ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ಗಂಭೀರ್, ಪಂತ್ ಹೇಳಿದ್ದೇನು?
ದಕ್ಷಿಣ ಆಫ್ರಿಕಾ, ಭಾರತದ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದೆ. ಈ ವೇಳೆ ಆಡಿದ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಪ್ರವಾಸಿ ತಂಡ ಅಬ್ಬರಿಸಿದೆ. ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 30 ರನ್ ಜಯ ಸಾಧಿಸಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಎರಡನೇ ಸ್ಥಾನವನ್ನು ಭಧ್ರಪಡಿಸಿಕೊಂಡಿದೆ. ಬೆನ್ನಬಹುದಿತ್ತು
ದಕ್ಷಿಣ ಆಫ್ರಿಕಾ ಆಡಿದ 3 ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದ್ದು, ಗೆಲುವಿನ ಶೆಕಡಾವಾರು 66.67 ದೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಭಾರತ ಆಡಿದ 8 ಪಂದ್ಯಗಳಲ್ಲಿ 4 ಗೆಲುವು, 3 ಸೋಲು, 1 ಡ್ರಾ ಸಾಧಿಸಿದ್ದು, 54.17 ಗೆಲುವಿನ ಶೇಕಡಾವಾರಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಈ ಸೋಲಿನ ಬಳಿಕ ಟೀಮ್ ಇಂಡಿಯಾ ಕೋಚ್ ಹಾಗೂ ರಿಷಭ್ ಪಂತ್ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಹೀನಾಯ ಸೋಲಿನ ಬಳಿಕ ಗೌತಮ್ ಗಂಭೀರ್ ತಮ್ಮ ಅನಿಸಿಕೆ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ನೀಡಿದ್ದ ಗುರಿಯನ್ನು ನಮ್ಮ ತಂಡ ಬೆನ್ನಟ್ಟಬಹುದಿತ್ತು. 124 ರನ್ ಗುರಿಯನ್ನು ನಾವು ಬೆನ್ನಟ್ಟಬಹುದಿತ್ತು. ಈ ರನ್‌ಗಳನ್ನು ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿದಾಗ ಬೆನ್ನಟ್ಟಬಹುದಿತ್ತು. ವಿಕೆಟ್‌ನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಇದು ಆಡಲಾಗದ ಪಿಚ್ ಏನ್ ಆಗಿರಲಿಲ್ಲ. ಈ ಪಿಚ್ ಮೇಲೆ ಬ್ಯಾಟ್ ಮಾಡಲಾಗದಷ್ಟು ಏನೂ ಕೆಟ್ಟದಾಗಿರಲಿಲ್ಲ. ಈ ಪಿಚ್ ಮೇಲೆ ವೇಗದ ಬೌಲರ್‌ಗಳು ಮಿಂಚಿದ್ದಾರೆ. ನಾವು ಕೇಳಿದ ಪಿಚ್ ಸಿಕ್ಕಿದೆ. ಸ್ಪಿನ್ ಬೌಲಿಂಗ್ ಅನ್ನು ಹೇಗೆ ಆಡಬೇಕು ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ವೇಗದ ಬೌಲರ್‌ಗಳು ಈ ಪಿಚ್‌ನಲ್ಲಿ ಮೊನಚಾದ ದಾಳಿ ಸಂಘಟಿಸಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.
ಪಂತ್ ಹೇಳಿದ್ದೇನು?
ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ರಿಷಭ್ ಪಂತ್ ಸೋಲಿನ ಬಗ್ಗೆ ಮಾತನಾಡಿದ್ದಾರೆ. ದಕ್ಷಿಣ ಆಫ್ರಿಕಾ ನೀಡಿದ್ದ ಗುರಿಯನ್ನು ಬೆನ್ನಟ್ಟುವಲ್ಲಿ ನಮ್ಮ ತಂಡ ವಿಫಲವಾಗಿದೆ. ಎರಡನೇ ಇನಿಂಗ್ಸ್‌ನಲ್ಲಿ ಒತ್ತಡ ಹೆಚ್ಚಾಯಿತು. ನಾವು ಚೆನ್ನಾಗಿ ಬ್ಯಾಟ್ ಮಾಡುವಲ್ಲಿ ವಿಫಲರಾದರು. ಟೆಂಬಾ ಬವುಮಾ ಮತ್ತು ಕಾರ್ಬಿನ್ ಬಾಷ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ನಾವು ಸಮರ್ಥವಾಗಿ ಬ್ಯಾಟ್ ಮಾಡುವಲ್ಲಿ ವಿಫಲವಾಗಿದ್ದೇವೆ ಎಂದು ಪಂತ್ ಹೇಳೊದ್ದಾರೆ.
ಪಂದ್ಯದ ಫಲಿತಾಂಶ
ದಕ್ಷಿಣ ಆಫ್ರಿಕಾ ನೀಡಿದ್ದ 124 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಟೀಮ್ ಇಂಡಿಯಾದ ಬ್ಯಾಟರ್‌ಗಳು ವಿಫಲರಾಗಿದ್ದಾರೆ. ಸ್ಟಾರ್ ಬ್ಯಾಟರ್ಸ್ ನೆಲ ಕಚ್ಚಿ ಬ್ಯಾಟ್ ಮಾಡುವಲ್ಲಿ ವಿಫಲರಾದರು. ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಶುಭಮನ್ ಗಿಲ್ ಗಾಯಕ್ಕೆ ತುತ್ತಾಗಿದ್ದಾರಿಂದ, ಗಿಲ್ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟ್ ಮಾಡಲಿಲ್ಲ. ಭಾರತ ಎರಡನೇ ಇನಿಂಗ್ಸ್‌ನಲ್ಲಿ ಕೇವಲ 10 ಬ್ಯಾಟರ್‌ಗಳೊಂದಿಗೆ ಕಣಕ್ಕೆ ಇಳಿಯಿತು. ದಕ್ಷಿಣ ಆಫ್ರಿಕಾದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ಗೆಲುವು ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications