IND vs ENG Test: ಇಂಗ್ಲೆಂಡ್‌ನಲ್ಲಿ ಹೇಗಿದೆ ರಾಹುಲ್, ರಿಷಭ್ ಪಂತ್ ದಾಖಲೆ?
ಟೀಮ್ ಇಂಡಿಯಾ ಈಗ ಹೊಸ ಸವಾಲಿಗೆ ಸಿದ್ಧವಾಗುತ್ತಿದೆ. ಈಗ ಶುಭಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾಗೆ ಅನುಭವಿಗಳ ಅನುಪಸ್ಥಿತಿ ಬಹುವಾಗಿ ಕಾಡಲಿದೆ. ಈ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ, ಈ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಸಹ ಎದ್ದಿವೆ.
ಟೀಮ್ ಇಂಡಿಯಾವನ್ನು ಇಂಗ್ಲೆಂಡ್‌ನಲ್ಲಿ ಶುಭಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಇವರಿಗೆ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಈ ವೇಳೆ ಟೀಮ್ ಇಂಡಿಯಾದಲ್ಲಿರುವ ಆಟಗಾರರಲ್ಲಿ ಅನುಭವಿ ಬ್ಯಾಟರ್‌ಗಳು ಎಂದರೆ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್. ಈ ಇಬ್ಬರು ಟೀಮ್ ಇಂಡಿಯಾಕ್ಕೆ ಬ್ಯಾಟಿಂಗ್‌ನಲ್ಲಿ ನೆರವು ನೀಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಇಂಗ್ಲೆಂಡ್‌ನಲ್ಲಿ ಟೀಮ್ ಇಂಡಿಯಾ ಟೆಸ್ಟ್ ಸರಣಿ ಗೆಲುವಿನ ಕನಸು ನನಸಾಗುತ್ತದೆ. ಹಾಗಿದ್ದರೆ ಇಂಗ್ಲೆಂಡ್‌ನಲ್ಲಿ ಈ ಆಟಗಾರರ ಸಾಧನೆ ಹೇಗಿದೆ ಎಂಬ ಬಗ್ಗೆ ವರದಿ ಇಲ್ಲಿದೆ.

ಟೀಮ್ ಇಂಡಿಯಾದ ಭರವಸೆಯ ಆಟಗಾರ ಕೆಎಲ್ ರಾಹುಲ್ ವಿದೇಶಿ ಪಿಚ್‌ಗಳಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇವರ ಮೇಲೆ ಒತ್ತಡ ಹಾಗೂ ನಿರೀಕ್ಷೆಗಳು ಹೆಚ್ಚಾಗಿವೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಕೆಎಲ್ ಅಮೋಘ ಪ್ರದರ್ಶನ ನೀಡಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು. ಈಗಲೂ ಕೆಎಲ್ ಇದೇ ಸಾಧನೆಯನ್ನು ಮಾಡುವ ಅನಿವಾರ್ಯತೆ ಇದೆ.
ಇಂಗ್ಲೆಂಡ್ ವಿರುದ್ಧ ಹೇಗಿದೆ ಕೆಎಲ್ ಪ್ರದರ್ಶನ ?
ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಒಟ್ಟಾರೆ 9 ಟೆಸ್ಟ್ ಪಂದ್ಯಗಳ 18 ಇನಿಂಗ್ಸ್‌ಗಳಲ್ಲಿ ಬ್ಯಾಟ್ ಮಾಡಿದ್ದಾರೆ. ಅಲ್ಲದೆ 34.11ರ ಸರಾಸರಿಯಲ್ಲಿ 614 ರನ್ ಕಲೆ ಹಾಕಿದ್ದಾರೆ. ಕೆಎಲ್ ರಾಹುಲ್ ಇಂಗ್ಲೆಂಡ್ ನೆಲದಲ್ಲಿ ಈಗಾಗಲೇ 2 ಶತಕ ಹಾಗೂ 1 ಅರ್ಧಶತಕವನ್ನು ಬಾರಿಸಿದ್ದಾರೆ. ಈ ವೇಳೆ ಅವರ ಸ್ಟ್ರೈಕ್ ರೇಟ್ ಸಹ ಅಮೋಘವಾಗಿದೆ. ಕೆಎಲ್ ರಾಹುಲ್ ಮುಂಬರುವ ತೆಂಡೂಲ್ಕರ್-ಆಂಡರ್ಸನ್ ಸರಣಿಯಲ್ಲೂ ತಮ್ಮ ದಿಟ್ಟ ಪ್ರದರ್ಶನವನ್ನು ಮುಂದುವರೆಸುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ತಂಡ ಗೆಲುವಿನ ದಡ ಸೇರಬಹುದು.
ಪಂತ್ ಪ್ರದರ್ಶನ ಉತ್ತಮ
ರಿಷಭ್ ಪಂತ್ ಸಹ ಬೌನ್ಸಿ ಪಿಚ್‌ಗಳಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸುವ ಆಟಗಾರ. ಇವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್. ಇವರು ಇಂಗ್ಲೆಂಡ್‌ನಲ್ಲಿ ಆಡಿದ 8 ಟೆಸ್ಟ್ ಪಂದ್ಯಗಳ 15 ಇನಿಂಗ್ಸ್‌ಗಳಲ್ಲಿ 511 ರನ್ ಸಿಡಿಸಿದ್ದಾರೆ. ಈ ವೇಳೆ ರಿಷಭ್ 34.06ರ ಸರಾಸರಿಯಲ್ಲಿ ರನ್ ಕಲೆ ಹಾಕಿ ಭರವಸೆ ಮೂಡಿಸಿದ್ದಾರೆ. ಇಷ್ಟೇ ಅಲ್ಲ ಪಂತ್ ಇಂಗ್ಲೆಂಡ್ ನೆಲದಲ್ಲಿ ವಿಕೆಟ್ ಕೀಪರ್ ಬ್ಯಾಟರ್ 2 ಶತಕ ಹಾಗೂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications