Champions Trophy: ಆಸ್ಟ್ರೇಲಿಯಾ ತಂಡದಿಂದ ನಾಲ್ವರು ಚಾಂಪಿಯನ್‌ಗಳು ನಾಪತ್ತೆ
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ತಯಾರಿ ನಡೆಸುತ್ತಿವೆ. ಈ ಮೆಗಾ ಟೂರ್ನಿಯ ಆರಂಭಕ್ಕೆ 2 ವಾರಗಳಿಗಿಂತ ಕಡಿಮೆ ಸಮಯ ಉಳಿದಿದೆ. ಆದರೆ ಇದ್ದಕ್ಕಿದ್ದಂತೆ ಆಸ್ಟ್ರೇಲಿಯಾದ ಮೇಲೆ ತೊಂದರೆಯ ಪರ್ವತ ಬಿದ್ದಿದೆ. ಚಾಂಪಿಯನ್ಸ್ ಟ್ರೋಫಿ ತಂಡದಿಂದ ಆಸ್ಟ್ರೇಲಿಯಾದ 4 ಹೆಸರುಗಳು ಕಾಣೆಯಾಗಲಿವೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರು ಈಗಾಗಲೇ ಗಾಯದ ಸಮಸ್ಯೆಗಳಿಂದ ಬಳಲುತ್ತಿತ್ತು. ಮಾರ್ಕಸ್ ಸ್ಟೊಯಿನಿಸ್ ಅವರ ನಿವೃತ್ತಿಯ ಹಠಾತ್ ನಿರ್ಧಾರವು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಪೆಟ್ಟು ನೀಡಿದೆ. ಚಾಂಪಿಯನ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಗಾಯಗಳಿಂದಾಗಿ ಹೊರಗುಳಿದಿದ್ದಾರೆ.
ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಇದರಿಂದಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಆಸ್ಟ್ರೇಲಿಯಾದ ಆಸೆಗೆ ದೊಡ್ಡ ಹೊಡೆತ ಬಿದ್ದಿದೆ.

ಮಾರ್ಕಸ್ ಸ್ಟೊಯಿನಿಸ್, ಕಮ್ಮಿನ್ಸ್ ಮತ್ತು ಹೇಜಲ್‌ವುಡ್ ಹೊರತುಪಡಿಸಿ, ಆಲ್‌ರೌಂಡರ್ ಮಿಚೆಲ್ ಮಾರ್ಷ್ ಕೂಡ ಗಾಯದ ಕಾರಣದಿಂದಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಇದರರ್ಥ ಆಸ್ಟ್ರೇಲಿಯಾ ತನ್ನ ಆರಂಭಿಕ 15 ಸದಸ್ಯರ ತಂಡದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನು ಮಾಡಬೇಕಾದ ಪರಿಸ್ಥಿತಿಗೆ ಬಂದು ನಿಂತಿದೆ.
ಫೆಬ್ರವರಿ 19 ರಿಂದ ಪಾಕಿಸ್ತಾನ ಮತ್ತು ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದ್ದು, ವಿಶ್ವದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಫೆಬ್ರವರಿ 12 ರೊಳಗೆ ಆಸ್ಟ್ರೇಲಿಯಾ ತನ್ನ ಅಂತಿಮ ತಂಡವನ್ನು ಆಯ್ಕೆ ಮಾಡಬೇಕಾಗಿದೆ. ಸ್ಟೊಯಿನಿಸ್ ಏಕದಿನ ಮತ್ತು ಟೆಸ್ಟ್ ಪಂದ್ಯಗಳಿಂದ ನಿವೃತ್ತರಾಗಿದ್ದಾರೆ. ಆದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಆಡಲಿದ್ದಾರೆ.
ಇತ್ತೀಚೆಗೆ ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಸಮಯದಲ್ಲಿಯೂ ಸಹ ಗಾಯಕ್ಕೊಳಗಾಗಿದ್ದ ಕಮ್ಮಿನ್ಸ್, ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ. ಹೇಜಲ್‌ವುಡ್ ಇನ್ನೂ ಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಗಾಯದಿಂದಾಗಿ, ಅವರು ಭಾರತದ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಬೆನ್ನು ನೋವಿನಿಂದ ಚೇತರಿಸಿಕೊಳ್ಳಲು ವಿಫಲವಾದ ಕಾರಣ ಮಾರ್ಷ್ ಈಗಾಗಲೇ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.
ಹೊಸ ಆಟಗಾರರಿಗೆ ಅವಕಾಶ
ದುರದೃಷ್ಟವಶಾತ್ ಪ್ಯಾಟ್, ಜೋಶ್ ಮತ್ತು ಮಿಚ್ ಗಾಯಗಳಿಂದ ಬಳಲುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಸರಿಯಾದ ಸಮಯಕ್ಕೆ ಫಿಟ್ ಆಗುವುದಿಲ್ಲ. ಇದು ನಿರಾಶಾದಾಯಕವಾಗಿದೆ. ಆದರೆ ಇದು ಇತರ ಆಟಗಾರರಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ನೀಡುತ್ತದೆ ಎಂದು ಆಸ್ಟ್ರೇಲಿಯಾದ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿ ಗುರುವಾರ ಗಾಲೆಯಲ್ಲಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications