ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ಗೆ ಕೋವಿಡ್ 19 ಪಾಸಿಟಿವ್

Former cricketer Harbhajan Singh tests positive for Coronavirus

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸ್ಪಿನ್ನರ್ ಹರ್ಭಜನ್ ಸಿಂಗ್‌ಗೆ ಕೊರೊನಾವೈರಸ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಹರ್ಭಜನ್ ಸಿಂಗ್ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿರುವುದಾಗಿದ್ದಾರೆ. ಸಣ್ಣ ಪ್ರಮಾಣದ ಸಲಕ್ಷಣಗಳು ಕಾಣಿಸಿಕೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿರುವುದಾಗಿ ಹರ್ಭಜನ್ ಸಿಂಗ್ ಮಾಹಿತಿ ನೀಡಿದ್ದಾರೆ. ಭಜ್ಜಿ ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ.

"ನನ್ನ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದ್ದು ಸಣ್ಣ ಪ್ರಮಾಣದ ಲಕ್ಷಣಗಳು ಕಾಣಿಸಿಕೊಂಡಿದೆ. ಮನೆಯಲ್ಲಿಯೇ ನಾನು ಕ್ವಾರಂಟೈನ್‌ನಲ್ಲಿದ್ದು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ಯಾರೆಲ್ಲಾ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಸಾಧ್ಯವಾದಷ್ಟೇ ಬೇಗನೆ ಪರೀಕ್ಷಿಸಿಕೊಳ್ಳಲು ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಸುರಕ್ಷಿತವಾಗಿರಿ" ಎಂದು ಹರ್ಭಜನ್ ಸಿಂಗ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದಪ್ಪಾ ಕ್ರೇಜ್ ಅಂದ್ರೆ; 2022ರ ಟಿ20 ವಿಶ್ವಕಪ್‌ಗೂ ಮುನ್ನ ಸಿಡ್ನಿಯಲ್ಲಿ ಘರ್ಜಿಸಿದ ಕೊಹ್ಲಿ!ಇದಪ್ಪಾ ಕ್ರೇಜ್ ಅಂದ್ರೆ; 2022ರ ಟಿ20 ವಿಶ್ವಕಪ್‌ಗೂ ಮುನ್ನ ಸಿಡ್ನಿಯಲ್ಲಿ ಘರ್ಜಿಸಿದ ಕೊಹ್ಲಿ!

ಹರ್ಭಜ್ ಸಿಂಗ್‌ 1998ರಲ್ಲಿ ಮೊಹಮ್ಮದ್ ಅಜರುದ್ದೀನ್ ನೇತೃತ್ವದಲ್ಲಿ ಭಾರತೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆದರೆ ಸೌರವ್ ಗಂಗೂಲಿ ನೇತೃತ್ವದಲ್ಲಿ 2001ರಿಂದ 2005ರ ಅವಧಿಯಲ್ಲಿ ಹರ್ಭಜನ್ ಸಿಂಗ್ ವೃತ್ತಿ ಜೀವನದ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹರ್ಭಜನ್ ಮಾಜಿ ನಾಯಕ ಗಂಗೂಲಿ ನೇತೃತ್ವದಲ್ಲಿ 118 ಪಂದ್ಯಗಳನ್ನು (ಏಕದಿನ ಮತ್ತು ಟೆಸ್ಟ್) ಆಡಿದ್ದಾರೆ ಮತ್ತು 29 ಕ್ಕಿಂತ ಕಡಿಮೆ ಸರಾಸರಿಯಲ್ಲಿ 273 ವಿಕೆಟ್‌ಗಳನ್ನು ಪಡೆದಿದ್ದಾರೆ. 2001ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅನಿಲ್ ಕುಂಬ್ಳೆ ಅನುಪಸ್ಥಿತಿಯಲ್ಲಿ ಹರ್ಭಜನ್ 3 ಟೆಸ್ಟ್‌ಗಳಲ್ಲಿ 32 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಈ ಸಾಧನೆಯಿಂದಾಗಿ ಭಾರತ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಸರಣಿ ಗೆಲುವು ಸಾಧಿಸಿತ್ತು.

Rohit Sharmaಗೆ ನಾಯಕತ್ವದ ಒತ್ತಡ ತಿಳಿಯೋದು ಆಗ | Oneindia Kannada

ಇನ್ನು ಹರ್ಭಜನ್ ಸಿಂಗ್ 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು. 2011ರ ವಿಶ್ವಕಪ್ ವಿಜೇತ ತಂಡದ ಪ್ರಮುಖ ಸದಸ್ಯರೂ ಆಗಿದ್ದರು ಹರ್ಭಜನ್ ಸಿಂಗ್. ಭಾರತ ಪರ ಧೋನಿ ನಾಯಕತ್ವದಲ್ಲಿ 133 ಪಂದ್ಯಗಳಲ್ಲಿ 229 ವಿಕೆಟ್‌ಗಳನ್ನು ಪಡೆದಿದ್ದಾರೆ. ಇತ್ತಿಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಘೋಷಿಸಿದ್ದಾರೆ.

Story first published: Friday, January 21, 2022, 14:51 [IST]
Other articles published on Jan 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X