For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್‌ ಪ್ರವಾಸದ ಕನಸಿನಲ್ಲಿರುವ ಕನ್ನಡಿಗರು

ಐಪಿಎಲ್‌ ಮುಗಿದ ಬಳಿಕ ಭಾರತ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸಲಿದೆ. ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ವೇಳೆ ತಂಡದಲ್ಲಿ ಸ್ಥಾನ ಪಡೆಯಲು ನಾಲ್ವರು ಕನ್ನಡಿಗರು ಫೈಟ್ ನಡೆಸುತ್ತಿದ್ದಾರೆ. ಈಗಾಗಲೇ ಈ ಸ್ಟಾರ್ ಪ್ಲೇಯರ್ಸ್‌ ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಬ್ಬರಿಸಿದ್ದಾರೆ. ಈ ನಾಲ್ವರು ಆಟಗಾರರು ಯಾರು ಎಂಬ ಬಗ್ಗೆ ವರದಿ ಇಲ್ಲಿದೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೂ ವಿದಾಯ ಹೇಳಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಇದೆ ಮೊದಲ ಬಾರಿಗೆ ಟೀಮ್ ಇಂಡಿಯಾ ಮೊದಲ ಬಾರಿಗೆ ವಿದೇಶಿ ಪ್ರವಾಸವನ್ನು ಮಾಡಲಿದೆ. ಹೀಗಾಗಿ ತಂಡದಲ್ಲಿರುವ ಯುವ ಆಟಗಾರರ ಮೇಲೆ ಹೆಚ್ಚಿನ ಒತ್ತಡವಿದೆ. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ತಂಡದಲ್ಲಿ ಸ್ಥಾನವನ್ನು ಭಧ್ರ ಪಡಿಸಿಕೊಳ್ಳಲು ಯುವ ಆಟಗಾರರಿಗೆ ಇದು ಒಳ್ಳೆಯ ಅವಕಾಶ. ಇದೇ ರೇಸ್‌ನಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಇದ್ದಾರೆ.

Four Karnataka Cricketers in Race for India s England Tour Squad

ಇಂಗ್ಲೆಂಡ್‌ ಫ್ಲೈಟ್‌ ಏರುವ ಕನಸಿನಲ್ಲಿರುವ ಕರ್ನಾಟಕದ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರು ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದರು. ಹೀಗಾಗಿ ಇವರು ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತದೆ. ಅಲ್ಲದೆ ಇವರು ಟೀಮ್ ಇಂಡಿಯಾದ ನಾಯಕತ್ವದ ಮೇಲೆ ಕಣ್ಣು ನೆಟ್ಟಿದ್ದಾರೆ. ವಿದೇಶದಲ್ಲಿ ಇವರ ಅಂಕಿ ಅಂಶಗಳನ್ನು ನೋಡಿದರೆ ಇವರಿಗೆ ಕ್ಯಾಪ್ಟನ್ಸಿ ಸಿಗುವ ಸಾಧ್ಯತೆ ಇದೆ.

ಮೂವರು ಬ್ಯಾಟರ್‌, ಒಬ್ಬ ಪೇಸರ್‌

ಇಂಗ್ಲೆಂಡ್ ಪ್ರವಾಸ ಬೆಳೆಸಲು ದೇವದತ್ ಪಡಿಕ್ಕಲ್ ಸಹ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದರೆ ಅವರು ಗಾಯಕ್ಕೆ ತುತ್ತಾಗಿದ್ದರಿಂದ ಇವರ ಫಿಟ್ನೆಸ್‌ ಬಗ್ಗೆಯೂ ಯೋಚಿಸಿ ಆಯ್ಕೆ ಸಮಿತಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಇನ್ನು ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಇನ್ನೊಬ್ಬ ಬ್ಯಾಟರ್‌ ಕರುಣ್‌ ನಾಯರ್. ಸುಮಾರು ಏಳು ವರ್ಷಗಳ ಬಳಿಕ ಟೀಮ್ ಇಂಡಿಯಾಕ್ಕೆ ಕಮ್‌ ಬ್ಯಾಕ್‌ ಮಾಡಲು ಕರುಣ್ ನಾಯರ್‌ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಕರುಣ್ ನಾಯರ್ ದೇಶೀಯ ಟೂರ್ನಿಯಲ್ಲಿ ಅಬ್ಬರ ನಡೆಸಿದ್ದಾರೆ. ವಿಜಯ್ ಹಜಾರೆ ಹಾಗೂ ರಣಜಿ ಟ್ರೋಫಿಯಲ್ಲಿ ಕರುಣ್‌ ನಾಯರ್‌ ರನ್‌ ಮಹಲ್ ಕಟ್ಟಿ ಅಬ್ಬರಿಸಿದ್ದರು. ಹೀಗಾಗಿ ಆಯ್ಕೆ ಸಮಿತಿ ಇವರ ಸ್ತಿರ ಪ್ರದರ್ಶನಕ್ಕೆ ಮನ್ನಣೆ ನೀಡುತ್ತಾ ಎಂಬುದನ್ನು ಕಾದು ಬೋಡಬೇಕಿದೆ.

ಭರ್ಜರಿ ಫಾರ್ಮ್‌ನಲ್ಲಿರುವ ವೇಗಿ

ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಪ್ರಸಿದ್ಧ್ ಕೃಷ್ಣಾ ಸಹ ಈ ಲೀಸ್ಟ್‌ನಲ್ಲಿರುವ ಆಟಗಾರ. ಇವರು ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು ಗರಿಷ್ಠ ವಿಕೆಟ್‌ ಪಡೆದ ಆಟಗಾರರ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಇವರಿಗೂ ಇಂಗ್ಲೆಂಡ್‌ ಪ್ರವಾಸದ ವೇಳೆ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದ್ದು, ಯಾವೆಲ್ಲಾ ಕನ್ನಡಿಗರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Story first published: Wednesday, May 14, 2025, 22:16 [IST]
Other articles published on May 14, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+