ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಭವಿಷ್ಯದ ಕುರಿತು ಸುನಿಲ್ ಗವಾಸ್ಕರ್ ಹೇಳಿದ್ದೇನು?

Former Indian Cricketer Sunil Gavaskar Reaction on Rohit Sharma And Virat Kohlis T20 Cricket Future

ಜನವರಿ 18ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 18ರಂದು ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ.

ಇನ್ನು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಕೆಲವು ದಿನಗಳಿಂದ ಟಿ20 ಕ್ರಿಕೆಟ್‌ನಿಂದ ದೂರ ಉಳಿದಿರುವುದಕ್ಕೆ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯೇ ಕಾರಣ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸೋಮವಾರ ಹೇಳಿದ್ದಾರೆ.

ಇಬ್ಬರು ಶ್ರೇಷ್ಠ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಳ್ಳದಿರಲು ಬಿಸಿಸಿಐ ಆಯ್ಕೆ ಸಮಿತಿಯು ತೆಗೆದುಕೊಂಡ ನಿರ್ಧಾರದ ಬಗ್ಗೆ ಕೇಳಿದಾಗ, ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುಂಚಿತವಾಗಿ ಅವರಿಗೆ ವಿಶ್ರಾಂತಿ ನೀಡುವುದು ಮತ್ತು ಮುಂದಿನ ಟಿ20 ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರರಿಗೆ ಅವಕಾಶಗಳನ್ನು ನೀಡುವುದು ಬಿಸಿಸಿಐ ನಿರ್ಧಾರದ ಹಿಂದಿನ ಪ್ರಮುಖ ಕಾರಣ ಎಂದು ಸುನಿಲ್ ಗವಾಸ್ಕರ್ ಹೇಳಿದರು.

IND vs NZ 1st ODI: ಭಾರತ vs ನ್ಯೂಜಿಲೆಂಡ್ ಸಂಭಾವ್ಯ 11ರ ಬಳಗ; ಗಾಯಾಳು ಶ್ರೇಯಸ್ ಬದಲಿಗೆ ಸೂರ್ಯ?IND vs NZ 1st ODI: ಭಾರತ vs ನ್ಯೂಜಿಲೆಂಡ್ ಸಂಭಾವ್ಯ 11ರ ಬಳಗ; ಗಾಯಾಳು ಶ್ರೇಯಸ್ ಬದಲಿಗೆ ಸೂರ್ಯ?

"ನನ್ನ ಪ್ರಕಾರ, ಮುಂದಿನ 2024ರ ಟಿ20 ವಿಶ್ವಕಪ್ ಮತ್ತು ಬಂದಿರುವ ಹೊಸ ಆಯ್ಕೆ ಸಮಿತಿಯು ಕಿರಿಯ ಆಟಗಾರರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಬಯಸುತ್ತಿದೆ. ಹಾಗೆಂದು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಇನ್ಮುಂದೆ ಪರಿಗಣಿಸಲಾಗುವುದಿಲ್ಲ ಎಂದಲ್ಲ. ಅವರು 2023ರ ಉದ್ದಕ್ಕೂ ಉತ್ತಮ ಫಾರ್ಮ್ ಹೊಂದಿದ್ದರೆ ಅವರು ತಂಡದಲ್ಲಿ ಇರಬೇಕು," ಎಂದು ಮಾಜಿ ಭಾರತೀಯ ಬ್ಯಾಟರ್ ಸುನಿಲ್ ಗವಾಸ್ಕರ್ ತಿಳಿಸಿದರು.

Former Indian Cricketer Sunil Gavaskar Reaction on Rohit Sharma And Virat Kohlis T20 Cricket Future

"ಇನ್ನೊಂದು ಅಂಶವೆಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸರಣಿಗಾಗಿ, ಆಯ್ಕೆಗಾರರು ಅವರಿಗೆ ವಿಶ್ರಾಂತಿ ನೀಡಲು ಬಯಸಿರಬಹುದು. ಇದರಿಂದಾಗಿ ಅವರು ಆಸೀಸ್ ವಿರುದ್ಧ ಹೊಸ ಆರಂಭವನ್ನು ಮಾಡಬಹುದು ಮತ್ತು ಅದು ಭಾರತ ತಂಡಕ್ಕೆ ಪ್ರಯೋಜನವನ್ನು ನೀಡುತ್ತದೆ," ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು, ನಂತರ ದೆಹಲಿ, ಧರ್ಮಶಾಲಾ ಮತ್ತು ಅಹ್ಮದಾಬಾದ್‌ನಲ್ಲಿ ಉಳಿದ ಪಂದ್ಯಗಳು ನಡೆಯಲಿವೆ.

IND vs NZ: ಈತನಿಗಾಗಿ ವಿರಾಟ್ ಕೊಹ್ಲಿ 3ನೇ ಸ್ಥಾನವನ್ನು ತ್ಯಾಗ ಮಾಡಬೇಕು ಎಂದ ಸಂಜಯ್ ಮಂಜ್ರೇಕರ್IND vs NZ: ಈತನಿಗಾಗಿ ವಿರಾಟ್ ಕೊಹ್ಲಿ 3ನೇ ಸ್ಥಾನವನ್ನು ತ್ಯಾಗ ಮಾಡಬೇಕು ಎಂದ ಸಂಜಯ್ ಮಂಜ್ರೇಕರ್

ಭಾರತದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಚುಟುಕು ಕ್ರಿಕೆಟ್‌ ಸ್ವರೂಪದಲ್ಲಿ ಹೆಚ್ಚಿನ ರನ್ ಗಳಿಸಿದವರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಈ ಜೋಡಿ ಕಳೆದ ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್‌ನಿಂದ ಯಾವುದೇ ಟಿ20 ಪಂದ್ಯಗಳನ್ನು ಆಡಿಲ್ಲ. ಅವರು ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಸರಣಿಯನ್ನು ಹೊರಗುಳಿದರು ಮತ್ತು ಜನವರಿ 2023ರಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಆಯ್ಕೆ ಮಾಡಿದ ಭಾರತ ತಂಡದ ಭಾಗವಾಗಿಲ್ಲ.

ನ್ಯೂಜಿಲೆಂಡ್ ವಿರುದ್ಧ ಸರಣಿಗಳಿಗೆ ಭಾರತದ ತಂಡ
ಏಕದಿನ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಪೃಥ್ವಿ ಶಾ, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ಉಪನಾಯಕ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

Story first published: Wednesday, January 18, 2023, 5:50 [IST]
Other articles published on Jan 18, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X