ಈ ಕಾರಣಕ್ಕಾಗಿ ಬಿಸಿಸಿಐ ಮತ್ತು ಭಾರತ ತಂಡವನ್ನು ಶ್ಲಾಘಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ

ತಮ್ಮ ಆಟಗಾರರನ್ನು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ತಮ್ಮ ಆಟದ ಸಮಯವನ್ನು ನಿರ್ವಹಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅನ್ನು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಶ್ಲಾಘಿಸಿದ್ದಾರೆ.
ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಡ್ಯಾನಿಶ್ ಕನೇರಿಯಾ, ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐ ಮತ್ತು ಎನ್‌ಸಿಎ ಜೊತೆ ಕೆಲಸ ಮಾಡುತ್ತವೆ, ಏಕೆಂದರೆ ಐಪಿಎಲ್‌ಗಿಂತ ದೇಶದ ಕ್ರಿಕೆಟ್ ಅವರ ಆದ್ಯತೆಯಾಗಿದೆ ಎಂದರು.
"ಐಪಿಎಲ್ ಫ್ರಾಂಚೈಸಿಗಳಲ್ಲಿ ತಮ್ಮ ಆಟಗಾರರ ಕೆಲಸದ ಹೊರೆಯನ್ನು ನಿರ್ವಹಿಸುವ ಈ ಕಲ್ಪನೆಯನ್ನು ಅನುಮೋದಿಸುವ ಸಂವೇದನಾಶೀಲ ಜನರಿದ್ದಾರೆ. ರಾಷ್ಟ್ರೀಯ ತಂಡವನ್ನು ತಮ್ಮ ಮೊದಲ ಆದ್ಯತೆಯಾಗಿ ಇರಿಸಲು ಬಿಸಿಸಿಐ ಮತ್ತು ಎನ್‌ಸಿಎನೊಂದಿಗೆ ಸಹಕರಿಸುತ್ತಾರೆ," ಎಂದು ಡ್ಯಾನಿಶ್ ಕನೇರಿಯಾ ಹೇಳಿದರು.
ಇದೇ ವೇಳೆ ಪಾಕಿಸ್ತಾನ ಕ್ರಿಕೆಟ್ ಆಟಗಾರರ ವಿರುದ್ಧ ವಾಗ್ದಾಳಿ ನಡೆಸಿದ ಕನೇರಿಯಾ, ಅವರು ತಮ್ಮ ರಾಷ್ಟ್ರೀಯ ತಂಡಕ್ಕಿಂತ ಪಾಕಿಸ್ತಾನ ಸೂಪರ್ ಲೀಗ್ ಅನ್ನು ಆಡುತ್ತಿದ್ದಾರೆ ಎಂದು ಹೇಳಿದರು.

ಎಲ್ಲ ಆಟಗಾರರೂ ಪಿಎಸ್ಎಲ್ ಆಡಲು ಬಯಸುತ್ತಾರೆ
"ಪಾಕಿಸ್ತಾನದಲ್ಲಿ ಈ ಪರಿಸ್ಥಿತಿಗಳನ್ನು ನೋಡಲು ಸಾಧ್ಯವಾಗುವುದಿಲ್ಲ. ಏಕೆಂದರೆ, ಎಲ್ಲ ಆಟಗಾರರೂ ಪಿಎಸ್ಎಲ್ ಆಡಲು ಬಯಸುತ್ತಾರೆ ಮತ್ತು ದೇಶವು ಎರಡನೇ ಆದ್ಯತೆಯಾಗಿದೆ," ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ಡ್ಯಾಬಿಶ್ ಕನೇರಿಯಾ ಟೀಕಿಸಿದರು.
ಟೀಂ ಇಂಡಿಯಾದ ಪ್ರಮುಖ ಆಟಗಾರರ ಕೆಲಸದ ಹೊರೆಗಳನ್ನು ನಿರ್ವಹಿಸಲು ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐ ಜೊತೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಶ್ಲಾಘಿಸಿದರು.

ಭಾರತ ತಮ್ಮ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಅಗತ್ಯ
"ಕಳೆದ ವರ್ಷ ಗಾಯಾಳುಗಳಾದ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅನುಪಸ್ಥಿತಿ ಭಾರತ ತಂಡವನ್ನು ಹೇಗೆ ಬಾಧಿಸಿದವು ಎಂಬುದನ್ನು ನಾವು ನೋಡಿದ್ದೇವೆ. ಈ ವೇಳೆ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐನೊಂದಿಗೆ ಸಹಕರಿಸಿರುವುದು ಬಹಳ ಮುಖ್ಯ. ರೋಹಿತ್ ಶರ್ಮಾ ಕೂಡ ಆಗಾಗ್ಗೆ ಗಾಯಕ್ಕೆ ತುತ್ತಾಗಿದ್ದಾರೆ," ಎಂದು ಡ್ಯಾನಿಶ್ ಕನೇರಿಯಾ ತಿಳಿಸಿದರು.
ಮುಂದಿನ ಏಕದಿನ ವಿಶ್ವಕಪ್‌ಗಾಗಿ ಭಾರತ ತಮ್ಮ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಇದನ್ನು ಬಿಸಿಸಿಐ ಅರಿತುಕೊಂಡಿದೆ ಎಂದು ಮಾಜಿ ಲೆಗ್ ಸ್ಪಿನ್ನರ್ ಕನೇರಿಯಾ ಹೇಳಿದರು.

ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ತಂಡದ ಶಕ್ತಿ
"ಭಾರತ ತಮ್ಮ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹವರನ್ನು ಗಾಯಗಳಿಂದ ಕಳೆದುಕೊಂಡರೆ ಅವರು ದೊಡ್ಡ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಬಿಸಿಸಿಐ ತಮ್ಮ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಅರಿತುಕೊಂಡಿರುವುದು ಒಳ್ಳೆಯದು," ಎಂದು ಡ್ಯಾನಿಶ್ ಕನೇರಿಯಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.
ಭಾರತ ಕ್ರಿಕೆಟ್ ತಂಡವು ಜನವರಿ 3ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಶ್ರೀಲಂಕಾ ವಿರುದ್ಧದ ಭಾರತದ ಟಿ20 ಸರಣಿಗೆ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯಂತಹವರಿಗೆ ವಿಶ್ರಾಂತಿ ನೀಡಲಾಗಿದೆ ಮತ್ತು ಏಕದಿನ ಸರಣಿಗೆ ಇವರೆಲ್ಲರೂ ಮರಳಲಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡ
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications