ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸ್ಪಿನ್ನರ್‌ಗಳ ವಿರುದ್ಧ ಪರದಾಡುವ ಕೊಹ್ಲಿಗೆ ಆಸಿಸ್ ಸರಣಿಗೂ ಮುನ್ನ ಪಠಾಣ್ 'ಆಕ್ರಮಣಕಾರಿ' ಸಲಹೆ!

Former cricketer Irfan Pathan advice to Virat Kohli to tackle Australian spinners

ಬಾರ್ಡರ್-ಗವಾಸ್ಕರ್ ಟ್ರೋಫಿ ಮೇಲೆ ಈಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ಟೆಸ್ಟ್ ಕ್ರಿಕೆಟ್‌ನ ಎರಡು ಬಲಿಷ್ಠ ತಂಡಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಪಡೆಗಳ ನಡುವಿನ ಕಾದಾಟ ಸಾಕಷ್ಟು ಕುತೂಹಲ ಮೂಡಿಸಿದೆ. ಅಭಿಮಾನಿಗಳು ಮಾತ್ರವಲ್ಲದೆ ಕ್ರಿಕೆಟ್ ಪಂಡಿತರು ಕೂಡ ಈ ಸರಣಿಗಾಗಿ ಎದುರು ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಭಾರತದ ಅನುಭವಿ ಆಟಗಾರ ವಿರಾಟ್ ಕೊಹ್ಲಿಗೆ ಸಲಹೆಯೊಂದನ್ನು ನೀಡಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಲು ವಿರಾಟ್ ಕೊಹ್ಲಿ ಆಕ್ರಮನಕಾರಿಯಾಗಿ ಆಡಬೇಕು ಎಂದಿದ್ದಾರೆ ಇರ್ಫಾನ್ ಪಠಾಣ್. ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆ ಸ್ಪಿನ್ ಬೌಲಿಂಗ್ ವಿರುದ್ಧ ಅಷ್ಟೇನೂ ಉತ್ತಮವಾಗಿಲ್ಲ. ಸ್ಪಿನ್ ಬೌಲರ್‌ಗಳುಗೆ ಕೊಹ್ಲಿ ಸಾಕಷ್ಟು ಸಂದರ್ಭಗಳಲ್ಲಿ ವಿಕೆಟ್ ಒಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಗೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಈ ಸಲಹೆ ನೀಡಿದ್ದಾರೆ.

ಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿ

ವಿರಾಟ್ ಕೊಹ್ಲಿ ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿಯೂ ಸ್ಪಿನ್ ವಿರುದ್ಧ ಪರದಾಡಿದ್ದು ಸ್ಪಷ್ಟವಾಗಿತ್ತು. ಇನ್ನು ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳಲ್ಲಿಯೂ ಕೊಹ್ಲಿ ಸ್ಪಿನ್ನರ್‌ಗಳಾದ ತೈಜಯಲ್ ಇಸ್ಲಾಂ ಹಾಗೂ ಮೆಹಿದಿ ಹಸನ್‌ಗೆ ವಿಕೆಟ್ ಒಪ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಇರ್ಫಾನ್ ಪಠಾಣ್ ಮಾತನಾಡಿದ್ದು ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಾಥನ್ ಲಿಯಾನ್ ಹಾಗೂ ಆಷ್ಟನ್ ಅಗರ್ ಅವರನ್ನು ಎದುರಿಸಲು ಆಕ್ರಮಣಕಾರಿ ಆಟಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ

"ವಿರಾಟ್ ಕೊಹ್ಲಿ ಒಂದು ವಿಚಾರವನ್ನು ತನ್ನ ಮನಸ್ಸಿನಲ್ಲಿ ಸ್ಪಷ್ಟವಾಗಿಟ್ಟುಕೊಳ್ಳಬೇಕು ಅದೇನೆಂದರೆ ಈ ಬಾರಿ ಅವರು ಎದುರಿಸುತ್ತಿರುವುದು ನಥನ್ ಲಿಯಾನ್ ಹಾಗೂ ಆಶ್ಟನ್ ಅಗರ್ ಅವರನ್ನು. ಯಾಕೆಂದರೆ ಅವರು ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಸಾಕಷ್ಟು ಪರದಾಡಿದ್ದಾರೆ. ಹಾಗಾಗಿ ನನ್ನ ಪ್ರಕಾರ ಅವರು ಸ್ಪಿನ್ ಬೌಲಿಂಗ್ ಎದುರಿಸಲು ಆಕ್ರಮಂಕಾರಿ ಆಟಕ್ಕೆ ಮುಂದಾಗುವುದು ಉತ್ತಮ. ಯಾಕೆಂದರೆ ಸ್ಪಿನ್ನರ್‌ಗಳ ವಿರುದ್ಧ ಅವರ ಸ್ಟ್ರೈಕ್‌ರೇಟ್ ಕೂಡ ಕಡಿಮೆಯಿದೆ" ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್.

2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ2015ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆಗಿನ ಜಗಳದ ಬಗ್ಗೆ ಆಘಾತಕಾರಿ ವಿಷಯ ಬಿಚ್ಚಿಟ್ಟ ಪಾಕ್ ಮಾಜಿ ವೇಗಿ

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Friday, February 3, 2023, 17:26 [IST]
Other articles published on Feb 3, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X