ಮಾಜಿ ಕ್ರಿಕೆಟಿಗ ಆರ್‌ಪಿ ಸಿಂಗ್ ತಂದೆ ಕೊರೊನಾಗೆ ಬಲಿ

ದೇಶದಾದ್ಯಂತ ಕೊರೊನಾವೈರಸ್ ಎರಡನೇ ಅಲೆ ಜೋರಾಗಿದ್ದು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕೆಲ ಕ್ರೀಡಾಪಟುಗಳು ಕೊರೊನಾಗೆ ಬಲಿಯಾಗಿದ್ದಾರೆ ಹಾಗೂ ಅನೇಕ ಕ್ರೀಡಾಪಟುಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ.
ಇದೀಗ ಮಾಜಿ ಕ್ರಿಕೆಟಿಗ ಆರ್‌ಪಿ ಸಿಂಗ್ ಅವರ ತಂದೆ ಶಿವ್ ಪ್ರಸಾದ್ ಸಿಂಗ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಿವ್ ಪ್ರಸಾದ್ ಸಿಂಗ್ ಅವರನ್ನು ಲಕ್ನೋ ನಗರದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದನಂತರ ಶಿವ್ ಪ್ರಸಾದ್ ಸಿಂಗ್ ಅವರಿಗೆ ಕೊರೊನಾಸೋಂಕು ದೃಢಪಟ್ಟಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ( ಮೇ 12 ) ಆರ್‌ಪಿ ಸಿಂಗ್ ಅವರ ತಂದೆ ಶಿವ್ ಪ್ರಸಾದ್ ಸಿಂಗ್ ಮೃತಪಟ್ಟಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ ಪಿಯೂಷ್ ಚಾವ್ಲಾ ಅವರ ತಂದೆ ಪ್ರಮೋದ್ ಚಾವ್ಲಾ ಅವರು ಕೊರೊನಾಸೋಂಕಿನಿಂದ ಮೃತಪಟ್ಟಿದ್ದಾಗ ಆರ್‌ಪಿ ಸಿಂಗ್ ಅವರು ಶ್ರದ್ಧಾಂಜಲಿಯನ್ನು ಸಲ್ಲಿಸಿ ಸಂತಾಪ ಸೂಚಿಸಿದ್ದರು.
Story first published: Wednesday, May 12, 2021, 15:55 [IST]
Other articles published on May 12, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications