ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ನಾಯಕತ್ವ ತೊರೆದ ವಿರಾಟ್ ಕೊಹ್ಲಿ ಬಗ್ಗೆ ಶಾಹಿದ್ ಅಫ್ರಿದಿ ಕುತೂಹಲಕಾರಿ ಹೇಳಿಕೆ!

Former Pakistan captain Shahid Afridi backs Virat Kohli decision of quit test captaincy

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲು ಕಂಡ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೂ ವಿದಾಯ ಹೇಳಿದ್ದಾರೆ. ಟಿ20 ಹಾಗೂ ಏಕದಿನ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಬಳಿಕ ಟೆಸ್ಟ್ ಮಾದರಿಗೂ ವಿರಾಟ್ ಕೊಹ್ಲಿ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಅಚ್ಚರಿಯುಂಟು ಮಾಡಿದೆ. ವಿರಾಟ್ ಕೊಹ್ಲಿಯ ಈ ನಿರ್ಧಾರದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರು ಈ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ ಕಂಡ ಅದ್ಭುತ ನಾಯಕ ಎಂಬ ಬಗ್ಗೆ ಅನುಮಾನಗಳೇ ಇಲ್ಲ. ನಾಯಕನಾಗಿ ವಿರಾಟ್ ಕೊಹ್ಲಿಯ ಅಂಕಿಅಂಶಗಳೇ ಇದನ್ನು ಸಾರಿ ಹೇಳುತ್ತಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ನಂಬರ್ 1 ಸ್ಥಾನದಲ್ಲಿ ಸುದೀರ್ಘ ಕಾಲ ಉಳಿದುಕೊಂಡಿತ್ತು. ಆದರೆ ಇತ್ತೀಚೆಗೆ ಸೀಮಿತ ಓವರ್‌ಗಳ ನಾಯಕತ್ವದಿಂದ ಕೆಳಗಿಳಿದ ಬಳಿಕ ಟೆಸ್ಟ್ ನಾಯಕತ್ವವನ್ನು ಕೂಡ ತೊರೆದಿರುವುದು ಸಾಕಷ್ಟು ಗೊಂದಲದ ವಾತಾವರಣವನ್ನುಂಟು ಮಾಡಿದೆ.

MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!

ಟೀಮ್ ಇಂಡಿಯಾ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನದ ಸಾಮಾ ಟಿವಿ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು "ಒಂದು ಹಂತದಲ್ಲಿ ಒತ್ತಡಗಳನ್ನು ತಡೆದುಕೊಳ್ಳಲಾಗದ ಸಂದರ್ಭ ಬರುತ್ತದೆ. ಆ ಸಂದರ್ಭದಲ್ಲಿ ಅದು ಆಟಗಾರರ ಪ್ರದರ್ಶನದ ಮೇಲೂ ಪ್ರಭಾವ ಬೀರುತ್ತದೆ" ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. "ವಿರಾಟ್ ಕೊಹ್ಲಿ ಭಾರತ ತಂಡವನ್ನು ದೀರ್ಘಕಾಲದವರೆಗೆ ಅತ್ಯುತ್ತಮ ಮಟ್ಟದಲ್ಲಿ ನಾಯಕತ್ವ ವಹಿಸಿದ್ದಾರೆ. ಆದರೆ ಈಗ ಅವರು ತಮ್ಮ ಕ್ರಿಕೆಟ್ ಅನ್ನು ಆನಂದಿಸುವ ಸಮಯ" ಶಾಹಿದ್ ಅಫ್ರಿದಿಯನ್ನು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾದ ಮುಂದಿನ ನಾಯಕನ ಸ್ಥಾನಕ್ಕೆ ಪ್ರಮುಖವಾಗಿ ಕೇಳಿ ಬರುತ್ತಿರುವ ಎರಡು ಹೆಸರುಗಳೆಂದರೆ ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್. ರೋಹಿತ್ ಶರ್ಮಾ ಈಗಾಗಲೇ ವೈಟ್ ಬಾಲ್ ಕ್ರಿಕೆಟ್ ತಂಡದ ನಾಯಕನಾಗಿರುವ ಕಾರಣ ಎಲ್ಲಾ ಮಾದರಿಗೂ ಅವರನ್ನೇ ನಾಯಕನನ್ನಾಗಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನಾಯಕನಾಗಿ ಉತ್ತಮ ಅನುಭವ ಹಾಗೂ ಉತ್ತಮ ದಾಖಲೆಗಳು ಕೂಡ ಹೊಂದಿರುವುದು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳಳು ಇರುವ ಪೂರಕ ಅಂಶಗಳಾಗಿದೆ.

ರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರುರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರು

ಈ ಮಧ್ಯೆ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಸಮಸ್ಯೆ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಎರಡು ವಿಶ್ವಕಪ್ ನಡೆಯಲಿರುವ ಕಾರಣ ರೋಹಿತ್ ಮೇಲೆ ಹೆಚ್ಚಿನ ಒತ್ತಡಗಳು ಬೀಳಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಕೇವಲ ಸೀಮಿತ ಓವರ್‌ಗಳ ನಾಯಕನನ್ನಾಗಿ ಮಾಡಿ ಕೆಎಲ್ ರಾಹುಲ್‌ಗೆ ಟೆಸ್ಟ್ ನಾಯಕತ್ವ ನೀಡಬೇಕು ಎಂಬ ಅಭಿಪ್ರಾಯಗಳು ಕೂಡ ಜೋರಾಗಿ ವ್ಯಕ್ತವಾಗುತ್ತಿದೆ. ಈ ಬಾರಿಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಉಪನಾಯಕನಾಗಿ ಜವಾಬ್ಧಾರಿ ವಹಿಸಿಕೊಂಡಿದ್ದರು. ಇನ್ನು ಈ ಸರಣಿಯ ಎರಡನೇ ಟೆಸ್ಟ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ ಗಾಯಗೊಂಡು ಅಲಭ್ಯವಾಗಿದ್ದಾಗ ರಾಹುಲ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ಕೂಡ ಪಡೆದಿದ್ದರು. ಹೀಗಾಗಿ ಕೆಎಲ್ ರಾಹುಲ್ ಪೂರ್ಣಾವಧಿ ಟೆಸ್ಟ್ ನಾಯಕನಾಗಿ ಮುನ್ನಡೆಸಬೇಕು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.

Story first published: Tuesday, January 18, 2022, 17:17 [IST]
Other articles published on Jan 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X