Shubman Gill: ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆದ ನಾಯಕ ಶುಭಮನ್ ಗಿಲ್
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದೆ. ಈ ವೇಳೆ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಮೊದಲ ಇನಿಂಗ್ಸ್‌ನಲ್ಲಿ ಅಮೋಘ ಶತಕ ಸಿಡಿಸಿದ್ದಾರೆ. ಈ ಮೂಲಕ ತಮ್ಮ ಮೇಲೆ ಆಯ್ಕೆ ಸಮಿತಿ ತಮ್ಮ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.
ಶುಭಮನ್ ಗಿಲ್ ಇದಕ್ಕೂ ಮೊದಲು ಲೀಡ್ಸ್‌ನಲ್ಲಿ ನಡೆದ ಪಂದ್ಯದಲ್ಲೂ ಶತಕ ಬಾರಿಸಿ ಅಬ್ಬರಿಸಿದ್ದರು. ಅಲ್ಲದೆ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲೂ ಶತಕ ಸಾಧನೆ ಮಾಡಿದ್ದಾರೆ. ಇದು ಇಂಗ್ಲೆಂಡ್ ವಿರುದ್ಧ ಗಿಲ್ ಅವರ ಸತತ ಮೂರನೇ ಟೆಸ್ಟ್ ಶತಕವಾಗಿದೆ. ಈ ಶತಕದೊಂದಿಗೆ, ಟೀಮ್ ಇಂಡಿಯಾ ನೂತನ ನಾಯಕ ಶುಭಮನ್ ಗಿಲ್ ಹೊಸ ಕ್ಲಬ್‌ಗೆ ಎಂಟ್ರಿ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಸತತ ಮೂರು ಶತಕ ಬಾರಿಸಿದ ರಾಹುಲ್ ದ್ರಾವಿಡ್, ಮೊಹಮ್ಮದ್ ಅಜರುದ್ಧಿನ್ ಅವರ ದಾಖಲೆಯ ಸಮಕ್ಕೆ ನಿಂತಿದ್ದಾರೆ.

ಆಂಗ್ಲರ ವಿರುದ್ಧ ಸತತ ಮೂರು ಶತಕಗಳನ್ನು ಬಾರಿಸದ ನಾಲ್ಕನೇ ಭಾರತೀಯ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಮೊಹಮ್ಮದ್ ಅಜರುದ್ದೀನ್, ದಿಲೀಪ್ ವೆಂಗ್‌ಸರ್ಕಾರ್ ಮತ್ತು ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಹ್ಯಾಟ್ರಿಕ್ ಶತಕ
ಈ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಕೊನೆಯ ಟೆಸ್ಟ್ ಪಂದ್ಯದಲ್ಲಿ ಧರ್ಮಶಾಲಾದಲ್ಲಿ ನಡೆದಿತ್ತು. ಈ ಪಂದ್ಯದಲ್ಲೂ ಗಿಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದ್ದರು. ಅಲ್ಲದೆ 110 ರನ್ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಆ ಬಳಿಕ ಲೀಡ್ಸ್ ಈಗ ಎಡ್ಜ್‌ಬಸ್ಟನ್‌ನಲ್ಲಿ ಶತಕ ಬಾರಿಸಿದರು. ಇದು ಗಿಲ್ ಅವರ ವೃತ್ತಿ ಜೀವನದ ಏಳನೇ ಟೆಸ್ಟ್ ಶತಕವಾಗಿದೆ.
ವಿಶೇಷ ಕ್ಲಬ್‌ಗೆ ಗಿಲ್ ಎಂಟ್ರಿ
ಬರ್ಮಿಂಗ್‌ಹ್ಯಾಮ್ ಮೈದಾನದಲ್ಲಿ ಭಾರತದ ಪರ ಶತಕ ಬಾರಿಸಿದ ಶುಭಮನ್ ಗಿಲ್ ದಾಖಲೆ ಬರೆದಿದ್ದಾರೆ. ಈ ಶತಕದ ಮೂಲಕ ಈ ಮೈದಾನದಲ್ಲಿ ಮೂರಂಕಿ ದಾಟಿದ ಎರಡನೇ ಭಾರತೀಯ ನಾಯಕ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಇದೇ ಅಂಗಳದಲ್ಲಿ 149 ರನ್ ಸಿಡಿಸಿದ್ದರು. ಸದ್ಯ ಗಿಲ್ ಅಜೇಯ 114 ರನ್ ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ಅಂಗಳದಲ್ಸಾಲಿ ಭಾರತೀಯ ನಾಯಕ ಶತಕ ಸಾಧನೆಯನ್ನು ಏಳು ವರ್ಷಗಳ ಬಳಿಕ ಮಾಡಿದಂತಾಗಿದೆ.
ಶುಭಮನ್ ಗಿಲ್ ನಾಯಕತ್ವ ವಹಿಸಿಕೊಂಡ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಶತಕ ಸಿಡಿಸಿದ ನಾಲ್ಕನೇ ಭಾರತೀಯ ನಾಯಕ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿಜಯ್ ಹಜಾರೆ, ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮಾಡಿದ್ದರು. ಈಗ ಶುಭಮನ್ ಗಿಲ್ ಈ ಸಾಲಿಗೆ ಸೇರಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications