IND vs NZ: ವಾಂಖೆಡೆ ಟೆಸ್ಟ್ ಪಂದ್ಯದಲ್ಲಿ ಭಾರತದ ಸೋಲಿಗೆ 4 ಕಾರಣಗಳು
ಮುಂಬೈನ ವಾಂಖೆಡೆ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲು ಕಂಡಿದೆ. ಮುಂಬೈ ಟೆಸ್ಟ್‌ನ ಮೂರನೇ ದಿನವಾದ ಭಾನುವಾರ ಭಾರತ ತಂಡವನ್ನು 25 ರನ್‌ಗಳಿಂದ ನ್ಯೂಜಿಲೆಂಡ್ ಸೋಲಿಸಿದೆ. ಇದರೊಂದಿಗೆ ತವರಿನಲ್ಲಿ ಭಾರತ ತಂಡವನ್ನು 3-0 ಅಂತರದಲ್ಲಿ ನ್ಯೂಜಿಲೆಂಡ್ ವೈಟ್ ವಾಶ್ ಮಾಡಿದೆ.
ವಾಂಖೆಡೆ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮುಗ್ಗರಿಸಿದೆ. ವಾಂಖೆಡೆ ಟೆಸ್ಟ್‌ನಲ್ಲಿ ಭಾರತದ ಸೋಲಿಗೆ 4 ಪ್ರಮುಖ ಕಾರಣಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

-
ಟಾಸ್
ವಾಂಖೆಡೆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಟಾಸ್ ಸೋತರು. ಟಾಸ್ ಸೋತ ಕೂಡಲೇ ಭಾರತ ವಾಂಖೆಡೆ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್ ಆಡಬೇಕು ಎಂದು ನಿರ್ಧರಿಸಲಾಯಿತು. ಇದು ಭಾರತದ ಸೋಲಿಗೆ ಮೊದಲ ಮೆಟ್ಟಿಲು. ಭಾರತ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಗೆಲುವಿಗೆ 147 ರನ್‌ಗಳ ಗುರಿ ಪಡೆಯಿತು. ಸ್ಪಿನ್ನಿಂಗ್ ಪಿಚ್‌ನಲ್ಲಿ ಭಾರತದ ಬ್ಯಾಟರ್‌ಗಳು ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಗುರಿ ಬೆನ್ನಟ್ಟಿದ ಭಾರತದ ಕೇವಲ 121 ರನ್‌ಗಳಿಗೆ ಸರ್ವಪತನವಾಯಿತು.
-
ಸತತ ವಿಕೆಟ್ ಪತನ
ಬೆಂಗಳೂರು ಮತ್ತು ಪುಣೆ ಟೆಸ್ಟ್ ಪಂದ್ಯಗಳಂತೆ ವಾಂಖೆಡೆಯಲ್ಲಿಯೂ ಟೀಮ್ ಇಂಡಿಯಾ ಟಾಪ್ ಆರ್ಡರ್ ಸಮಸ್ಯೆ ಎದುರಿಸಿತು. ಇದು ಭಾರತ ತಂಡದ ಸೋಲಿಗೆ ಎರಡನೇ ಕಾರಣವಾಯಿತು. ಟೀಮ್ ಇಂಡಿಯಾದ ಬ್ಯಾಟರ್‌ಗಳು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೆಟ್ಟ ಶಾಟ್ ಮತ್ತು ರನ್ ಔಟ್‌ಗಳ ಮೂಲಕ ವಿಕೆಟ್ ಕಳೆದುಕೊಂಡರು. ವಾಂಖೆಡೆ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 4 ರನ್ ಗಳಿಸಿ ರನೌಟ್ ಆದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಒಟ್ಟಾರೆ ಹೇಳಬೇಕೆಂದರೆ ಭಾರತದ ಬ್ಯಾಟರ್‌ಗಳ ಫ್ಲಾಪ್ ಶೋ ನಡೆಯಿತು.
ಅದು ಹೇಗೆ ಎಂದರೆ ನ್ಯೂಜಿಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್‌ಗಳಿಗೆ ಭಾರತ ಆಲೌಟ್ ಮಾಡಿತು. ನಂತರ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಕುಸಿಯಿತು. ಇದರೊಂದಿಗೆ ಭಾರತ ಕೇವಲ 28 ರನ್‌ಗಳ ಮುನ್ನಡೆ ಸಾಧಿಸಿತು. ಆದರೆ ನ್ಯೂಜಿಲೆಂಡ್‌ಗೆ ಇದು ಪಂದ್ಯದಲ್ಲಿ ಪುಟಿದೇಳಲು ಅವಕಾಶ ಮಾಡಿಕೊಟ್ಟಂತಾಯಿತು. ನ್ಯೂಜಿಲೆಂಡ್ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು 121 ರನ್‌ಗಳಿಗೆ ಆಲೌಟ್ ಮಾಡಿತು.
ಅಶ್ವಿನ್ ಕಳಪೆ ಪ್ರದರ್ಶನ
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿಶೇಷ ಪ್ರದರ್ಶನ ನೀಡುವಲ್ಲಿ ವಿಫಲರಾಗಿದರು. ಅಶ್ವಿನ್ ಅವರ ಕಳಪೆ ಪ್ರದರ್ಶನದಿಂದಾಗಿ ವಾಂಖೆಡೆ ಟೆಸ್ಟ್ ಪಂದ್ಯದಲ್ಲಿ ಭಾರತ ಸೋತಿದ್ದು, ಮಾತ್ರವಲ್ಲದೆ ಸರಣಿಯಲ್ಲಿ 3-0 ಅಂತರದಲ್ಲಿ ವೈಟ್ ವಾಶ್ ಕೂಡ ಅನುಭವಿಸಿತು. ರವಿಚಂದ್ರನ್ ಅಶ್ವಿನ್ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಲಿಲ್ಲ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಕೇವಲ 9 ವಿಕೆಟ್ ಪಡೆಯಲು ಸಾಧ್ಯವಾಯಿತು. ಮುಂಬೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ ಯಾವುದೇ ವಿಕೆಟ್ ಪಡೆಯಲಿಲ್ಲ. ನಂತರ ಎರಡನೇ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಪಡೆದು ಅಶ್ವಿನ್ ಗೌರವ ಉಳಿಸಿಕೊಂಡರೂ, ಭಾರತವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ.
ಕೊಹ್ಲಿ-ರೋಹಿತ್ ಬ್ಯಾಟಿಂಗ್ ವೈಫಲ್ಯ
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾರತದ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಖದರ್ ತೋರಲಿಲ್ಲ. ಈ ಇಬ್ಬರ ಬ್ಯಾಟಿಂಗ್ ವೈಫಲ್ಯದಿಂದಾಗಿ ಭಾರತ ತಂಡ 24 ವರ್ಷಗಳ ನಂತರ ತವರಿನಲ್ಲಿ 3-0 ಅಂತರದಲ್ಲಿ ವೈಟ್‌ವಾಶ್ ಅನ್ನು ಎದುರಿಸಿತು. ವಾಂಖೆಡೆ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 18 ಮತ್ತು 11 ರನ್ ಗಳಿಸಿದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 4 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 1 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಕಳಪೆ ಬ್ಯಾಟಿಂಗ್‌ನಿಂದಾಗಿ ಭಾರತ ಭಾರೀ ಬೆಲೆ ತೆರಬೇಕಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications