ಟೀಮ್ ಇಂಡಿಯಾ ಏಷ್ಯಾ ಕಪ್ ತಯಾರಿ ಭರದಿಂದ ನಡೆಸಿದೆ. ಈ ವೇಳೆ ತಂಡದಲ್ಲಿ ಸ್ಥಾನ ಪಡೆಯಲು ಹಲವು ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅದರಂತೆ ಏಷ್ಯಾ ಕಪ್‌ಗಾಗಿ ಭಾರತ ತಂಡವನ್ನು ಅಗಸ್ಟ್ ಮೂರನೇ ವಾರದಲ್ಲಿ ಘೋಷಿಸುವ ಸಾಧ್ಯತೆ ಇದೆ. ಈ ಬಾರಿಯ ಏಷ್ಯಾ ಕಪ್ ಟೂರ್ನಿ ಟಿ20 ಫಾರ್ಮೆಟ್‌ನಲ್ಲಿ ನಡೆಯಲಿದೆ. ಹೀಗಾಗಿ ಈ ತಂಡದಲ್ಲಿ ಸ್ಥಾನ ಪಡೆದು, ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಹತ್ತಿರವಾಗುವ ಕನಸು ಆಟಗಾರರಾದ್ದಾಗಿದೆ.
ಏಷ್ಯಾ ಕಪ್ ಟಿ20 ತಂಡದಲ್ಲಿ ಸ್ಥಾನ ಪಡೆಯಲು ಕನ್ನಡಿಗರೂ ಸಹ ಸಿದ್ಧರಾಗಿದ್ದಾರೆ. ಈ ರೇಸ್‌ನಲ್ಲಿ ಹಲವು ಆಟಗಾರರು ಇದ್ದು, ಈ ವೇಳೆ ನಾಲ್ಕು ಆಟಗಾರರು ದುಬೈ ಫ್ಲೈಟ್ ಹತ್ತುವ ಕನಸು ಕಾಣುತ್ತಿದ್ದಾರೆ. ಈ ನಾಲ್ವರಲ್ಲಿ ಎಷ್ಟು ಜನರಿಗೆ ತಂಡದಲ್ಲಿ ಅವಕಾಶ ಲಭಿಸುತ್ತದೆ ಎಂಬುದೇ ಕುತೂಹಲ ಮೂಡಿಸಿದೆ.

ಇಂಗ್ಲೆಂಡ್‌ನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್, ಟಿ20 ತಂಡಕ್ಕೆ ಕಂ ಬ್ಯಾಕ್ ಮಾಡುವ ಕನಸಿನಲ್ಲಿದ್ದಾರೆ. ಇವರು ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದ ಪರ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಆದರೆ ಇತ್ತೀಚಿಗೆ ಇಂಗ್ಲೆಂಡ್‌ನಲ್ಲಿ ನೀಡಿದ ಪ್ರದರ್ಶನ ಹಾಗೂ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಾಗ ಆಡಿದ ಧಾಟಿಯನ್ನು ನೋಡಿದರೆ ಇವರಿಗೆ ಟಿ20 ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಇವರು ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ವೇಳೆಯೂ ತಮ್ಮನ್ನು ಪರಿಗಣಿಸಿ ಎಂಬ ಸಂದೇಶವನ್ನು ಆಯ್ಕೆ ಸಮಿತಿ ರವಾನಿಸಲಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಪ್ರಸಿದ್ಧ್ ಕೃಷ್ಣಾ ಟಿ20 ಕ್ರಿಕೆಟ್ ಆಡುವ ಕನಸು ಕಾಣುತ್ತಿದ್ದಾರೆ. ಇವರು ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ ಅಬ್ಬರದ ಪ್ರದರ್ಶನ ನೀಡಿದ್ದರು. ಅಲ್ಲದೆ ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಇವರು ಹೊಂದಿದ್ದರು. ಹೀಗಾಗಿ ಇವರು ಸಹ ತಂಡವನ್ನು ಸೇರುವ ಕನಸು ಕಾಣುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಕರುಣ್ ನಾಯರ್ ಟೀಕೆಗೆ ಗುರಿಯಾಗಿದ್ದರು. ಆದರೆ ಓವಲ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ ಕಳೆದ ದೇಶೀಯ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಹೀಗಾಗಿ ಇವರು ಸಹ ಏಷ್ಯಾ ಕಪ್ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಇನ್ನು ಕಳೆದ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಆರ್‌ಸಿಬಿ ಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದ ದೇವದತ್ ಪಡಿಕ್ಕಲ್ ಸಹ ಟಿ20 ತಂಡಕ್ಕೆ ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ.