ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿಗೆ ಸೌರವ್ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ಆಯ್ಕೆಯಾಗುವ ಸಾಧ್ಯತೆ; ವರದಿ

Former Cricketer Roger Binny Likely To Replace Sourav Ganguly As BCCI President: Report

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಅವರು ಸೌರವ್ ಗಂಗೂಲಿ ಸ್ಥಾನಕ್ಕೆ ಮುಂದಿನ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕನ್ನಡಿಗ ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಸ್ಥಾನಕ್ಕೆ ಮಾಜಿ ವೇಗಿ ರೋಜರ್ ಬಿನ್ನಿ ಮುಂಚೂಣಿಯಲ್ಲಿದ್ದಾರೆ ಮತ್ತು ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯುವ ನಿರೀಕ್ಷೆಯಿದೆ.

Former Cricketer Roger Binny Likely To Replace Sourav Ganguly As BCCI President: Report

ಅಕ್ಟೋಬರ್ 18ರ ಚುನಾವಣೆ ಮತ್ತು ಗುರುವಾರ ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಬದಲಿಗೆ ರೋಜರ್ ಬಿನ್ನಿ ಅವರ ಹೆಸರು ಬಿಸಿಸಿಐನ ಕರಡು ಮತದಾರರ ಪಟ್ಟಿಗಳಲ್ಲಿ (ಬಿಸಿಸಿಐ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ) ಕಾಣಿಸಿಕೊಂಡಿದೆ. ಇವೆಲ್ಲವೂ ಮಾಜಿ ಸೀಮರ್ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ಊಹಾಪೋಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸಲಿದ್ದಾರೆ.

Former Cricketer Roger Binny Likely To Replace Sourav Ganguly As BCCI President: Report

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 11 ಮತ್ತು 12ರಂದು ನಾಮಪತ್ರಗಳನ್ನು ಭರ್ತಿ ಮಾಡಬಹುದು, ಅಕ್ಟೋಬರ್ 13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಅಕ್ಟೋಬರ್ 14ರೊಳಗೆ ಹಿಂಪಡೆಯಬಹುದು. ಅಕ್ಟೋಬರ್ 18ರಂದು ಮುಂಬೈನಲ್ಲಿ ಚುನಾವಣೆ ನಡೆಯಲಿದೆ.

ರೋಜರ್ ಬಿನ್ನಿ ಕ್ರಿಕೆಟ್ ಸಾಧನೆ
1957 ಜುಲೈ 19ರಂದು ಜನಿಸಿರುವ ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಬಲಗೈ ಬ್ಯಾಟಿಂಗ್ ಶೈಲಿ ಮತ್ತು ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದರು.

ಭಾರತದ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿರುವ ರೋಜರ್ ಬಿನ್ನಿ ಬ್ಯಾಟಿಂಗ್‌ನಲ್ಲಿ 23.06 ಸರಾಸರಿಯಲ್ಲಿ 830 ರನ್ ಗಳಿಸಿದ್ದಾರೆ ಮತ್ತು 5 ಅರ್ಧಶತಕ ಬಾರಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳನ್ನು ಆಡಿರುವ ಅವರು, 16.13 ಸರಾಸರಿಯಲ್ಲಿ 629 ರನ್ ಗಳಿಸಿದ್ದಾರೆ ಮತ್ತು 1 ಅರ್ಧಶತಕ ಬಾರಿಸಿದ್ದಾರೆ.

ಇದೇ ವೇಳೆ ಬೌಲಿಂಗ್‌ನಲ್ಲಿ 27 ಟೆಸ್ಟ್ ಪಂದ್ಯಗಳಿಂದ 47 ವಿಕೆಟ್ ಪಡೆದುಕೊಂಡಿದ್ದಾರೆ ಮತ್ತು 2 ಬಾರಿ 5 ವಿಕೆಟ್ ಗೊಂಚಲು ಗಳಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳಿಂದ 77 ವಿಕೆಟ್ ತೆಗೆದುಕೊಂಡಿದ್ದಾರೆ.

Story first published: Saturday, October 8, 2022, 10:06 [IST]
Other articles published on Oct 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X