For Quick Alerts
ALLOW NOTIFICATIONS  
For Daily Alerts
 

ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ಗೌತಮ್ ಗಂಭೀರ್ ಮೊದಲ ಪ್ರತಿಕ್ರಿಯೆ

ಮಂಗಳವಾರ, ಜುಲೈ 9ರಂದು ಭಾರತದ ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್ ಅವರು ಭಾರತದ ಹಿರಿಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ನಂತರ ಕೃತಜ್ಞತೆ ಮತ್ತು ಉತ್ಸಾಹದ ಮೂಲಕ ಪ್ರತಿಕ್ರಿಯಿಸಿದರು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ನೇಮಕವನ್ನು ಖಚಿತಪಡಿಸಿದರು. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ನಿರ್ಗಮಿಸಿದ ರಾಹುಲ್ ದ್ರಾವಿಡ್ ಅವರ ಪಾತ್ರವನ್ನು ಗೌತಮ್ ಗಂಭೀರ್ ವಹಿಸಿಕೊಂಡಿದ್ದಾರೆ.

Gautam Gambhir s First Reaction After He Was Appointed As the Head Coach of the Indian Team

ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು 2023ರ ಏಕದಿನ ವಿಶ್ವಕಪ್‌ನ ಫೈನಲ್ ತಲುಪಿತು. ಅಂತಿಮವಾಗಿ 2024ರ ಟಿ20 ವಿಶ್ವಕಪ್ ಗೆದ್ದಿತು.

2007 ಮತ್ತು 2011ರಲ್ಲಿ ಭಾರತ ತಂಡದ ಟಿ20 ಹಾಗೂ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿರುವ ಗೌತಮ್ ಗಂಭೀರ್, ಹೊಸ ಜವಾಬ್ದಾರಿಯ ಬಗ್ಗೆ ತಮ್ಮ ಭಾವನೆಗಳನ್ನು ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

"ಭಾರತವು ನನ್ನ ಗುರುತಾಗಿದೆ ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಸವಲತ್ತು. ವಿಭಿನ್ನ ಪಾತ್ರವನ್ನು ವಹಿಸಿಕೊಂಡಿದ್ದರೂ, ನಾನು ಭಾರತ ತಂಡಕ್ಕೆ ಹಿಂತಿರುಗಿರುವುದು ನನಗೆ ಗೌರವವಾಗಿದೆ".

"ಆದರೆ ನನ್ನ ಗುರಿ ಮೊದಲಿನಂತೆಯೇ ಇದೆ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡುವುದು. ಮೆನ್ ಇನ್ ಬ್ಲ್ಯೂ 1.4 ಬಿಲಿಯನ್ ಭಾರತೀಯರ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ಈ ಕನಸುಗಳನ್ನು ನನಸಾಗಿಸಲು ನಾನು ನನ್ನ ಶಕ್ತಿಯಿಂದ ಎಲ್ಲವನ್ನೂ ಮಾಡುತ್ತೇನೆ," ಎಂದು ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ಮೊದಲ ನಿಯೋಜನೆಯು ಜುಲೈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ವೈಟ್-ಬಾಲ್ ಪ್ರವಾಸವಾಗಿದ್ದು, ಮೂರು ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡಿದೆ.

ರಾಹುಲ್ ದ್ರಾವಿಡ್ ಅವರೊಂದಿಗೆ ಕೆಲಸ ಮಾಡಿದ ಸಹಾಯಕ ಕೋಚ್‌ಗಳಾದ ವಿಕ್ರಮ್ ರಾಥೋರ್ (ಬ್ಯಾಟಿಂಗ್), ಪಾರಸ್ ಮಾಂಬ್ರೆ (ಬೌಲಿಂಗ್) ಮತ್ತು ಟಿ ದಿಲೀಪ್ (ಫೀಲ್ಡಿಂಗ್) ತಮ್ಮ ಪಾತ್ರಗಳಲ್ಲಿ ಮುಂದುವರಿಯುತ್ತಾರೆಯೇ ಎಂಬುದನ್ನು ಬಿಸಿಸಿಐ ಇನ್ನೂ ಖಚಿತಪಡಿಸಿಲ್ಲ.

42 ವರ್ಷದ ಗೌತಮ್ ಗಂಭೀರ್ ಇದೀಗ ದೊಡ್ಡ ಯಶಸ್ಸಿನ ಅಲೆಯ ಮೇಲೆ ಸವಾರಿ ಮಾಡುತ್ತಿರುವ ಭಾರತ ತಂಡದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ವರ್ಷ ಟಿ20 ವಿಶ್ವ ಚಾಂಪಿಯನ್ ಆಗುವ ಮೊದಲು ಭಾರತ ತಂಡ ಕಳೆದ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್‌ಗಳ ಫೈನಲ್‌ಗೆ ತಲುಪಿತ್ತು.

ಭಾರತ ತಂಡ ಮುಂದಿನ ವರ್ಷ ತಮ್ಮ ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಹಾದಿಯಲ್ಲಿದ್ದಾರೆ. ಆದಾಗ್ಯೂ, ಗೌತಮ್ ಗಂಭೀರ್ ಅವರ ಅಧಿಕಾರಾವಧಿಯು ಪರಿವರ್ತನೆಯ ಅವಧಿಯಲ್ಲಿ ಪ್ರಾರಂಭವಾಗುತ್ತದೆ. ಭಾರತ ಕ್ರಿಕೆಟ್ ತಂಡವು ಅತ್ಯಂತ ಪ್ರಸಿದ್ಧ ಆಟಗಾರರ ಸೇವೆಯನ್ನು ಕಳೆದುಕೊಳ್ಳಲಿದೆ.

ಭಾರತ ಟಿ20 ತಂಡವು ಇದೀಗ ನಿವೃತ್ತ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಇಲ್ಲದೆ ಆಡಬೇಕಿದೆ. ಅಲ್ಲದೆ, ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಶಮಿ ಸೇರಿದಂತೆ ಪ್ರಮುಖ ಹಿರಿಯ ಆಟಗಾರರು ಇತರ ಸ್ವರೂಪಗಳಲ್ಲಿ ತಮ್ಮ ವೃತ್ತಿಜೀವನದ ಅಂತ್ಯವನ್ನು ಸಮೀಪಿಸುತ್ತಿದ್ದಾರೆ.

Story first published: Tuesday, July 9, 2024, 21:59 [IST]
Other articles published on Jul 9, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+