RCB vs RR Eliminator: ಈ ತಂಡ ಪಕ್ಕಾ ಕ್ವಾಲಿಫೈಯರ್-2 ತಲುಪುತ್ತೆ; ಮಾಜಿ ಕ್ರಿಕೆಟಿಗ ಭವಿಷ್ಯ
ಮೇ 20 ಸೋಮವಾರ, 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ರಾಜಸ್ಥಾನ ರಾಯಲ್ಸ್ (ಆರ್‌ಆರ್) ಮುಖಾಮುಖಿಯಾಗಿವೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ, ಮೇ 22 ರಂದು ಆರ್‌ಸಿಬಿ ಮತ್ತು ಆರ್‌ಆರ್ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದು, ಭಾರೀ ಕುತೂಹಲವನ್ನು ಕೆರಳಿಸಿದೆ.

ಈ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಗೆದ್ದ ತಂಡ ಫೈನಲ್‌ಗೆ ತಲುಪಲು ಕ್ವಾಲಿಫೈಯರ್-1 ಸೋತವರ ವಿರುದ್ಧ ಮತ್ತೊಂದು (ಕ್ವಾಲಿಫೈಯರ್-2) ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್-1 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಹೈದರಾಬಾದ್ ತಂಡಗಳು ಸೆಣಸಾಡಲಿವೆ.
ಇದೀಗಾ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ಭವಿಷ್ಯವನ್ನು ಟೀಮ್ ಇಂಡಿಯಾ ಮಾಜಿ ಆಟಗಾರ ನುಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಲೈವ್‌ನಲ್ಲಿ ಮಾತನಾಡುವಾಗ ತಮ್ಮ ಅಭಿಪ್ರಾಯವನ್ನು ಟೀಮ್ ಇಂಡಿಯಾ ಮಾಜಿ ಆಟಗಾರ ಅಂಬಟಿ ರಾಯುಡು ವ್ಯಕ್ತಪಡಿಸಿದ್ದಾರೆ.
ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್‌ಸಿಬಿ ಗೆಲ್ಲುತ್ತದೆ. ಆರ್‌ಸಿಬಿ ನನ್ನ ನೆಚ್ಚಿನ ತಂಡ. ಅವರು ಆಡುತ್ತಿರುವ ರೀತಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಪಂದ್ಯವನ್ನು ಗೆದ್ದ ರೀತಿ ಅದ್ಭುತವಾಗಿದೆ. ಹಾಗಾಗಿ ಎಲಿಮಿನೇಟರ್ ಅನ್ನು ಗೆದ್ದು ಕ್ವಾಲಿಫೈಯರ್- 2 ಗೆ ಹೋಗುವುದು ಆರ್‌ಸಿಬಿ ಎಂದು ರಾಯುಡು ಬೆಟ್ಟಿಂಗ್ ಮಾಡಿದ್ದಾರೆ.
ಆರ್‌ಸಿಬಿ ತನ್ನ ತವರು ನೆಲ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆದ ಪಂದ್ಯದಲ್ಲಿ 5 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿ ಪ್ಲೇ ಆಫ್ ರೇಸ್‌ನಿಂದ ಹೊರಹಾಕಿತ್ತು.
ಫಾಫ್ ಡು ಪ್ಲೆಸಿಸ್ ನಾಯಕತ್ವದ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರಿಂದ ಆರ್‌ಸಿಬಿ ಕಂಗೊಳಿಸುತ್ತಿದೆ. ಮೊದಲಾರ್ಧದಲ್ಲಿ 8 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿದ್ದ ಆರ್‌ಸಿಬಿ ಕೊನೆಯ 6 ಲೀಗ್ ಪಂದ್ಯಗಳನ್ನು ಅದ್ಭುತವಾಗಿ ಗೆದ್ದು ಪ್ಲೇ ಆಫ್‌ಗೆ ಪ್ರವೇಶಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications