Virat Kohli: ವಿರಾಟ್ ಕೊಹ್ಲಿ ಟಿ20 ನಿವೃತ್ತಿ ಸರಿಯಲ್ಲ ಎಂದ ಸಿಎಸ್‌ಕೆ ಮಾಜಿ ಬ್ಯಾಟರ್
ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡುವ ಮೂಲಕ ಗೆಲುವಿನಲ್ಲೂ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಗುರವಾರ ನಡೆದ ಐಪಿಎಲ್ 2025 ರ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ವಿರಾಟ್ ಕೊಹ್ಲಿ ಗೆಲುವಿನ ನಡೆ ಮುನ್ನಡೆಸಿದರು. ರಾಜಸ್ಥಾನ ವಿರುದ್ಧ ಬಿರುಸಿನ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಿಗ್ ಸ್ಕೋರ್ ಕಲೆ ಹಾಕಲು ನೆರವಾದರು.
ವಿರಾಟ್ ಕೊಹ್ಲಿ ಅವರ ಈ ಅದ್ಭುತ ಇನ್ನಿಂಗ್ಸ್ ನೋಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಬ್ಯಾಟರ್ ಸುರೇಶ್ ರೈನಾ ಪ್ರತಿಕ್ರಿಯೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವುದು ಸರಿಯಲ್ಲ. ಅವರು ಈಗ ನಿವೃತ್ತಿ ಹೊಂದಬಾರದಿತ್ತು ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರು ಭಾರತ 2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದರು. ಆದರೆ ಪ್ರಸ್ತುತ ಅವರು ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ರಾಜಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಅವರು 42 ಎಸೆತಗಳಲ್ಲಿ 70 ರನ್ ಗಳಿಸಿದರು. ಈ ಇನ್ನಿಂಗ್ಸ್ ನಂತರ ಸುರೇಶ್ ರೈನಾ ಅವರು ವಿರಾಟ್ ಕೊಹ್ಲಿ ಕುರಿತು ಹೇಳಿಕೆ ನೀಡಿದ್ದಾರೆ.
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಿಂದ ಬೇಗನೆ ನಿವೃತ್ತಿ ಪಡೆದಿದ್ದಾರೆ ಎಂದು ನಾನು ಇನ್ನೂ ನಂಬುತ್ತೇನೆ. ಅವರು 2026 ರವರೆಗೆ ಆಡಬಹುದಿತ್ತು. ಅವರು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲೂ ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಅವರು ತಮ್ಮ ಫಿಟ್ನೆಸ್ ಅನ್ನು ಕಾಯ್ದುಕೊಂಡ ರೀತಿ. ಅವರನ್ನು ನೋಡಿದರೆ ಅವರು ಇನ್ನೂ ಉತ್ತುಂಗದಲ್ಲಿದ್ದಾರೆ ಎಂದು ತೋರುತ್ತದೆ ಎಂದು ಸುರೇಶ್ ರೈನಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2025ರಲ್ಲಿ ಇದುವರೆಗೆ ವಿರಾಟ್ ಕೊಹ್ಲಿ 9 ಪಂದ್ಯಗಳನ್ನು ಆಡಿದ್ದು, 392 ರನ್ ಗಳಿಸಿದ್ದಾರೆ. ಕೊಹ್ಲಿ ಅಬ್ಬರಿಸುವ ಎಲ್ಲಾ ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ. ಇಲ್ಲಿವರೆಗೆ ಅವರ ಅತ್ಯುತ್ತಮ ಸ್ಕೋರ್ ಅಜೇಯ 73 ರನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications