Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಚಿನ್ನಸ್ವಾಮಿಯಲ್ಲಿ 11 ಜನರ ಸಾವು: "RCB, ರಾಜ್ಯ ಸರ್ಕಾರ 100 ಕೋಟಿ ನೀಡಲಿ"

ಮಂಗಳವಾರ ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್‌ ಫೈನಲ್ ಪಂದ್ಯದಲ್ಲಿ ಆರು ರನ್‌ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನವ ಇತಿಹಾಸ ಬರೆದಿದೆ. ಚೊಚ್ಚಲ ಬಾರಿಗೆ ಕಪ್‌ ಎತ್ತಿದ ಸಂಭ್ರಮಾಚರಣೆಯನ್ನು ಆಚರಣೆ ಬುಧವಾರ ನಗರದ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಿತು. ಕೆಎಸ್‌ಸಿಎ ಆಯೋಜಿಸಿದ್ದ ಕಾರ್ಯಕ್ರಮವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳ ಜನಸಾಗರ ಹರಿದು ಬಂದಿತ್ತು. ಈ ವೇಳೆ ನಡೆಯಬಾರದ ಘಟನೆ ನಡೆದು ಬಿಟ್ಟಿತು.

ಸುಮಾರು 40 ಸಾವಿರ ಜನ ಹಿಡಿಯುವ ಚಿನ್ನಸ್ವಾಮಿ ಮೈದಾನದಲ್ಲಿ ನುಗ್ಗಲು 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ 11 ಜನ ಸಾವನ್ನಪ್ಪಿದ್ದಾರೆ. ಅಲ್ಲದೆ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಮಾಹಿತಿಯಂತೆ 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದ್ರೂ ಸಹ ಅಭಿಮಾನಿಗಳ ಅತಿ ರೇಕದ ವರ್ತನೆಗೆ 11 ಜನರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸುದ್ದಿ ಈಗ ಭಾರಿ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಲವು ಹೇಳಿಕೆಗಳು ಬರುತ್ತಿವೆ.

Former Cricketer Madan Lal Demands 100 Crore Compensation for Bengaluru Stampede Victims

100 ಕೋಟಿ

ಈ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮದನ್‌ಲಾಲ್‌ ಅವರು ಸಹ ದೊಡ್ಡ ಹೇಳಿಕೆ ನೀಡಿದ್ದಾರೆ. ಈ ಘಟನೆಯನ್ನು ಜನ ಸುಲಭವಾಗಿ ನೆನಪು ಹಾರುವುದಿಲ್ಲ. ಜನರು ಹೊರಗಡೆ ಸಾಯುತ್ತಿದ್ದರೆ ಒಳಗಡೆ ಸಂಭ್ರಮಾಚರಣೆಯಲ್ಲಿ ತಂಡ ಮುಳುಗಿತ್ತು. ಈ ನಿರ್ಧಾರ ನಿಜಕ್ಕೂ ಪ್ರಶ್ನೆಗಳು ಏಳುವಂತೆ ಮಾಡಿದೆ. ಮೃತರ ಕುಟುಂಬಗಳಿಗೆ ಆರ್‌ಸಿಬಿ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ 100 ಕೋಟಿ ಪರಿಹಾರ ನೀಡಬೇಕು ಎಂದು ಮದನ್‌ಲಾಲ್‌ ಒತ್ತಾಯಿಸಿದ್ದಾರೆ. ಈ ಪ್ರಕರಣದಿಂದ ಬಿಸಿಸಿಐ ಸಹ ನುಳುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಈ ಘಟನೆಯ ಬಳಿಕ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಸುದ್ದಿಗೋಷ್ಟಿಯನ್ನು ನಡೆಸಿದ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಇನ್ನು ಘಟನೆಯ ಬಗ್ಗೆ ಮಾತನಾಡಿರುವ ಡಿಎಸಿಎಂ ನಾವು ಅಭಿಮಾನಿಗಳನ್ನು ನಿಯಂತ್ರಿಸಲು 5 ಸಾವಿರ ಪೊಲೀಸರನ್ನು ನಿಯೋಜಿಸಿದ್ದೇವು ಎಂದು ಹೇಳಿದರು. ಇನ್ನು ಆರ್‌ಸಿಬಿ ತಂಡ ವಿಮಾನ ನಿಲ್ದಾಣದಿಂದ ತಾಜವೆಸ್ಟ್‌ ಎಂಡಗೆ ಬಂದು ವಿಶ್ರಾಂತಿ ಮಾಡಿತು. ಅಲ್ಲದೆ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ ವೇಳೆ ಓಪನ್ ಬಸ್ ಪೆರೆಡ್ ನಡೆಸುವ ಮಾತುಗಳು ಕೇಳಿ ಬಂದಿದ್ದವು. ಆದರೆ ಕೊನೆಯ ಘಳಿಗೆಯಲ್ಲಿ ಇದನ್ನು ರದ್ದು ಗೊಳಿಸಲಾಯಿತು.

ಘಟನೆಯಲ್ಲಿ ಮೃತ ಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ, ಆರ್‌ಸಿಬಿ ಮ್ಯಾನೇಜ್ಮೆಂಟ್‌ ಪರಿಹಾರವನ್ನು ಘೋಷಿಸಿದೆ. ಆದರೆ ಇದಕ್ಕೂ ಹೆಚ್ಚಿನದನ್ನು ನೀಡಿ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

Story first published: Thursday, June 5, 2025, 20:30 [IST]
Other articles published on Jun 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+