ಕೆಕೆಆರ್ ಆಟಗಾರರಿಗೆ ದಯೆ ತೋರಿದ ಕೋಚ್ ಗೌತಮ್ ಗಭೀರ್; ತಂಡಕ್ಕೆ ಮರಳಿದ ಅಯ್ಯರ್
ಜುಲೈ 19 ಶುಕ್ರವಾರ, ಇದೇ ತಿಂಗಳ 27ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ. ಟಿ20 ಭಾರತ ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್‌ಗೆ ನೀಡಲಾಗಿದೆ.
ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ನಾಯಕ ರೋಹಿತ್ ಶರ್ಮಾ ತಂಡದ ಜವಬ್ದಾರಿಯನ್ನು ವಹಿಸಲಿದ್ದಾರೆ. ಮತ್ತೊಂದೆಡೆ ಗೌತಮ್ ಗಂಭೀರ್ ಟೀಮ್ ಇಂಡಿಯಾದ ನೂತನ ಹೆಡ್ ಕೋಚ್ ಆದ ಬಳಿಕ ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದಾರೆ.

ಇತ್ತೀಚೆಗಷ್ಟೇ ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಶ್ರೀಲಂಕಾ ಪ್ರವಾಸವು ಮುಖ್ಯ ಕೋಚ್ ಆಗಿ ಗಂಭೀರ್ ಅವರ ಮೊದಲ ಹುದ್ದೆಯಾಗಿದೆ.
ಬಹುಮುಖ್ಯವಾಗಿ ಈ ಪ್ರವಾಸದಲ್ಲಿ ಮೂವರು ಕೆಕೆಆರ್ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಕೆಕೆಆರ್ ಆಟಗಾರರಿಗೆ ಗೌತಮ್ ಗಭೀರ್ ದಯೆ ತೋರಿದ್ದಾರೆ ಎನ್ನಲಾಗುತ್ತಿದೆ. ಮೂವರಲ್ಲಿ ಒಬ್ಬ ಆಟಗಾರನಿಗೆ ಭಾರತದ ಪರ ಪದಾರ್ಪಣೆ ಮಾಡುವ ಅವಕಾಶವೂ ಸಿಗಬಹುದು.
ಶ್ರೀಲಂಕಾ ಪ್ರವಾಸಕ್ಕಾಗಿ ಟಿ20 ಮತ್ತು ಏಕದಿನ ಎರಡೂ ಮಾದರಿಗಳಿಗೆ ಆಯ್ಕೆಯಾಗಿರುವ ತಂಡದಲ್ಲಿ ಮೂವರು ಕೆಕೆಆರ್ ಆಟಗಾರರಾದ ರಿಂಕು ಸಿಂಗ್, ಶ್ರೇಯಸ್ ಅಯ್ಯರ್ ಮತ್ತು ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ರಿಂಕು ಸಿಂಗ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದು, ಶ್ರೇಯಸ್ ಅಯ್ಯರ್ ಮತ್ತು ಹರ್ಷಿತ್ ರಾಣಾ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅಯ್ಯರ್-ರಿಂಕು ಎಂಟ್ರಿ
ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಗುಳಿದಿರುವ ಸ್ಟಾರ್ ಬ್ಯಾಟರ್ ಶ್ರೇಯರ್ ಅಯ್ಯರ್ ಶ್ರೀಲಂಕಾ ಪ್ರವಾಸದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ 2024ರಲ್ಲಿ ಕೆಕೆಆರ್ ನಾಯಕತ್ವ ವಹಿಸಿದ್ದ ಅಯ್ಯರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿತ್ತು.
ಈ ಸಂದರ್ಭದಲ್ಲಿ ಗೌತಮ್ ಗಂಭೀರ್ ಕೆಕೆಆರ್ ತಂಡದ ಮೆಂಟರ್ ಆಗಿದ್ದಾರೆ. ಮತ್ತೊಂದೆಡೆ ರಿಂಕು ಸಿಂಗ್ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಿಂಬಾಬ್ವೆ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ರಿಂಕು ಕೂಡ ಒಂದು ಭಾಗವಾಗಿದ್ದರು.
2024ರ ಟ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದಲ್ಲಿ ರಿಂಕು ಸಿಂಗ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದರು. ಕೇವಲ ರಿಂಕು ಪ್ರಯಾಣ ಮೀಸಲು ಆಟಗಾರರಿದ್ದರು.
ಪಾರ್ದಪಣೆ ಮಾಡುವ ತವಕದಲ್ಲಿ ರಾಣಾ
ಯುವ ವೇಗ ಬೌಲರ್ ಹರ್ಷಿತ್ ರಾಣಾ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ 2024ರಲ್ಲಿ ಕೆಕೆಆರ್ ಪರ ಅದ್ಭುತ ಪ್ರದರ್ಶನ ನೀಡಿದ ಹರ್ಷಿತ್ ರಾಣಾ ಏಕದಿನ ತಂಡದಲ್ಲಿ ಸ್ಥಾನ ಪಡೆಯವುವಲ್ಲಿ ಸಫಲವಾಗಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ 3 ಏಕದಿನ ಪಂದ್ಯಗಳನ್ನು ಆಡಲಿದೆ. ಇಂತಹ ಪರಿಸ್ಥಿತಿಯಲ್ಲಿ ಹರ್ಷಿತ್ ರಾಣಾ ಪಾದಾರ್ಪಣೆ ಮಾಡುವ ಅವಕಾಶ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
ಹರ್ಷಿತ್ ರಾಣಾ ಅದ್ಭುತ ಬೌಲಿಂಗ್ ಮಾಡುವ ಮೂಲಕ ಕೆಕೆಆರ್ ಚಾಂಪಿಯನ್ ಆಗುವಲ್ಲಿ ದೊಡ್ಡ ಕೊಡುಗೆ ನೀಡಿದ್ದರು. ಐಪಿಎಲ್ 2024ರಲ್ಲಿ 19 ವಿಕೆಟ್ ಬೇಟೆಯಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications