ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ರದ್ದುಗೊಳಿಸಿದ ಬಿಸಿಸಿಐ

For IPL 2021 window, BCCI cancels Indias T20 series against South Africa
IPL ಗಾಗಿ ಟೀಂ ಇಂಡಿಯಾದ ಮತ್ತೊಂದು ಸರಣಿ ರದ್ದು ಮಾಡಿದ BCCI | Oneindia Kannada

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 14ನೇ ಆವೃತ್ತಿಯನ್ನು ಪೂರ್ಣಗೊಳಿಸುವ ಸಂಗತಿ ಗಮನದಲ್ಲಿಟ್ಟುಕೊಂಡು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಆಡಲಿದ್ದ ಟಿ20ಐ ಸರಣಿಯನ್ನು ರದ್ದುಗೊಳಿಸಿದೆ. ಅಂದರೆ ದಕ್ಷಿಣ ಆಫ್ರಿಕಾ-ಭಾರತ ನಡುವಿನ 3 ಪಂದ್ಯಗಳ ಟಿ20ಐ ಸರಣಿ ರದ್ದಾಗಿದೆ.

 ವಾಸಿಮ್ ಜಾಫರ್ ಈ ತಮಾಷೆಯ ಮೀಮ್‌ ಹಿಂದೆ ಗಂಭೀರ ಕತೆಯಿದೆ! ವಾಸಿಮ್ ಜಾಫರ್ ಈ ತಮಾಷೆಯ ಮೀಮ್‌ ಹಿಂದೆ ಗಂಭೀರ ಕತೆಯಿದೆ!

ಕೋವಿಡ್ ಕಾರಣ 2021ರ ಐಪಿಎಲ್ ಆವೃತ್ತಿ ಅರ್ಧದಲ್ಲೇ ನಿಲುಗಡೆಯಾಗಿತ್ತು. ಅದರ ಇನ್ನುಳಿದ ಪಂದ್ಯಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 18 ಅಥವಾ 19ರಿಂದ ನಡೆಸಲು ಬಿಸಿಸಿಐ ಯೋಚಿಸಿದೆ. ಹೀಗಾಗಿ ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದ ಭಾರತ-ದಕ್ಷಿಣ ಆಫ್ರಿಕಾ ಟಿ20ಐ ಸರಣಿಯನ್ನು ಬಿಸಿಸಿಐ ರದ್ದುಗೊಳಿಸಿದೆ.

'ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಡೆಸಲು ಸಾಧ್ಯವಿಲ್ಲ. ಐಪಿಎಲ್‌ನಂತ ಪ್ರಮುಖ ಟೂರ್ನಿಯಲ್ಲಿ ಆಡುವುದಕ್ಕಿಂತ ಮಿಗಿಲಾಗಿ ಟಿ20 ವಿಶ್ವಕಪ್‌ಗೆ ತಯಾರಿ ಬೇರೆ ಇರಲಾರದು. ಐಪಿಎಲ್ ಮುಗಿದು ಒಂದು ವಾರ ಅಥವಾ 10 ದಿನಗಳಲ್ಲಿ ಟಿ20 ವಿಶ್ವಕಪ್‌ ನಡೆಯಲಿರುವುದರಿಂದ ವಿಶ್ವಕಪ್‌ ಬಳಿಕ ದಕ್ಷಿಣ ಆಫ್ರಿಕಾ ಸರಣಿ ನಡೆಸಬಹುದಾಗಿದೆ,' ಎಂದು ಬಿಸಿಸಿಐ ಮೂಲ ತಿಳಿಸಿದೆ.

IPL 2021: ಭಾರತದಲ್ಲಿ ಅನುಭವಿಸಿದ ಕಷ್ಟವನ್ನು ನೆನೆದು ಕಣ್ಣೀರು ಹಾಕಿದ ನ್ಯೂಜಿಲೆಂಡ್ ಕ್ರಿಕೆಟಿಗIPL 2021: ಭಾರತದಲ್ಲಿ ಅನುಭವಿಸಿದ ಕಷ್ಟವನ್ನು ನೆನೆದು ಕಣ್ಣೀರು ಹಾಕಿದ ನ್ಯೂಜಿಲೆಂಡ್ ಕ್ರಿಕೆಟಿಗ

ಟಿ20 ವಿಶ್ವಕಪ್ ಭಾರತದಲ್ಲಿ ಅಕ್ಟೋಬರ್‌ ತಿಂಗಳಿನಲ್ಲಿ ನಡೆಯಲಿದೆ. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಸಲು ಆಗದಿದ್ದರೆ ಮುಂದಿನ ವರ್ಷ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಹೋದಾಗ ಹೆಚ್ಚುವರಿ ಪಂದ್ಯಗಳನ್ನು ಆಡುವ ಅವಕಾಶವೂ ಇದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

Story first published: Wednesday, May 26, 2021, 9:49 [IST]
Other articles published on May 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X