ಟಿ20 ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಹೇಗೆ ಸ್ಥಾನ ಸಿಕ್ಕಿತು?; ಮಾಜಿ ಕ್ರಿಕೆಟಿಗನ ಅಸಮಾಧಾನ

ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾವಂತ ಆಟಗಾರ ಹಾರ್ದಿಕ್ ಪಾಂಡ್ಯ 7 ಪಂದ್ಯಗಳನ್ನಾಡಿ 52 ರನ್ ಗಳಿಸಿ ನೀರಸ ಪ್ರದರ್ಶನವನ್ನು ನೀಡಿದ್ದರು. ಇದಾದ ಬಳಿಕ ಕೊರೋನಾವೈರಸ್ ಕಾರಣದಿಂದ ಭಾರತ ನೆಲದಲ್ಲಿ ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಇದೀಗ ಯುಎಇಗೆ ಸ್ಥಳಾಂತರಿಸಲ್ಪಟ್ಟಿದ್ದು, ಯುಎಇ ನೆಲದಲ್ಲಿ ಐಪಿಎಲ್ ಮುಂದುವರಿದ ಮೇಲೆ ಮುಂಬೈ ಇಂಡಿಯನ್ಸ್ ತಂಡ ಒಟ್ಟು 2 ಪಂದ್ಯಗಳನ್ನಾಡಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಸೋತಿದ್ದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.

ಐಪಿಎಲ್ ರದ್ದು ಭೀತಿ; ಚೆನ್ನೈ ಆಟಗಾರರನ್ನು ಮುದುಕರಿಗೆ ಹೋಲಿಸಿದ ವಿರೇಂದ್ರ ಸೆಹ್ವಾಗ್!ಐಪಿಎಲ್ ರದ್ದು ಭೀತಿ; ಚೆನ್ನೈ ಆಟಗಾರರನ್ನು ಮುದುಕರಿಗೆ ಹೋಲಿಸಿದ ವಿರೇಂದ್ರ ಸೆಹ್ವಾಗ್!

ಅದರಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ 2 ಪಂದ್ಯಗಳನ್ನು ಸಾಲುಸಾಲಾಗಿ ಸೋತಿದ್ದರ ಹಿಂದಿನ ಕಾರಣ ಕೆದಕಿದ ಹಲವಾರು ಮಂದಿಗೆ ಹೆಚ್ಚಾಗಿ ಕಾಡಿದ ಪ್ರಶ್ನೆ ಎರಡೂ ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡದ ಆಡುವ ಬಳಗದಲ್ಲಿ ಹಾರ್ದಿಕ್ ಪಾಂಡ್ಯಗೆ ಯಾಕೆ ಅವಕಾಶ ನೀಡಿಲ್ಲ ಎಂಬುದು. ಹೌದು ಯುಎಇಯಲ್ಲಿ ಐಪಿಎಲ್ ಪುನರಾರಂಭವಾದ ಬಳಿಕ ಮುಂಬೈ ಇಂಡಿಯನ್ಸ್ ಆಡಿರುವ ಎರಡೂ ಪಂದ್ಯಗಳಲ್ಲಿಯೂ ತಮ್ಮ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯಗೆ ಆಡುವ ಅವಕಾಶವನ್ನೇ ನೀಡಿಲ್ಲ. ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಕ್ಕೊಳಗಾಗಿದ್ದ ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣ ಈ ಎರಡೂ ಪಂದ್ಯಗಳಲ್ಲಿ ಅವರಿಗೆ ಅವಕಾಶವನ್ನು ನೀಡಿಲ್ಲ, ಮುಂದಿನ ಪಂದ್ಯಗಳಲ್ಲಿ ಪಾಂಡ್ಯ ಚೇತರಿಸಿಕೊಂಡು ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ತಂಡ ತಿಳಿಸಿದೆ.

'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್

ಹೀಗೆ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿಲ್ಲ ಎಂಬ ವಿಷಯ ತಿಳಿದ ಕೂಡಲೇ ಹಲವಾರು ಮಂದಿ ಈ ಕುರಿತಾಗಿ ಪ್ರಶ್ನೆಗಳನ್ನು ಹಾಕುತ್ತಿದ್ದು ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಕೂಡ ಮಾತನಾಡಿದ್ದು ತಮ್ಮ ಪ್ರಶ್ನೆಗಳನ್ನು ಈ ಕೆಳಕಂಡಂತೆ ಕೇಳಿದ್ದಾರೆ.

ಇನ್ನೂ ಚೇತರಿಸಿಕೊಳ್ಳದ ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಹೇಗೆ ಸಿಕ್ತು?

ಇನ್ನೂ ಚೇತರಿಸಿಕೊಳ್ಳದ ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಹೇಗೆ ಸಿಕ್ತು?

ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ನೀಡಿ ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯಾಗೆ ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡದಲ್ಲಿ ಸ್ಥಾನ ಹೇಗೆ ಸಿಕ್ಕಿತು ಎಂಬ ಪ್ರಶ್ನೆಯನ್ನು ಸಬಾ ಕರೀಮ್ ಹಾಕಿದ್ದಾರೆ. ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂಬ ವಿಷಯ ತಿಳಿದಿದ್ದರೂ ಕೂಡ ಆತನನ್ನು ಟಿ ಟ್ವೆಂಟಿ ವಿಶ್ವಕಪ್ ತಂಡಕ್ಕೆ ಯಾವ ಆಧಾರದ ಮೇಲೆ ಪರಿಗಣಿಸಿದ್ದೀರಿ ಎಂದು ಆಯ್ಕೆಗಾರರಿಗೆ ಸಬಾ ಕರೀಮ್ ಪ್ರಶ್ನೆ ಎಸೆದಿದ್ದಾರೆ.

ಪಾಂಡ್ಯಗೆ ಏನಾಯ್ತು ಎಂಬ ಮಾಹಿತಿಯೇ ಇಲ್ಲ

ಪಾಂಡ್ಯಗೆ ಏನಾಯ್ತು ಎಂಬ ಮಾಹಿತಿಯೇ ಇಲ್ಲ

ಇನ್ನೂ ಮುಂದುವರೆದು ಪಾಂಡ್ಯ ಗಾಯದ ಸಮಸ್ಯೆಯ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಸಬಾ ಕರೀಮ್ 'ಅಸಲಿಗೆ ಹಾರ್ದಿಕ್ ಪಾಂಡ್ಯಗೆ ಏನಾಗಿದೆ, ಅವರ ಆರೋಗ್ಯದ ಸ್ಥಿತಿ ಹೇಗಿದೆ ಮತ್ತು ಯಾವ ಹಂತದಲ್ಲಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಸಹ ಬಿಟ್ಟುಕೊಡುತ್ತಿಲ್ಲ. ಸದ್ಯ ಐಪಿಎಲ್ ಟೂರ್ನಿಯಲ್ಲಿಯೂ ಕಣಕ್ಕಿಳಿಯದ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಿ ನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆಡಲು ಅರ್ಹರಿದ್ದಾರೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಸಬಾ ಕರೀಮ್ ಅಭಿಪ್ರಾಯಪಟ್ಟಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, September 24, 2021, 17:26 [IST]
Other articles published on Sep 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X