ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ನಾಯಕ ಜೋ ರೂಟ್ ರಣತಂತ್ರಕ್ಕೆ ಶೇನ್ ವಾರ್ನ್ ಕಿಡಿ

Former cricketer Shane Warne criticises England for horrible tactics

ಲಂಡನ್, ಆಗಸ್ಟ್ 16: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಅಂತಿಮ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಈ ಮೂಲಕ ಗೆಲುವು ಸಾಧಿಸುವ ಅವಕಾಶವನ್ನು ಹೊಂದಿದೆ. ಸೋಲಿನ ಭೀತಿಯನ್ನು ಎದುರಿಸುತ್ತಿದ್ದ ಭಾರತಕ್ಕೆ ಅಂತಿಮ ದಿನ ಭಾರತದ ಕೆಳ ಕ್ರಮಾಂಕದ ಆಟಗಾರರು ನೀಡಿದ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಪಂದ್ಯ ಇಂಗ್ಲೆಂಡ್ ಹಿಡಿತದಿಂದ ಭಾರತದ ಮುಷ್ಠಿಗೆ ಬಂದಿತ್ತು. ಈ ಮೂಲಕ ಟೀಮ್ ಇಂಡಿಯಾ ಗೆಲುವಿನ ಹೊಂದುವಂತಾಗಿದೆ.

ಅಂತಿಮ ದಿನದಾಟದಲ್ಲಿ ಕೆಳ ಕ್ರಮಾಂಕದ ಆಟಗಾರರಾದ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾ ಅದ್ಭುತ ಪ್ರದರ್ಶನ ನೀಡಿದರು. ಈ ಇಬ್ಬರು ಆಟಗಾರರನ್ನು ಔಟ್ ಮಾಡಲು ಇಂಗ್ಲೆಂಡ್ ಬೌಲರ್‌ಗಳಿಗೆ ಸಾಧ್ಯವಾಗಲೇ ಇಲ್ಲ. ಇದೇ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ತೆಗೆದುಕೊಂಡ ನಿರ್ಧಾರಕ್ಕೆ ಶೇನ್ ವಾರ್ನ್ ಕಿಡಿ ಕಾರಿದ್ದಾರೆ. ಇಂಗ್ಲೆಂಡ್ ನಾಯಕ ತೆಗೆದುಕೊಂಡ ನಿರ್ಧಾರ ಭಯಾನಕವಾಗಿತ್ತು ಎಂದು ಶೇನ್ ವಾರ್ನ್ ಹೇಳಿದ್ದಾರೆ.

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಲು ಇಂಗ್ಲೆಂಡ್ ತಂಡದ ನಾಯಕ ಶೇನ್ ವಾರ್ನ್ ತೆಗೆದುಕೊಂಡ ನಿರ್ಧಾರಗಳೇ ಕಾರಣ ಎಂದು ವಾರ್ನ್ ಅಭಿಪ್ರಾಯಪಟ್ಟಿದ್ದಾರೆ. ಐದನೇ ದಿನದಾಟದಲ್ಲಿ ರಿಷಬ್ ಪಂತ್ ವಿಕೆಟ್‌ಅನ್ನು ಶೀಘ್ರವಾಗಿ ಪಡೆಯುವಲ್ಲಿ ಇಂಗ್ಲೆಂಡ್ ತಂಡ ಸಫಲವಾದರೂ ಭಾರತ ತನ್ನ ಮುನ್ನಡೆಯನ್ನು 200 ರನ್‌ಗಳಿಗೂ ಹೆಚ್ಚಿಗೆ ಸೇರಿಸಲು ಇಂಗ್ಲೆಂಡ್ ತಂಡದ ನಾಯಕ ಫೀಲ್ಟಿಂಗ್‌ನಲ್ಲಿ ತೆಗೆದುಕೊಂಡ ನಿರ್ಧಾರಗಳು ಕಾರಣವಾಗಿದೆ ಎಂದಿದ್ದಾರೆ ವಾರ್ನ್. ಮುರಿಯದ 9ನೇ ವಿಕೆಟ್‌ಗೆ ಮೊಹಮ್ಮದ್ ಶಮಿ ಹಾಗೂ ಬೂಮ್ರಾ 75ಕ್ಕೂ ಅಧಿಕ ರನ್‌ಗಳನ್ನು ಪೇರಿಸುವಲ್ಲಿ ಯಶಸ್ವಿಯಾಗಿದ್ದರು.

ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!

ಈ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. "ಇಂಗ್ಲೆಂಡ್ ಕಡೆಯಿಂದ ಭಯಾನಕ ರಣತಂತ್ರ. ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಬಲ್ಲ ಬೌಲರ್‌ಗಳು ಬೌಂಡರಿ ಗೆರೆಯ ಸನಿಹದಲ್ಲಿ 5-6 ಬೌಲರ್‌ಗಳ ಅಗತ್ಯವಿಲ್ಲ ಎಂದು ಯಾಕೆ ಹೇಳುವುದಿಲ್ಲ. ಇಂಗ್ಲೆಂಡ್ ಈ ರನ್‌ಗಳನ್ನು ಗಳಿಸುತ್ತದೆಯಾ? ನ್ಯೂಜಿಲೆಂಡ್ 27 ಓವರ್‌ಗಳಲ್ಲಿ 270 ರನ್‌ಗಳ ಗುರಿ ನೀಡಿದ್ದಾಗ ಇಂಗ್ಲೆಂಡ್ ಆ ಮೊತ್ತವನ್ನು ಬೆನ್ನಟ್ಟುವ ಗೋಜಿಗೆ ಹೋಗಿರಲಿಲ್ಲ. ಈ ಪಂದ್ಯವನ್ನು ಭಾರತ ಗೆಲ್ಲಲಿದೆ ಅಥವಾ ಡ್ರಾ ಗೊಳಿಸಲಿದೆ" ಎಂದು ವಾರ್ನ್ ಹೇಳಿಕೆ ನೀಡಿದ್ದಾರೆ.

ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ತಡವಾಗಿ ರಕ್ಷಣಾತ್ಮನಕವಾಗಿ ಆಡಲು ಪ್ರಯತ್ನಿಸಿತು ಎಂದಿದ್ದಾರೆ. ಈ ವರ್ಷಾರಂಭದಲ್ಲಿ ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 70 ಓವರ್‌ಗಳು ಇದ್ದಾಗಲೂ 273 ರನ್‌ಗಳ ಗುರಿಯನ್ನು ಬೆನ್ನಟ್ಟುವ ಬದಲು ಇಂಗ್ಲೆಂಡ್ ಇದೇ ಲಾರ್ಡ್ಸ್ ಅಂಗಳದಲ್ಲಿ ಡ್ರಾ ಮಾಡಿಕೊಂಡಿತ್ತು. ಇದೇ ಹಿನ್ನೆಲೆಯಲ್ಲಿ ಮಾತನಾಡಿದ ಶೇನ್ ವಾರ್ನ್ ಭಾರತ ಈ ಪಂದ್ಯವನ್ನು ಗೆಲ್ಲಲಿದೆ ಅಂತಾ ಡ್ರಾ ಮಾಡಿಕೊಳ್ಳಲಿದೆ ಎಂದಿದ್ದಾರೆ.

ಭಾರತ ಆಡುವ ಬಳಗ:
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ, , ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.
ಬೆಂಚ್: ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್, ಅಕ್ಸರ್ ಪಟೇಲ್, ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ವೃದ್ಧಿಮಾನ್ ಸಹಾ.

ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೊ, ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆ್ಯಂಡರ್ಸನ್, ಮಾರ್ಕ್ ವುಡ್.
ಬೆಂಚ್: ಝ್ಯಾಕ್ ಕ್ರಾಲಿ, ಕ್ರೇಗ್ ಓವರ್‌ಟನ್, ಸಾಕಿಬ್ ಮಹಮೂದ್, ಡೇನಿಯಲ್ ಲಾರೆನ್ಸ್, ಓಲ್ಲಿ ಪೋಪ್, ಜ್ಯಾಕ್ ಲೀಚ್.

Story first published: Monday, August 16, 2021, 21:31 [IST]
Other articles published on Aug 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X