Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Gabba Test Day 2: ಭಾರತಕ್ಕೆ ಮತ್ತೆ ಕಾಡಿದ ಸ್ಮಿತ್, ಹೆಡ್; ಎರಡನೇ ದಿನದಾಟದಂತ್ಯಕ್ಕೆ 405 ರನ್ ಚಚ್ಚಿದ ಆಸೀಸ್

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. ಗಬ್ಬಾ ಟೆಸ್ಟ್‌ ಪಂದ್ಯದ ಮೂರನೇ ದಿನ 7 ವಿಕೆಟ್‌ಗೆ 405 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ನೀಡಿದೆ. ಆಸೀಸ್ ಪರ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ ದಿನದ ಆಟ ಮಳೆಯಿಂದಾಗಿ ರದ್ದಾಗಿತ್ತು. ಇಡೀ ದಿನ ಕೇವಲ 13.2 ಓವರ್‌ಗಳನ್ನು ಮಾತ್ರ ಆಡಲಾಗಿತ್ತು. ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿತ್ತು. ಆದರೆ, ಎರಡನೇ ದಿನ ಆಸ್ಟ್ರೇಲಿಯಾ ಉತ್ತಮ ರನ್ ಕಲೆ ಹಾಕಿತ್ತು. ಟೀಮ್ ಇಂಡಿಯಾ ಬೌಲರ್‌ಗಳು ಆಸೀಸ್‌ ಬ್ಯಾಟರ್‌ಗಳನ್ನು ಕಟ್ಟಿ ಹಾಕುವಲ್ಲಿ ಎಡುವಿದರು.

ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ 151 ರನ್ ಗಳಿಸಿದರೆ, ಸ್ಟೀವ್ ಸ್ಮಿತ್ ತಮ್ಮ ಹಳೆಯ ಬ್ಯಾಟಿಂಗ್ ಖದರ್ ತೋರಿಸಿ 101 ರನ್ ಗಳಿಸಿದರು. ಈ ಇಬ್ಬರ ಶತಕ ಭಾರತ ತಂಡದ ಮೇಲೆ ಒತ್ತಡ ಹೆಚ್ಚಿಸಿದೆ. ಅಡಿಲೇಡ್ ಟೆಸ್ಟ್‌ನಲ್ಲೂ ಹೆಡ್ ಶತಕ ಬಾರಿಸಿದ್ದರು. ಇವರಿಬ್ಬರನ್ನು ಬಿಟ್ಟರೆ ಆಸೀಸ್ ಪಡೆಯ ಯಾವುದೇ ಬ್ಯಾಟರ್‌ ಅಬ್ಬರಿಸಲಿಲ್ಲ. ಸ್ಟಂಪ್‌ನ ವೇಳೆಗೆ ವಿಕೆಟ್‌ಕೀಪರ್ ಅಲೆಕ್ಸ್ ಕ್ಯಾರಿ 45 ಮತ್ತು ಮಿಚೆಲ್ ಸ್ಟಾರ್ಕ್ 7 ರನ್ ಗಳಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Gabba Test Australia score 405 runs at the end of the second day play against India

ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜಾ 21, ನಾಯಕ ಪ್ಯಾಟ್ ಕಮ್ಮಿನ್ಸ್ 20, ಮಾರ್ನಸ್ ಲ್ಯಾಬುಸ್ಚಾಗ್ನೆ 12, ನಾಥನ್ ಮೆಕ್‌ಸ್ವೀನಿ 9 ಮತ್ತು ಮಿಚೆಲ್ ಮಾರ್ಷ್ 5 ರನ್ ಗಳಿಸಿ ಔಟಾದರು. ಜಸ್ಪ್ರೀತ್ ಬುಮ್ರಾ ಭಾರತ ತಂಡದ ಗೌರವವನ್ನು ಉಳಿಸಿದರು. ಮಿಂಚಿನ ಬೌಲಿಂಗ್ ದಾಳಿ ಮಾಡಿದ ಬುಮ್ರಾ 5 ವಿಕೆಟ್ ಪಡೆದರು. ನಿತೀಶ್ ರೆಡ್ಡಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಉರುಳಿಸಿದರು.

ಗಬ್ಬಾ ಟೆಸ್ಟ್ ಪಂದ್ಯದ ಮೊದಲ ದಿನವಾದ ಶನಿವಾರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಗಬ್ಬಾ ಟೆಸ್ಟ್ ಪಂದ್ಯಕ್ಕೆ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯಿತು. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ವೇಗದ ಬೌಲರ್ ಹರ್ಷಿತ್ ರಾಣಾ ಅವರ ಬದಲಿಗೆ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ವೇಗಿ ಆಕಾಶ್ ದೀಪ್ ಅವರಿಗೆ ಅವಕಾಶ ನೀಡಲಾಗಿತ್ತು.

ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಆತಿಥೇಯ ಆಸ್ಟ್ರೇಲಿಯಾ ತಂಡವನ್ನು 295 ರನ್‌ಗಳಿಂದ ಸೋಲಿಸಿದ ಭಾರತ 1-0 ಮುನ್ನಡೆ ಸಾಧಿಸಿತು. ಇದಾದ ನಂತರ, ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಅದ್ಭುತ ಪುನರಾಗಮನ ಮಾಡಿತ್ತು. ಭಾರತ ವಿರುದ್ಧ 10 ವಿಕೆಟ್‌ಗಳಿಂದ ಗೆದ್ದು ಬೀಗುತ್ತು. ಈ ಮೂಲಕ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ.

Story first published: Sunday, December 15, 2024, 14:07 [IST]
Other articles published on Dec 15, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+