ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆರ್ ಸಿಬಿ ಸೇರಿದ ಗ್ಯಾರಿ ಕರ್ಸ್ಟನ್, ಆಶೀಶ್ ನೆಹ್ರಾ

By Mahesh

ಬೆಂಗಳೂರು, ಜನವರಿ 02: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ವಿಭಾಗಕ್ಕೆ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಿಗ್ಗಜ ಗ್ಯಾರಿ ಕರ್ಸ್ಟನ್ ಹಾಗೂ ಟೀಂ ಇಂಡಿಯಾದ ಟಿ20 ಸ್ಪೆಷಲಿಸ್ಟ್ ಮಾಜಿ ವೇಗಿ ಆಶೀಶ್ ನೆಹ್ರಾ ಅವರು ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಐಪಿಎಲ್ 11ರ ಹರಾಜು ದಿನಾಂಕ ನಿಗದಿಬೆಂಗಳೂರಿನಲ್ಲಿ ಐಪಿಎಲ್ 11ರ ಹರಾಜು ದಿನಾಂಕ ನಿಗದಿ

2011ರ ವಿಶ್ವಕಪ್ ಗೆಲ್ಲಲು ಭಾರತಕ್ಕೆ ನೆರವಾಗಿದ್ದ ಮಾಜಿ ಕೋಚ್ ಗ್ಯಾರಿ ಅವರು ಈ ಹಿಂದೆ ಐಪಿಎಲ್ ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

Gary Kirsten, Ashish Nehra join RCB coaching team

ಬೆಂಗಳೂರು ಮೂಲದ ಐಪಿಎಲ್ ತಂಡದ ಮುಖ್ಯ ಕೋಚ್ ಆಗಿ 2016ರ ತನಕ ಕಾರ್ಯ ನಿರ್ವಹಿಸಿರುವ ನ್ಯೂಜಿಲೆಂಡ್ ನ ಡೇನಿಯಲ್ ವೆಟ್ಟೋರಿ ಅವರು ಕೋಚ್ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.

ಗ್ಯಾರಿ ಹಾಗೂ ನೆಹ್ರಾ ಅವರು ಮೆಂಟರ್ ಗಳಾಗಿ,ಜತೆಗೆ ಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ತರಬೇತುದಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

2016ರಲ್ಲಿ ಐಪಿಎಲ್ ಫೈನಲ್ ತನಕ ತಲುಪಿದ್ದ ಕೊಹ್ಲಿ ಪಡೆ, ಡೇವಿಡ್ ವಾರ್ನರ್ ಅವರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು.

ಗ್ಯಾರಿ ಕರ್ಸ್ಟನ್ ಅವರು ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ ನಲ್ಲಿ ಹೋಬರ್ಟ್ ಹರಿಕೇನ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನವೆಂಬರ್ 01ರಂದು ನ್ಯೂಜಿಲೆಂಡ್ ವಿರುದ್ಧದ ಟಿ20ಐ ಪಂದ್ಯದ ನಂತರ ವೇಗಿ ಆಶೀಶ್ ಅವರು ಸುಮಾರು 20 ವರ್ಷಗಳ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X