ಕೊಹ್ಲಿ ಅಲ್ಲ, ರಾಹುಲ್ ಅಲ್ಲ; ಟಿ20 ವಿಶ್ವಕಪ್‌ಗಾಗಿ ಅಗ್ರ 3 ಆಟಗಾರರನ್ನು ಆಯ್ಕೆ ಮಾಡಿದ ಗಂಭೀರ್

ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ ತಂಡವು ಟೀಮ್ ಇಂಡಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ ಆತಿಥೇಯ ಭಾರತ ತಂಡಕ್ಕೆ ಸೋಲುಣಿಸಿ ಸರಣಿಯಲ್ಲಿ 2-0 ಅಂತರದ ಮುನ್ನಡೆಯನ್ನು ಸಾಧಿಸಿದೆ.
ಇತ್ತಂಡಗಳ ನಡುವೆ ಜೂನ್ 9ರಂದು ನಡೆದ ಪ್ರಥಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ್ದ 212 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಜಯ ಸಾಧಿಸಿತ್ತು ಹಾಗೂ ಕಟಕ್ ನಗರದ ಬಾರಾಬತಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಜೂನ್ 12) ನಡೆದ ದ್ವಿತೀಯ ಟಿ20 ಪಂದ್ಯದಲ್ಲಿಯೂ ಕೂಡ ಟೀಮ್ ಇಂಡಿಯಾ ನೀಡಿದ್ದ 149 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಸತತ 2 ಗೆಲುವು ಸಾಧಿಸಿದೆ. ಸರಣಿಯನ್ನು ಕೈವಶಮಾಡಿಕೊಳ್ಳಲು ಇನ್ನೊಂದು ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದೆ.

ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್
ಇದರ ನಡುವೆಯೇ ಮಾಜಿ ಎಡಗೈ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಆಸ್ಟ್ರೇಲಿಯಾದಲ್ಲಿ ನಡೆಯುವ ಮುಂಬರುವ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳನ್ನು ಆಯ್ಕೆ ಮಾಡಿದ್ದಾರೆ. ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅಗ್ರ ಮೂವರು ಬ್ಯಾಟರ್‌ಗಳಾಗಿ ಆಯ್ಕೆಯಾಗಿದ್ದಾರೆ.
2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಇಶಾನ್ ಕಿಶನ್ ಉತ್ತಮ ಫಾರ್ಮ್‌ನಲ್ಲಿ ಇರಲಿಲ್ಲ, ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೆನ್ ಇನ್ ಬ್ಲೂ ತಂಡಕ್ಕಾಗಿ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇಶಾನ್ ಕಿಶನ್ ಬೆಂಬಲಿಸಿದ ಗೌತಮ್ ಗಂಭೀರ್
ಮೂರು ಮಾದರಿಯ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಇಶಾನ್ ಕಿಶನ್ ಅವರನ್ನು ಗೌತಮ್ ಗಂಭೀರ್ ಬೆಂಬಲಿಸಿದ್ದಾರೆ. ಇನ್ನು ಗಂಭೀರ್ ಅವರು ಐಸಿಸಿ ವಿಶ್ವಕಪ್ ಮೆಗಾ ಈವೆಂಟ್‌ನಲ್ಲಿ ನಂ.3ರಲ್ಲಿ ಬ್ಯಾಟಿಂಗ್ ಮಾಡಲು ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದರು.
"ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿದ್ದರೆ ಮತ್ತು ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಬೇಕು," ಎಂದು ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೆಎಲ್ ರಾಹುಲ್, ಕೊಹ್ಲಿ ಕೈಬಿಟ್ಟ ಗಂಭೀರ್
ಗೌತಮ್ ಗಂಭೀರ್ ಮೊದಲ ಮೂರು ಸ್ಥಾನಗಳಿಗೆ ಕೆಎಲ್ ರಾಹುಲ್ ಮತ್ತು ಮಾಜಿ ರಾಷ್ಟ್ರೀಯ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡಲಿಲ್ಲ. ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿಲ್ಲ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿಯುವ ಮೊದಲು ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್‌ಗೆ ಸಾಕಷ್ಟು ಉತ್ತಮ ಪ್ರದರ್ಶನ ನೀಡಿದ್ದರು.
ಇದೇ ವೇಳೆ ಗೌತಮ್ ಗಂಭೀರ್ ಕೂಡ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರ ಫಾರ್ಮ್ ಬಗ್ಗೆ ಸ್ವಲ್ಪ ಚಿಂತಿತರಾಗಿದ್ದರು. ಜೂನ್ 12ರಂದು ಭಾನುವಾರದ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 4-0-49-1 ಅಂಕಿ-ಅಂಶಗಳೊಂದಿಗೆ ಪಂದ್ಯವನ್ನು ಮುಗಿಸಿದರು. ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ20 ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಸೋತಿತು.

ಉಳಿದ ಮೂರೂ ಪಂದ್ಯಗಳನ್ನು ಸತತವಾಗಿ ಗೆಲ್ಲಬೇಕಿದೆ
"ನೀವು 4 ಓವರ್‌ಗಳಲ್ಲಿ 50 ರನ್ ನೀಡಿದರೂ, ನಿಮ್ಮ ತಂಡದ ಗೆಲುವಿಗೆ ಸಹಾಯ ಮಾಡುವ ಪರಿಸ್ಥಿತಿಯಲ್ಲಿ ನೀವು 3 ವಿಕೆಟ್‌ಗಳನ್ನು ಪಡೆಯಬೇಕು. ಆದರೆ ನೀವು 4 ಓವರ್‌ಗಳಲ್ಲಿ 40 ಅಥವಾ 50 ನೀಡಿ ಕೇವಲ ಒಂದು ವಿಕೆಟ್ ಪಡೆದರೆ ಅದು ಸಹಾಯವಾಗುವುದಿಲ್ಲ," ಎಂದು ಗಂಭೀರ್ ಅಭಿಪ್ರಾಯಪಟ್ಟರು.
ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಮತ್ತು ಅವರ ತಂಡಕ್ಕೆ 0-2 ಮುನ್ನಡೆಯನ್ನು ಬಿಟ್ಟುಕೊಟ್ಟ ನಂತರ ಭಾರತ ತಂಡವು ಜೂನ್ 14, ಮಂಗಳವಾರದಂದು ತಮ್ಮ ಮೊದಲ ಪಂದ್ಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ ಮತ್ತು ಈ ಸರಣಿಯನ್ನು ವಶಪಡಿಸಿಕೊಳ್ಳಬೇಕಾದರೆ ಉಳಿದ ಮೂರೂ ಪಂದ್ಯಗಳನ್ನು ಸತತವಾಗಿ ಗೆಲ್ಲಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications