Flashback 2022: ಈ ವರ್ಷ ಟೀಮ್ ಇಂಡಿಯಾ ಅನುಭವಿಸಿದ 3 ದೊಡ್ಡ ಮುಖಭಂಗಗಳು!

2022ರ ಟೀಮ್ ಇಂಡಿಯಾ ಪಾಲಿಗೆ ಅಷ್ಟೇನೂ ಸ್ಮರಣೀಯ ವರ್ಷವಲ್ಲ. ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿದರೂ ಮಹತ್ವದ ಟೂರ್ನಿಗಳಲ್ಲಿ ಭಾರತ ಮತ್ತೆ ಸೋಲು ಕಂಡಿದೆ. ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅನುಭವಿಸಿದ ಹಿನ್ನಡೆ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ.

ಈ ಎರಡು ಪ್ರಮುಖ ಟೂರ್ನಿಗಳಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಅಭಿಮಾನಿಗಳಿಗೆ ಭಾರೀ ಅಸಮಾಧಾನ ಮೂಡಿಸಿದೆ. ಹಲವು ಸಂದರ್ಭಗಳಲ್ಲಿ ಆಟಗಾರರ ಆಯ್ಕೆಯ ಬಗ್ಗೆಯೂ ಸಾಕಷ್ಟು ಟೀಕೆಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದರೆ ಕೆಲ ಆಟಗಾರರು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಕ್ಕಿ ವಿಫಲವಾಗಿದ್ದಾರೆ. ಅದರಲ್ಲೂ ಮಹತ್ವದ ಘಟ್ಟದಲ್ಲಿ ಪ್ರಮುಖ ಆಟಗಾರರು ವಿಫಲವಾಗಿರುವುದು ಅಕ್ರೋಶಕ್ಕೆ ಕಾರಣವಾಗಿದೆ.

ಫುಟ್ಬಾಲ್ ದಿಗ್ಗಜ ಪೀಲೆ ನಿಧನ: ಅಂತಿಮಯಾತ್ರೆ ಬಗ್ಗೆ ಸ್ಯಾಂಟೋಸ್ ಕ್ಲಬ್ ಮಾಹಿತಿಫುಟ್ಬಾಲ್ ದಿಗ್ಗಜ ಪೀಲೆ ನಿಧನ: ಅಂತಿಮಯಾತ್ರೆ ಬಗ್ಗೆ ಸ್ಯಾಂಟೋಸ್ ಕ್ಲಬ್ ಮಾಹಿತಿ

ಇನ್ನು 2022ರಲ್ಲಿ ಟೀಮ್ ಇಂಡಿಯಾ ಅನುಭವಿಸಿದ ಮೂರು ಆಘಾತಕಾರಿ ಸೋಲು ಯಾವುದು ಎಂಬುದನ್ನು ನೋಡೋಣ.. ಮುಂದೆ ಓದಿ..

ಏಷ್ಯಾ ಕಪ್ ಸೂಪರ್ 4 ಹಂತದ ಆಘಾತಕಾರಿ ಪ್ರದರ್ಶನ

ಏಷ್ಯಾ ಕಪ್ ಸೂಪರ್ 4 ಹಂತದ ಆಘಾತಕಾರಿ ಪ್ರದರ್ಶನ

2022ರ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ದುಬೈ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು. ಎರಡೇ ಪಂದ್ಯದಲ್ಲಿ ಹಾಂಕಾಂಗ್ ವಿರುದ್ಧ 40 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು.

ಈ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಸೂಪರ್ 4 ಹಂತಕ್ಕೆ ಪ್ರವೇಶಿಸಿತ್ತು ಟೀಮ್ ಇಂಡಿಯಾ. ಈ ಹಂತದಲ್ಲಿ ಭಾರತ ತಂಡದ ಪ್ರದರ್ಶನ ಆಘಾತಕಾರಿಯಾಗಿತ್ತು. ಮೊದಲಿಗೆ ಪಾಕಿಸ್ತಾನ ತಂಡವನ್ನು ಎದುರಿಸಿದ ಟೀಮ್ ಇಂಡಿಯಾ 5 ವಿಕೆಟ್‌ಗಾಳ ಅಂತರದ ಸೋಲು ಕಂಡಿತ್ತು. ಮುಂದಿನ ಪಂದ್ಯ ಶ್ರೀಲಂಕಾ ವಿರುದ್ಧ ಕೂಡ 6 ವಿಕೆಟ್‌ಗಳ ಅಂತರದ ಸೋಕು ಅನುಭವಿಸಿತು. ಈ ಹಂತದಲ್ಲಿ ಅಘ್ಘಾನಿಸ್ತಾನದ ವಿರುದ್ಧ ಮಾತ್ರವೇ ಭಾರತ ಗೆಲುವು ಸಾಧಿಸಿತ್ತು. ಹೀಗಾಗಿ ಟೀಮ್ ಇಂಡಿಯಾ ಫೈನಲ್ ಹಂತಕ್ಕೇರುವಲ್ಲಿ ವಿಫಲವಾಗಿ ನಿರಾಸೆ ಅನುಭವಿಸಿತು.

ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು

ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು

ಇನ್ನು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿಯೂ ಟೀಮ್ ಇಂಡಿಯಾ ಅದ್ಭುತ ಆರಂಭ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಈ ಟೂರ್ನಿಯಲ್ಲಿ ಭಾರತ ನೀಡಿದ ಆರಂಭಿಕ ಪ್ರದರ್ಶನದಿಂದಾಗಿ ಈ ವರ್ಷ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವ ನಿರೀಕ್ಷೆಯನ್ನು ಅನೇಕ ಅಭಿಮಾನಿಗಳು ಹೊಂದಿದ್ದರು. ಆದರೆ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಪ್ರದರ್ಶನ ನಿಡುವ ಮೂಲಕ ಭಾರತದ ತನ್ನ ಅಭಿಯಾನವನ್ನು ಅಂತ್ಯಗೊಳಿಸಿತ್ತು. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಭಾರತ ತಂಡವನ್ನು ಬರೊಬ್ಬರಿ 10 ವಿಕೆಟ್‌ಗಾಲ ಅಂತರದಿಂದ ಗೆಲುವು ಸಾಧಿಸಿತ್ತು. ಭಾರತದ ಬೌಲರ್‌ಗಳು ಇಂಗ್ಲೆಂಡ್ ತಂಡದ ಕನಿಷ್ಠ ಒಂದು ವಿಕೆಟ್ ಪಡೆಯಲು ಕೂಡ ವಿಫಲವಾಗಿದ್ದರು.

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿ ಸೋಲು!

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿ ಸೋಲು!

ಟಿ20 ವಿಶ್ವಕಪ್‌ನ ಬಳಿಕ ನ್ಯೂಜಿಲೆಂಡ್ ಪ್ರವಾಸ ಕೂಗೊಂಡ ಭಾರತ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಈ ಸರಣಿಯಲ್ಲಿ ಮಳೆ ಭಾರೀ ಅಡ್ಡಿಯುಂಡು ಮಾಡಿತ್ತು. ಈ ಸರಣುಯ ಬಳಿಕ ಭಾರತ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದು ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿತ್ತು.

ಏಕದಿನ ಸರಣಿಯಲ್ಲಿ ಬಹುತೇಕ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಕೂಡ ಭಾರತ ಅದ್ಭುತ ಪ್ರದರ್ಶನ ನಿಡಿ ಗೆಲುವು ಸಾಧಿಸುವಲ ನಿರೀಕ್ಷೆ ಹೊಂದಿದ್ದರು. ಆದರೆ ಅದು ನಡೆಯಲಿಲ್ಲ. ಮೊದಲ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸುವ ಪಂದ್ಯದಲ್ಲಿ ಮೆಹದಿ ಹಸನ್ ಹೋರಾಟದ ಪ್ರದರ್ಶನದ ಕಾರಣದಿಂದಾಗಿ ಬಾಂಗ್ಲಾದೇಶ 1 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿತು. ಇನ್ನು ಎರಡನೇ ಏಕದಿನ ಪಂದ್ಯದಲ್ಲಿಯೂ ಬಾಂಗ್ಲಾದೇಶ ತಂಡ 5 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೈಬೆರಳಿಗೆ ಗಾಯಗೊಂಡಿದ್ದರೂ ಅಂತಿಮ ಹಂತದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೂ ಭಾರತ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಈ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು.

For Quick Alerts
ALLOW NOTIFICATIONS
For Daily Alerts
Story first published: Friday, December 30, 2022, 16:02 [IST]
Other articles published on Dec 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X