ಬೆಂಗಳೂರು, ಅ.15: ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಜಹೀರ್ ಖಾನ್ ಅವರು ಗುರುವಾರ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಅಂತಾ ರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದರೂ ಇಂಡಿಯನ್ ಪ್ರಿಮಿಯರ್ ಲೀಗ್ ನ ಮುಂದಿನ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಪರ ಆಡುವುದಾಗಿ ಘೋಷಿಸಿದ್ದಾರೆ. ಜಹೀರ್ ಅವರು ನಿವೃತ್ತಿ ಘೋಷಣಾ ಪತ್ರ ಟ್ವೀಟ್ ಮಾಡಿದ್ದಾರೆ.
'ಜಹೀರ್ ಖಾನ್ ಅವರು ಇಂದು ತಮ್ಮ ಕ್ರಿಕೆಟ್ ವೃತ್ತಿಯಿಂದ ನಿವೃತ್ತಿ ಪಡೆಯುತ್ತಿದ್ದಾರೆ. ನಿವೃತ್ತಿಯ ನಂತರದ ಅವರ ಜೀವನಕ್ಕೆ ಶುಭ ಕೋರುತ್ತೇನೆ' ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
