ಇನ್ಜಮಾಮ್ ಉಲ್ ಹಕ್‌ಗೆ ಲಘು ಹೃದಯಾಘಾತ, ಆಸ್ಪತ್ರೆಯಲ್ಲಿ ಚೇತರಿಕೆ

Inzamam ul haqಗೆ ಸೋಮವಾರ ಲಘು ಹೃದಯಾಘಾತ | Oneindia Kannada

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾನ್ ಉಲ್ ಹಕ್ ಸೋಮವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದು ತಕ್ಷಣವೇ ಲಾಹೋರ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ. 51 ವರ್ಷದ ಇನ್ಜಮಾಮ್ ಉಲ್ ಹಕ್‌ಗೆ ತಕ್ಷಣವೇ ಆಂಜಿಯೋಪ್ಲಾಸ್ಟಿ ನಡೆಸಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಕ್ರಿಕೆಟ್ ಪಾಕಿಸ್ತಾನ ವರದಿಯ ಪ್ರಕಾರ ಕಳೆದ ಮೂರು ದಿನಗಳಿಂದ ಇನ್ಜಮಾಮ್ ಉಲ್ ಹಕ್‌ಗೆ ಎದೆಯಲ್ಲಿ ನೋವು ಕಾಣಿಸಿಕೊಂಡ ಬಗ್ಗೆ ಹೇಳಿಕೊಂಡಿದ್ದರು. ಹೀಗಾಗಿ ಪರೀಕ್ಷೆಗೂ ಒಳಗಾಗಿದ್ದರು. ಆದರೆ ಪ್ರಾಥಮಿಕ ಪರೀಕ್ಷೆಯಲ್ಲಿ ಏನೂ ಸ್ಪಷ್ಟವಾಗಿರಲಿಲ್ಲ. ಆದರೆ ಸೋಮವಾರ ರಾತ್ರಿ ಇನ್ಜಮಾಮ್ ಲಘು ಹೃದಯಾಘಾತಕ್ಕೆ ಒಳಗಾಗಿರುವುದು ಪರೀಕ್ಷೆಯಲ್ಲಿ ಖಚಿತವಾಗಿದ್ದು ತಕ್ಷಣವೇ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿ20 ವಿಶ್ವಕಪ್ ತಂಡದ ಆಯ್ಕೆಯ ನಿರ್ಧಾರದ ಬಗ್ಗೆ ಗಂಭೀರ ಪ್ರಶ್ನೆ ಮುಂದಿಟ್ಟ ಸೆಹ್ವಾಗ್ಟಿ20 ವಿಶ್ವಕಪ್ ತಂಡದ ಆಯ್ಕೆಯ ನಿರ್ಧಾರದ ಬಗ್ಗೆ ಗಂಭೀರ ಪ್ರಶ್ನೆ ಮುಂದಿಟ್ಟ ಸೆಹ್ವಾಗ್

ಇನ್ಜಮಾಮ್ ಉಲ್ ಹಕ್ ಅವರ ಆಪ್ತರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು ಇನ್ಜಮಾಮ್ ಉಲ್ ಹಕ್ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದಿದ್ದಾರೆ. ಆದರೆ ಅವರು ಇನ್ನೂ ಕೂಡ ವೈದ್ಯರ ನಿಗಾದಲ್ಲಿಯೇ ಇದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

1992ರ ವಿಶ್ವಕಪ್‌ನಲ್ಲಿ ವಿಶ್ವದ ಗಮನಸೆಳೆಯುವಂತಾ ಪ್ರದರ್ಶನ ನಿಡಿದ್ದ ಇನ್ಜಮಾಮ್ ಉಲ್ ಹಕ್ ಪಾಕಿಸ್ತಾನದ ಪರವಾಗಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. 375 ಏಕದಿನ ಪಂದ್ಯಗಳಲ್ಲಿ ಆಡಿರುವ ಅವರು 11701 ರನ್‌ಗಳಿಸಿದ್ದಾರೆ. ಇನ್ನು 119 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 8829 ರನ್‌ಗಳಿಸಿದ್ದಾರೆ. 2016-19ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಆಯ್ಕಿಎಗಾರನಾಗಿಯೂ ಇನ್ಜಮಾಮ್ ಉಲ್ ಹಕ್ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಅಫ್ಘಾನಿಸ್ತಾನ ತಂಡಕ್ಕೆ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಇನ್ಜಮಾಮ್ ಉಲ್ ಹಜ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಕ್ರಿಕೆಟ್ ಅಭಿಮಾನಿಗಳು ಆಶಿಸುತ್ತಿದ್ದ ಭಾರತದ ಕ್ರಿಕೆಟ್ ವಿಶ್ಲೇಷಕ, ಕಾಮೆಂಟೇಟರ್ ಹರ್ಷ ಬೋಗ್ಲೆ ಕೂಡ ಇನ್ಜಮಾಮ್ ಉಲ್ ಹಕ್ ಚೇತರಿಕೆಗಾಗಿ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
ALLOW NOTIFICATIONS
For Daily Alerts
Story first published: Tuesday, September 28, 2021, 11:17 [IST]
Other articles published on Sep 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X