For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯಗೆ ಸಮರ್ಥ ಬದಲಿ ಆಟಗಾರನನ್ನು ತಕ್ಷಣವೇ ಕಂಡುಕೊಳ್ಳಬೇಕಿದೆ: ಗಂಭೀರ್

Gautam Gambhir statement on Hardik Pandya said India need to quickly identify backup for him

ಟೀಮ್ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಕುತೂಹಕಾರಿ ಹೇಳಿಕೆ ನೀಡಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗೆಲುವು ಸಾಧಿಸಿದ ಬಳಿಕ ಸ್ಟಾರ್‌ ಸ್ಪೋರ್ಟ್ಸ್‌ನ ಕಾರ್ಯಕ್ರಮದಲ್ಲಿ ಗೌತಮ್ ಗಂಭೀರ್ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಹಾರ್ದಿಕ್ ಪಾಂಡ್ಯ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಆಲ್‌ರೌಂಡರ್‌ನನ್ನು ಹುಡುಕುವ ಅಗತ್ಯ ಭಾರತ ತಂಡಕ್ಕೆ ಅಗತ್ಯವಿದೆ ಎಂದಿದ್ದಾರೆ.

"ಭಾರತ ತಂಡ ಹಾರ್ದಿಕ್ ಪಾಂಡ್ಯ ಬದಲಿಗೆ ಸಮರ್ಥವಾದ ಬದಲಿ ಆಟಗಾರನನ್ನು ಕಂಡುಕೊಳ್ಳುವ ಅಗತ್ಯವಿದೆ. ಹಾರ್ದಿಲ್ ಪಾಂಡ್ಯಾಗೆ ಏನಾದರೂ ಆದಲ್ಲಿ ಭಾರತ ತಂಡಕ್ಕೆ ಗಂಭೀರ ಹಿನ್ನಡೆಯಾಗಲಿದೆ. ಭಾರತ ತಂಡ ಬಹಳ ಸಂಕಷ್ಟಕ್ಕೆ ಸಿಲುಕಲಿದೆ" ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮತ್ತೋರ್ವ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೂಡ ಈ ವಿಚಾರವಾಗಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಂದಿನ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿರುವ ಕಾರಣ ಬದಲಿಯಾಗಿ ವೇಗದ ಬೌಲಿಂಗ್‌ ಆಲ್‌ರೌಂಡರ್‌ನ ಅಗತ್ಯ ಅನಿವಾರ್ಯವಲ್ಲ ಎಂದಿದ್ದು ಭಾರತದಲ್ಲಿ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಪರಿಣಾಮಕಾರಿಯಾಗಲಿದ್ದಾರೆ ಎಂದಿದ್ದಾರೆ

ಹಾರ್ದಿಕ್ ಪಾಂಡ್ಯ ಕಳೆದ ಕೆಲ ವರ್ಷಗಳಿಂದ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ವರ್ಷ ಸಂಪೂರ್ಣವಾಗಿ ಚೇತರಿಸಿಕೊಂಡಿ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಆದಾದ ಬಳಿಕ ಪಾಂಡ್ಯ ಭಾರತ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದು ಮಹತ್ವದ ಪಾತ್ರವಹಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಜವಾಬ್ಧಾರಿ ಕೂಡ ಪಾಂಡ್ಯ ಹೆಗಲೇರಿದ್ದು ಶೀಘ್ರದಲ್ಲಿ ಚುಟುಕು ಮಾದರಿಗೆ ಪಾಂಡ್ಯ ಖಾಯಂ ನಾಯಕನಾಗುವ ಸಾಧ್ಯತೆಯೂ ಇದೆ. ಇನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಪಾಂಡ್ಯ ಉಪನಾಯಕನಾಗಿಯೂ ಆಯ್ಕೆಯಾಗಿದ್ದಾರೆ.

ಇತ್ತಂಡಗಳ ಆಡುವ ಬಳಗ

ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ

ಭಾರತ ಆಡುವ XI: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್

Story first published: Tuesday, January 3, 2023, 23:58 [IST]
Other articles published on Jan 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+