RCB: ಮಗಳಾದ ಮಗ- ಆರ್‌ಸಿಬಿ ಮಾಜಿ ಕೋಚ್ ಮಗ ಇನ್ನು ಮಗಳು
ಟೀಮ್ ಇಂಡಿಯಾ ಮಾಜಿ ಆಟಗಾರ ಸಂಜಯ್ ಬಂಗಾರ್ ಮೈದಾನದ ಒಳಗೆ ಮತ್ತು ಹೊರಗೆ ಸಾಕಷ್ಟು ಹೆಸರು ಮಾಡಿದ್ದಾರೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಡ್ ಕೋಚ್ ಆಗಿಯೂ ಸಂಜಯ್ ಬಂಗಾರ್ ಕಾರ್ಯನಿರ್ವಹಿಸಿದ್ದಾರೆ. ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಬಂಗಾರ್ ಕೂಡ ಕ್ರಿಕೆಟ್ ಆಡುತ್ತಾರೆ. ಆದರೆ ಇದೀಗ ಆರ್ಯನ್ ಬಂಗಾರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಆರ್ಯನ್ ಹಾರ್ಮೋನ್ ರಿಪ್ಲೇಸ್‌ಮೆಂಟ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಹುಡುಗನಿಂದ ಹುಡುಗಿಯಾಗಿ ಬದಲಾಗಿದ್ದಾರೆ. ಇದಕ್ಕಾಗಿ ಅವರು ತಮ್ಮ ಕ್ರಿಕೆಟ್ ವೃತ್ತಿಜೀವನವನ್ನೇ ತ್ಯಾಗ ಮಾಡಿದ್ದಾರೆ. ಅಲ್ಲದೆ ಇನ್ನು ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ.
ಭಾನುವಾರ ರಾತ್ರಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 10 ತಿಂಗಳ ಹಾರ್ಮೋನ್ ಬದಲಾವಣೆ ಪ್ರಕ್ರಿಯೆಯ ಹೋರಾಟದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ, ಅನಯಾ ಕಳೆದ 11 ತಿಂಗಳುಗಳಲ್ಲಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ತಂದೆಯಂತೆ ಆರ್ಯನ್ ಬಂಗಾರ್ ಕೂಡ ಕ್ರಿಕೆಟಿಗನಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಬಾಲ್ಯದಿಂದಲೇ ಕ್ರಿಕೆಟ್ ಅಭ್ಯಾಸವನ್ನು ಸಹ ಆರಂಭಿಸಿದ್ದರು. ಎಡಗೈ ಬ್ಯಾಟರ್ ಆಗಿರುವ ಆರ್ಯನ್ ಲೀಸೆಸ್ಟರ್‌ಶೈರ್‌ನ ಹಿಂಕ್ಲೆ ಕ್ರಿಕೆಟ್ ಕ್ಲಬ್ ಪರ ಆಡಿದ್ದಾರೆ. ಈಗ ಅನಯಾ ಆಗಿ ಬದಲಾಗಿರುವ ಅವರು ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿನ ಕೌಂಟಿ ಕ್ಲಬ್‌ಗಾಗಿ ಅವರು ಆಡುತ್ತಿದ್ದಾರೆ. ಮುಂದೆ ಅವರು ಯಾವ ಕ್ಲಬ್‌ಗಾಗಿ ಆಡುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) 2025 ರಿಂದ ಮಹಿಳಾ ದೇಶೀಯ ಕ್ರಿಕೆಟ್‌ನ ಉನ್ನತ ಮಟ್ಟದಲ್ಲಿ ಟ್ರಾನ್ಸ್‌ವುಮೆನ್‌ಗಳು ಆಡುವುದನ್ನು ನಿಷೇಧಿಸಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಅನಯಾ ವೃತ್ತಿಜೀವನದ ಭವಿಷ್ಯ ಪ್ರಶ್ನಾರ್ಹವಾಗಿದೆ.
ಸಂಜಯ್ ಬಂಗಾರ್ ವೃತ್ತಿಜೀವನ
ಸಂಜಯ್ ಬಂಗಾರ್ 2014 ರಿಂದ 2018 ರ ವರೆಗೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಅವರ ಮೊದಲ ಹೆಡ್ ಕೋಚ್ ಅನಿಲ್ ಕುಂಬ್ಳೆ. ನಂತರ ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲೂ ಅವರು ಈ ಪಾತ್ರವನ್ನು ನಿರ್ವಹಿಸಿದ್ದರು. ಅವರು ಟೀಮ್ ಇಂಡಿಯಾ ಪರ 12 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಬಂಗಾರ್ ಅವರು ಐಪಿಎಲ್ 2022ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೆಡ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಐಪಿಎಲ್ 2023ರ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯೊಂದಿಗೆ ಕಾರ್ಯನಿರ್ವಹಿಸಿದ್ದರು. ರಿಕಿ ಪಾಂಟಿಂಗ್ ಆಗಮನದಿಂದ ಈಗ ಸಂಜಯ್ ಬಂಗಾರ್ ಅವರಿಗೆ ಗೇಟ್ ಪಾಸ್ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications