2023ರ ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ ಸೌರವ್ ಗಂಗೂಲಿ; ಏಕೈಕ ಕನ್ನಡಿಗನಿಗೆ ಸ್ಥಾನ
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದು, ಇದಕ್ಕಾಗಿ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.
ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ ಹತ್ತು ತಂಡಗಳ ಅಂತಿಮ ಆಯ್ಕೆಯತ್ತ ಎಲ್ಲರ ಕಣ್ಣುಗಳು ನೆಟ್ಟಿವೆ. ಇದೇ ವೇಳೆ ಐಸಿಸಿ ಟೂರ್ನಿಗೂ ಮುನ್ನ ಭಾರತ ತಂಡ ಏಷ್ಯಾ ಕಪ್ ಪಂದ್ಯಾವಳಿಗೆ ಸಜ್ಜಾಗುತ್ತಿದೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ವಿಶ್ವಕಪ್ ತಂಡಗಳು ಏಷ್ಯಾ ಕಪ್ ಲೈನ್‌ಅಪ್‌ನಂತೆಯೇ ಇರಲಿವೆ ಎಂದು ಹೇಳಿದ್ದಾರೆ.

ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ 2023 ವಿಶ್ವಕಪ್‌ಗೆ ತಮ್ಮ ಆಯ್ಕೆಯ 15 ಸದಸ್ಯರ ಭಾರತ ತಂಡವನ್ನು ಹೆಸರಿಸಿದ್ದಾರೆ.
ಸೌರವ್ ಗಂಗೂಲಿ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರು ಇದ್ದಾರೆ. ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್ ಮತ್ತು ಕೆಎಲ್ ರಾಹುಲ್ ಅವರಂತಹ ಭರವಸೆಯ ಪ್ರತಿಭೆಗಳಿಂದ ಕೂಡಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.
ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ಬ್ಯಾಟಿಂಗ್ ಆಯ್ಕೆಯಾಗಿ ಆಯ್ಕೆ ಮಾಡಿದ್ದಾರೆ. ಭಾರತ ತಂಡದಲ್ಲಿ ಹೆಚ್ಚುವರಿ ಬ್ಯಾಟರ್ ಆಡಲು ಬಯಸಿದರೆ ಇಶಾನ್ ಕಿಶನ್ ಮಾತ್ರ ತಂಡದಲ್ಲಿ ಸ್ಪೆಷಲಿಸ್ಟ್ ವಿಕೆಟ್ ಕೀಪರ್ ಆಗಿದ್ದಾರೆ.
ಆಲ್‌ರೌಂಡರ್‌ಗಳಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಎಡಗೈ ಸ್ಪಿನ್ ಜೋಡಿಯಾದ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಸೌರವ್ ಗಂಗೂಲಿ ಆಯ್ಕೆ ಮಾಡಿದ್ದು, ಕುಲದೀಪ್ ಯಾದವ್ ಇತರ ಸ್ಪಿನ್ ಆಗಿ ಸ್ಥಾನ ಪಡೆದಿದ್ದಾರೆ.
ಭಾರತ ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲು ಮಾಜಿ ನಾಯಕ ಸೌರವ್ ಗಂಗೂಲಿ ನಿರ್ಧರಿಸಿದ್ದಾರೆ.
ಈ ತಂಡದಲ್ಲಿ ಯಾರಾದರೂ ಯಾವುದೇ ಕಾರಣಕ್ಕಾಗಿ ಹೊರಗುಳಿದರೆ, ಮೂರು ಬ್ಯಾಕ್-ಅಪ್ ಆಯ್ಕೆಗಳನ್ನು ಸೌರವ್ ಗಂಗೂಲಿ ಹೆಸರಿಸಿದ್ದಾರೆ.
"ಬ್ಯಾಟರ್‌ಗಳಲ್ಲಿ ಒಬ್ಬರು ಗಾಯಗೊಂಡರೆ, ತಿಲಕ್ ವರ್ಮಾ ಪ್ರವೇಶಿಸಬಹುದು. ಇನ್ನು ವೇಗಿ ಗಾಯಗೊಂಡರೆ ಆ ಸ್ಥಾನವನ್ನು ಪ್ರಸಿದ್ಧ್ ಕೃಷ್ಣ ತುಂಬಲಿದ್ದಾರೆ. ಸ್ಪಿನ್ನರ್ ವಿಷಯದಲ್ಲಿ ಯುಜ್ವೇಂದ್ರ ಚಹಾಲ್ ಆಯ್ಕೆಯಾಗುತ್ತಾರೆ," ಎಂದು ಸೌರವ್ ಗಂಗೂಲಿ ಸ್ಟಾರ್ ಸ್ಪೋರ್ಟ್ಸ್‌ಗೆ ತಿಳಿಸಿದರು.
2023ರ ವಿಶ್ವಕಪ್‌ಗೆ ಸೌರವ್ ಗಂಗೂಲಿ ಆಯ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications