2022ರ ಟಿ20 ವಿಶ್ವಕಪ್ ಗೆಲ್ಲಲು ಭಾರತ ತಂಡ ಹೀಗಿರಲಿ, ಆದರೆ ಈ ಆಟಗಾರ ಬೇಡ ಎಂದ ಮಾಜಿ ಕ್ರಿಕೆಟಿಗ!

2016ರ ನಂತರ ನಡೆಯದೇ ಇದ್ದ ಪ್ರಮುಖ ಕ್ರಿಕೆಟ್ ಟೂರ್ನಿಯಾದ ಟಿ ಟ್ವೆಂಟಿ ವಿಶ್ವಕಪ್ ಕಳೆದ ವರ್ಷ ಜರುಗಿತು. ಹೌದು, 2021ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಭಾರತದಲ್ಲಿ ಆಯೋಜನೆಯಾಗಬೇಕಿತ್ತು ಆದರೆ ಕೊರೋನಾವೈರಸ್ ಕಾರಣದಿಂದಾಗಿ ಟೂರ್ನಿಯನ್ನು ಸಂಪೂರ್ಣವಾಗಿ ಯುಎಇಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ತಂಡಕ್ಕೆ ಫೈನಲ್ ಪಂದ್ಯದಲ್ಲಿ ಮಣ್ಣು ಮುಕ್ಕಿಸಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡು ಚಾಂಪಿಯನ್ಸ್ ಆಗಿ ಹೊರ ಹೊಮ್ಮಿತು.
ಹೀಗೆ ಯಾರೂ ಸಹ ಊಹಿಸಿರದೇ ಇದ್ದ ಆಸ್ಟ್ರೇಲಿಯಾ ಬಲಿಷ್ಠ ತಂಡಗಳನ್ನು ಬಗ್ಗುಬಡಿದು ಟ್ರೋಫಿ ಮುಡಿಗೇರಿಸಿಕೊಂಡರೆ, ಅತ್ತ ಟೂರ್ನಿ ಆರಂಭಕ್ಕೂ ಮುನ್ನ ಈ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಎತ್ತಿ ಹಿಡಿಯಲಿರುವ ತಂಡ ಎನಿಸಿಕೊಂಡಿದ್ದ ಟೀಮ್ ಇಂಡಿಯಾ ಲೀಗ್ ಹಂತದ ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಸೋಲನ್ನು ಅನುಭವಿಸುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು.
ಹೀಗೆ ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹೀನಾಯವಾಗಿ ಪ್ರದರ್ಶನವನ್ನು ನೀಡಿದ ನಂತರ ವಿರಾಟ್ ಕೊಹ್ಲಿ ನಾಯಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಹೌದು, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡ ನಂತರ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದರು ಹಾಗೂ ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ತಂಡದ ನೂತನ ಪೂರ್ಣಾವಧಿ ನಾಯಕನಾಗಿ ಆಯ್ಕೆಗೊಂಡರು. ಹೀಗೆ ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿ ಹಾಗೂ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗಳ ಪೈಕಿ ಎಲ್ಲಾ ಸರಣಿಗಳಲ್ಲಿಯೂ ಟೀಮ್ ಇಂಡಿಯಾ ವೈಟ್ ವಾಷ್ ಸಾಧನೆಯನ್ನು ಮಾಡಿದೆ. ಹೀಗೆ ಸಾಲು ಸಾಲು ಗೆಲುವು ಕಂಡ ಟೀಮ್ ಇಂಡಿಯಾ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ತಂಡದಲ್ಲಿ ಸ್ಥಾನ ಪಡೆದುಕೊಳ್ಳಲು ಆಟಗಾರರಲ್ಲಿ ಪೈಪೋಟಿ ಶುರುವಾಗಿದೆ. ಹೀಗಿರುವಾಗ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗುವ ಟೀಮ್ ಇಂಡಿಯಾದಲ್ಲಿ ಯಾರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದು, ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ಕೆಳಕಂಡ ಆಟಗಾರರನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಮೊದಲ ಮೂವರು ಆಟಗಾರರು
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಇರಬೇಕಾದ ಮೊದಲು ಮೂವರು ಆಟಗಾರರೆಂದರೆ ಅದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಹಾಗೂ ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಬಹುದು ಎಂದು ಸಹ ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಧ್ಯಮ ಕ್ರಮಾಂಕ
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಕಾಶ್ ಚೋಪ್ರಾ ಪ್ರಕಟಿಸಿರುವ ತಂಡದಲ್ಲಿ ಮಧ್ಯಮ ಕ್ರಮಾಂಕದ ಆಟಗಾರರಾಗಿ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗೂ ಈ ತಂಡದಲ್ಲಿ ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಬೇಕು ಎಂದು ಆಕಾಶ್ ಚೋಪ್ರಾ ಆಯ್ಕೆ ಮಾಡಿದ್ದಾರೆ.

ಆಲ್‌ರೌಂಡರ್ಸ್
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಆಲ್‌ರೌಂಡರ್ಸ್ ವಿಭಾಗಕ್ಕೆ ರವೀಂದ್ರ ಜಡೇಜಾ ಮತ್ತು ವೆಂಕಟೇಶ್ ಅಯ್ಯರ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಹಾಗೂ ವಾಷಿಂಗ್ಟನ್ ಸುಂದರ್ ಪ್ರದರ್ಶನ ತನಗೆ ಅಷ್ಟೇನೂ ಮೆಚ್ಚುಗೆಯಾಗಲಿಲ್ಲ ಎಂದಿರುವ ಆಕಾಶ್ ಚೋಪ್ರಾ ಆತನನ್ನು ತಾವು ಹೆಸರಿಸಿರುವ ತಂಡದಿಂದ ಕೈ ಬಿಟ್ಟಿದ್ದಾರೆ.

ಬೌಲರ್‌ಗಳು
ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಯುಜುವೇಂದ್ರ ಚಾಹಲ್ ಇರಲೇಬೇಕೆಂದು ಅಭಿಪ್ರಾಯಪಟ್ಟಿರುವ ಆಕಾಶ್ ಚೋಪ್ರಾ ಭುವನೇಶ್ವರ್ ಕುಮಾರ್ ಹಾಗೂ ದೀಪಕ್ ಚಹರ್ ಇಬ್ಬರಲ್ಲಿ ಓರ್ವ ಆಟಗಾರ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ಆಕಾಶ್ ಚೋಪ್ರಾ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಹಾಗೂ ಅವೇಶ್ ಖಾನ್ ಈ ಮೂವರಲ್ಲಿ ಓರ್ವ ವೇಗಿ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುತ್ತಾನೆ ಎಂದಿದ್ದಾರೆ.
ಆಕಾಶ್ ಚೋಪ್ರಾ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಿರುವ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ / ದೀಪಕ್ ಚಾಹರ್, ಪ್ರಸಿದ್ಧ್ ಖಾನ್ ಕೃಷ್ಣ / ಎ. /ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ/ಟಿ ನಟರಾಜನ್/ಖಲೀಲ್ ಅಹಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications