಯದಲ್ಲಿಯೇ ಭರ್ಜರಿ 187 ರನ್‌ಗಳನ್ನು ಗಳಿಸಿದ್ದರು. ಧವನ್ ಒಂದು ಸಂದರ್ಭದಲ್ಲಿ ಟೀಮ್ ಇಂಡಿಯಾದ ಮೂರು ಮಾದರಿಯಲ್ಲಿಯೂ ಭಾರತದ ಅಗ್ರ ಆರಂಭಿಕ ಆಟಗಾರನಾಗಿ ಮಿಂಚಿದ್ದರು. ಆದರೆ ಈಗ ಟೆಸ್ಟ್ ಹಾಗೂ ಟಿ20 ತಂಡದಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.

ಆರ್ ಅಶ್ವಿನ್-2012
ಈ ಪಟ್ಟಿಯಲ್ಲಿರುವ ಆಟಗಾರರ ಪೈಕಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಪದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ 3ನೇ ಆಟಗಾರನಾಗಿದ್ದಾರೆ ರವಿ ಚಂದ್ರನ್ ಅಶ್ವಿನ್. ಪೃಥ್ವಿ ಶಾ ಹಾಗೂ ರೋಹಿತ್ ಶರ್ಮಾ ಅವರಂತೆಯೇ ವಿಂಡೀಸ್ ವಿರುದ್ಧ ಈ ಸಾಧನೆ ಮಾಡಿದ್ದಾರೆ ಆರ್ ಅಶ್ವಿನ್. 2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಆರ್ ಅಶ್ವಿನ್ ದೆಹಲಿಯಲ್ಲಿನಡೆದ ಪಂದ್ಯದಲ್ಲಿ 9 ವಿಕೆಟ್ ಪಡೆದುಕೊಂಡಿದ್ದರು ಆರ್ ಅಶ್ವಿನ್. ಎರಡನೇ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ 6 ವಿಕೆಟ್‌ಗಳ ಗೊಂಚಲು ಸಂಪಾದಿಸಿದ್ದರು.
ಆರ್ ಅಶ್ವಿನ್ ಈಗಲೂ ಕೂಡ ಟೀಮ್ ಇಂಡಿಯಾ ಟೆಸ್ಟ್ ತಂಡದ ಪ್ರಮುಖ ಆಟಗಾರನಾಗಿ ಮುಂದುವರಿಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಟೀಮ್ ಇಂಡಿಯಾದ ಟಿ20 ಸ್ಕ್ವಾಡ್‌ಕೂ ಅವರು ಮರಳಿದ್ದು ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ಅಶ್ವಿನ್ ಅದ್ಭುತವಾದ ಬೌಲಿಂಗ್ ದಾಳಿ ನಡೆಸಿದರು.
ಐಪಿಎಲ್ 2022 ರಿಟೆನ್ಷನ್: ಆರ್‌ಸಿಬಿಯ ಈ ಇಬ್ಬರು ಆಟಗಾರರು ಮಾತ್ರ ಸೇಫ್, ಉಳಿದವರ ಕಥೆ?

ಆರ್‌ಪಿ ಸಿಂಗ್-2006
ಚೊಚ್ಚಲ ಪಂದ್ಯದಲ್ಲಿಯೇ ಅದ್ಭುತ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಭಾರತದ ಏಕೈಕ ವೇಗದ ಬೌಲರ್ ಎನಿಸಿದ್ದಾರೆ ಆರ್‌ಪಿ ಸಿಂಗ್. 2006ರಲ್ಲಿ ಪಾಕಿಸ್ತಾನದ ವಿರುದ್ಧ ಫೈಸಲಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಪಿ ಸಿಂಗ್ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆರ್‌ಪಿ ಸಿಂಗ್ ಒಂದು ವಿಕೆಟ್ ಪಡೆದುಕೊಂಡರೆ ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್ ಸಂಪಾದಿಸಿದ್ದರು. ಈ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು. ಸದ್ಯ ಆರ್‌ಪಿ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆದುಕೊಂಡಿದ್ದು ಕಾಮೆಂಟೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


Click it and Unblock the Notifications
