Women's T20 World Cup 2024: ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡಕ್ಕೆ ಗಾಯದ ಬರೆ
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024ರ ಟೂರ್ನಿಯೂ ಅಕ್ಟೋಬರ್ 3 ರಿಂದ ಯುಎಇಯಲ್ಲಿ ಆರಂಭವಾಗಲಿದೆ. ಭಾರತ ಮಹಿಳಾ ತಂಡವು ಪ್ರಶಸ್ತಿ ಗೆಲ್ಲಲು ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಸಜ್ಜಾಗಿದೆ. ಆದರೆ ಅದಕ್ಕೂ ಮುನ್ನವೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕೆಟ್ಟ ಸುದ್ದಿಯೊಂದು ಬಂದಿದೆ.
ಈ ಸುದ್ದಿಯಿಂದ ನಾಯಕಿ ಹರ್ಮನ್‌ಪ್ರೀತ್ ಕೌರ್ ಚಿಂತೆಗೀಡಾಗಿದ್ದಾರೆ. ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಒಬ್ಬರಲ್ಲ ಇಬ್ಬರಲ್ಲ ನಾಲ್ವರು ಆಟಗಾರ್ತಿಯರು ಗಾಯಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಟಿ20 ವಿಶ್ವಕಪ್‌ಗೂ ಮನ್ನ ಭಾರತ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಗಾಯಗೊಂಡ ಭಾರತ ತಂಡದ ಆಟಗಾರ್ತಿಯರು
ಪೂಜಾ ವಸ್ತ್ರಾಕರ್
ಪೂಜಾ ವಸ್ತ್ರಾಕರ್ ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲಿಂಗ್ ಅಸ್ತ್ರ. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಲ್ಲೂ ತಂಡಕ್ಕೆ ಹಲವು ಬಾರಿ ನೆರವಾಗದ್ದಾರೆ. ಆದರೆ ಸದ್ಯ ಭುಜದ ಗಾಯದಿಂದ ಅವರು ಬಳಲುತ್ತಿದ್ದಾರೆ. ವರದಿಗಳ ಪ್ರಕಾರ ಅವರು, ನೋವು ನಿವಾರಕ ಚುಚ್ಚುಮದ್ದುಗಳನ್ನು ತೆಗೆದುಕೊಳ್ಳುವ ಮೂಲಕ ಅಭ್ಯಾಸದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಟಿ20 ವಿಶ್ವಕಪ್‌ಗೆ ಮೊದಲು ಅವರು ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯಲ್ಲಿ ಅವರ ಮೇಲೆ ಗಾಯದ ಪ್ರಭಾವ ಬೀರುವ ಅನುಮಾನವಿದೆ.
ಅರುಂಧತಿ ರೆಡ್ಡಿ
ಟೀಮ್ ಇಂಡಿಯಾದ ವೇಗದ ಬೌಲರ್ ಅರುಂಧತಿ ರೆಡ್ಡಿ ಅವರು ಕೂಡ ಭುಜದ ಗಾಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅವರು ಅಭ್ಯಾಸದಲ್ಲಿ ಭಾಗವಹಿಸುತ್ತಿಲ್ಲ. ಟೂರ್ನಿಗೂ ಮುನ್ನ ಅವರು ಫಿಟ್ ಆಗುವ ನಿರೀಕ್ಷೆ ಇದೆ. ಇತ್ತೀಚಿನ ದೇಶಿ ಟೂರ್ನಿಗಳಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗ ಟಿ20 ವಿಶ್ವಕಪ್ ಗೆಲ್ಲಿಸುವ ಜವಾಬ್ದಾರಿ ಅರುಂಧತಿ ರೆಡ್ಡಿ ಅವರ ಮೇಲೂ ಇದೆ.
ಜೆಮಿಮಾ ರಾಡ್ರಿಗಸ್
ಭಾರತ ತಂಡದ ಸ್ಫೋಟಕ ಬ್ಯಾಟರ್ ಜೆಮಿಮಾ ರಾಡ್ರಿಗಸ್ ಅವರು ಸಹಾ ಬೆರಳು ಗಾಯಕ್ಕೆ ತುತ್ತಾಗಿದ್ದಾರೆ. ಅಭ್ಯಾಸದ ಸಮಯದಲ್ಲಿ ಅವರು ತಮ್ಮ ಬೆರಳುಗಳ ಮೇಲೆ ಟೇಪ್ ಅಂಟಿಸಿಕೊಂಡು ಆಡುತ್ತಿದ್ದಾರೆ. ಟಿ20 ವಿಶ್ವಕಪ್ ಮುಂದಿನ ತಿಂಗಳಿಂದ ಶುರುವಾಗಲಿದ್ದು, ಅಲ್ಲಿಯವರೆಗೆ ಅವರು ಬೇಗ ಫಿಟ್ ಆಗಬೇಕಿದೆ. ಜೆಮಿಯಾ ಟೀಮ್ ಇಂಡಿಯಾದ ಭರವಸೆ ಆಟಗಾರ್ತಿಯಾಗಿದ್ದಾರೆ. ಅವರ ಪಾತ್ರ ಟಿ20 ವಿಶ್ವಕಪ್ ಗೆಲ್ಲಲು ಪ್ರಮುಖವಾಗಿದೆ.
ಶ್ರೇಯಾಂಕಾ ಪಾಟೀಲ್
ಟೀಮ್ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಅವರು ಈ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಗಾಯದ ಭೂತ ಅವರನ್ನು ಅವರಿಸಿದೆ. ಶ್ರೇಯಾಂಕ ಅವರ ಬೆರಳಿನ ಮೂಳೆ ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಶ್ರೇಯಾಂಕಾ ವಿಶ್ರಾಂತಿಯಲ್ಲಿದ್ದು, ಅಭ್ಯಾಸ ಅವಧಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಟಿ20 ವಿಶ್ವಕಪ್ ಮುನ್ನ ಫಿಟ್ ಆಗುವ ನಿರೀಕ್ಷೆಯಿದೆ. ಈ ಆಟಗಾರ್ತಿಯರ ಬಗ್ಗೆ ಮಾಹಿತಿ ಇಲ್ಲಿದೆ.
ಮಹಿಳಾ ಟಿ20 ವಿಶ್ವಕಪ್ 2024ರ ಭಾರತ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ , ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಮೀಸಲು ಆಟಗಾರ್ತಿಯರು: ಉಮಾ ಛೆಟ್ರಿ, ತನುಜಾ ಕನ್ವರ್, ಸೈಮಾ ಠಾಕೋರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications