For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ರೋಹಿತ್ ಶರ್ಮಾ 500ಕ್ಕೂ ಹೆಚ್ಚು ರನ್ ಬಾರಿಸಲಿದ್ದಾರೆ: ಡೇಲ್‌ ಸ್ಟೇನ್‌ ಭವಿಷ್ಯ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಮಾರ್ಚ್‌ 28 ರಿಂದ ಆರಂಭವಾಗಲಿದೆ. ಈ ಲೀಗ್‌ನಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಈ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಸ್ಟಾರ್‌ ಆಟಗಾರ ರೋಹಿತ್ ಶರ್ಮಾ ಅವರ ಮೇಲಿವೆ. ಅನುಭವಿ ಆಟಗಾರ ರೋಹಿತ್ ಅವರ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡೇಲ್ ಸ್ಟೇನ್ ದೊಡ್ಡ ಹೇಳಿಕೆ ನೀಡಿದ್ದಾರೆ.

ರೋಹಿತ್‌ ಶರ್ಮಾ ಅವರು ಐಪಿಎಲ್‌ನಲ್ಲಿ 2013ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಇವರು ಆ ಆವೃತ್ತಿಯಲ್ಲಿ ಆಡಿದ 19 ಪಂದ್ಯಗಳಲ್ಲಿ 538 ರನ್‌ ಸಿಡಿಸಿದ್ದರು. ಇವರ ಅಮೋಘ ಪ್ರದರ್ಶನದ ಫಲವಾಗಿ ಮುಂಬೈ ಚೊಚ್ಚಲ ಬಾರಿಗೆ ಪ್ರಶಸ್ತಿಯನ್ನು ಎತ್ತಿ ಸಂಭ್ರಮಿಸಿತ್ತು. ಆ ಒಂದೇ ಆವೃತ್ತಿಯಲ್ಲಿ ರೋಹಿತ್ ಶರ್ಮಾ 500ಕ್ಕೂ ಹೆಚ್ಚು ರನ್ ಬಾರಿಸಿದ್ದರು.

Dale Steyn

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡೇಲ್ ಸ್ಟೇನ್ ರೋಹಿತ್ ಶರ್ಮಾ ಅವರ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಏಕಾಗ್ರತೆ ಹಾಗೂ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಲಿದ್ದಾರೆ. ಗೆಲುವಿನ ಸಂಸ್ಕೃತಿಯಲ್ಲಿ ರೋಹಿತ್ ತಮ್ಮ ಅತ್ಯುತ್ತಮ ಕ್ರಿಕೆಟ್ ಅನ್ನು ಆಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರೋಹಿತ್‌ ತಮ್ಮ ದೇಹವನ್ನು ಬದಲಿಸಿಕೊಂಡಿವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಿಂದ ದೂರ ಸರಿದಿರುವ ರೋಹಿತ್ ಶರ್ಮಾ ಸದ್ಯ ತಮ್ಮ ಫಿಟ್ನೆಸ್‌ನತ್ತ ಗಮನ ಹರಿಸಿದ್ದಾರೆ. ಇವರು ಮುಂದಿನ ವರ್ಷ 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಕಾಣುತ್ತಿದ್ದಾರೆ.

ರೋಹಿತ್‌ ಬಗ್ಗೆ ಸ್ಟೇನ್‌ ಹೇಳಿದ್ದೇನು?

ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ಮುಂಬೈ ತಂಡಕ್ಕೆ ನೆರವಾಗಲಿದ್ದಾರೆ. ಏಕಾಗ್ರತೆ ಮತ್ತು ಆಕ್ರಮಣಕಾರಿ ಆಟದೊಂದಿಗೆ ರೋಹಿತ್‌ ಕಣಕ್ಕಿಳಿಯಲಿದ್ದಾರೆ. ಇವರು ಈ ಆವೃತ್ತಿಯಲ್ಲಿ ಪರಿಸ್ಥಿತಿಗೆ ತಕ್ಕಂತೆ ಬ್ಯಾಟಿಂಗ್ ನಡೆಸಲಿದ್ದಾರೆ. ಈ ಸೀಸನ್‌ನಲ್ಲಿ ನಾವು ರೋಹಿತ್ ಶರ್ಮಾ ಅವರ ಅತ್ಯುತ್ತಮ ಆಟವನ್ನು ನೋಡುವ ಸಾಧ್ಯತೆಯಿದೆ ಎಂದು ಸ್ಟೇನ್ ಅಭಿಪ್ರಾಯ ಪಟ್ಟಿದ್ದಾರೆ.

ರೋಹಿತ್ ಶರ್ಮಾ ಅವರು ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. ರೋಹಿತ್ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಐಪಿಎಲ್‌ ವೇದಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ತಮ್ಮಲ್ಲಿರುವ ಸಾಮರ್ಥ್ಯವನ್ನು ಪ್ರದರ್ಶಿಸಲು ಕಾತುರರಾಗಿದ್ದಾರೆ ಎಂದು ಸ್ಟೇನ್‌ ತಿಳಿಸಿದ್ದಾರೆ.

ಐಪಿಎಲ್‌ನಲ್ಲಿ ರೋಹಿತ್ ಸಾಧನೆ

38 ವರ್ಷದ ರೋಹಿತ್ ಶರ್ಮಾ ಸದ್ಯ ಭಾರತದ ಪರ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಇವರು ಐಪಿಎಲ್‌ನಲ್ಲಿ ಇದುವರೆಗೆ ಎರಡು ತಂಡಗಳ ಪರ ಅಖಾಡಕ್ಕೆ ಇಳಿದಿದ್ದಾರೆ. ಇವರು ಐಪಿಎಲ್‌ನಲ್ಲಿ 272 ಪಂದ್ಯಗಳಲ್ಲಿ 29ರ ಸರಾಸರಿಯಲ್ಲಿ 7046 ರನ್‌ ಕಲೆ ಹಾಕಿದ್ದಾರೆ. ಈ ವೇಳೆ ಇವರು 2 ಶತಕ, 47 ಅರ್ಧಶತಕ ಸಿಡಿಸಿದ್ದಾರೆ. ಈ ವೇಳೆ ಇವರು 302 ಸಿಕ್ಸರ್‌, 640 ಬೌಂಡರಿ ಬಾರಿಸಿದ್ದಾರೆ.

Story first published: Saturday, March 28, 2026, 19:45 [IST]
Other articles published on Mar 28, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+