IND vs ENG Test: ಗಿಲ್ ದ್ವಿಶತಕ: ಜಡೇಜಾ, ವಾಷಿಂಗ್ಟನ್ ಸಮಯೋಚಿತ ಆಟ: ಇಂಗ್ಲೆಂಡ್‌ಗೆ ಆರಂಭಿಕ ಆಘಾತ
ನಾಯಕ ಶುಭಮನ್ ಗಿಲ್ ಬಾರಿಸಿದ ದ್ವಿಶತಕ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ದಿನ ಇಂಗ್ಲೆಂಡ್ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ.
ಗುರುವಾರ 5 ವಿಕೆಟ್‌ಗೆ 310 ರನ್‌ಗಳಿಂದ ಮೊದಲ ಇನಿಂಗ್ಸ್ ಆಟ ಮುಂದುವರೆಸಿದ ಭಾರತ, 587 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಚಹಾ ವಿರಾಮದ ಬಳಿಕ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ ಒತ್ತಡಕ್ಕೆ ಸಿಲುಕಿದೆ. ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಆಕಾಶ್ ದೀಪ್ 2, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದು ಇಂಗ್ಲೆಂಡ್ ತಂಡಕ್ಕೆ ಕಂಟಕರಾಗಿದ್ದಾರೆ. ಇಂಗ್ಲೆಂಡ್ ಎರಡನೇ ದಿನದಾಟದ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 77 ರನ್ ಕಲೆ ಹಾಕಿದೆ. ಮೂರನೇ ದಿನಕ್ಕೆ ಜೋ ರೂಟ್ ಹಾಗೂ ಹ್ಯಾರಿ ಬ್ರೂಕ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟೀಮ್ ಇಂಡಿಯಾದ ಕೆಳ ಮಧ್ಯಮ ಕ್ರಮಾಂಕದ ಆಟಗಾರರು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡುತ್ತಿಲ್ಲ ಎಂಬ ಮಾತುಗಳು ಇದ್ದವು. ಆದರೆ ಬರ್ಮಿಂಗ್‌ಹ್ಯಾಮ್ ಟೆಸ್ಟ್‌ನಲ್ಲಿ ಈ ಟೀಕೆಗೆ ಟೀಮ್ ಇಂಡಿಯಾ ಮೈದಾನದಲ್ಲಿ ಉತ್ತರ ನೀಡಿದೆ. 211 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಕ್ಕೆ ನಾಯಕ ಶುಭಮನ್ ಗಿಲ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಆಧಾರವಾದರು.
203 ರನ್ ಜೊತೆಯಾಟ
ಗುರುವಾರ ಬ್ಯಾಟಿಂಗ್ ಆರಂಭಿಸಿದ ಜಡೇಜಾ ಹಾಗೂ ಗಿಲ್ ಕಲಾತ್ಮಕ ಆಟವನ್ನು ಪ್ರದರ್ಶಿಸಿತು. ಇಂಗ್ಲೆಂಡ್ ಬೌಲರ್‌ಗಳು ಕೇಳಿದ ಪ್ರತಿ ಪ್ರಶ್ನೆಗೆ ತಮ್ಮದೇ ಧಾಟಿಯಲ್ಲಿ ಉತ್ತರ ನೀಡಿದ ಜಡೇಜಾ ಸೇನಾ ರಾಷ್ಟ್ರಗಳಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ನಾಲ್ಕನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಈ ಮೂಲಕ ಈ ಜೋಡಿ ತಂಡಕ್ಕೆ ಆಸರೆಯಾಯಿತು. ಈ ಜೋಡಿ ಆರನೇ ವಿಕೆಟ್‌ಗೆ 279 ಎಸೆತಗಳಲ್ಲಿ 203 ರನ್ ಸೇರಿಸಿತು. ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್ ಅನುಭವವನ್ನು ತಂಡಕ್ಕೆ ಧಾರೆ ಎರೆದರು. ಇವರು 137 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್ ಸಹಾಯದಿಂದ 89 ರನ್ ಸಿಡಿಸಿ ಔಟ್ ಆದರು.
7ನೇ ವಿಕೆಟ್‌ಗೆ ಶತಕದ ಜೊತೆಯಾಟ
ಇನ್ನು ಆಲ್‌ರೌಂಡರ್ ರೂಪದಲ್ಲಿ ಸ್ಥಾನ ಪಡೆದ ವಾಷಿಂಗ್ಟನ್ ಸುಂದರ್ ತಮ್ಮ ಘನತೆಗೆ ತಕ್ಕ ಆಟವನ್ನು ಆಡಿದರು. ಇವರು ಗಿಲ್ ಜೊತೆಗೂಡಿ ಇನಿಂಗ್ಸ್ ಬೆಳೆಸಿದರು. ಈ ಜೋಡಿ 189 ಎಸೆತಗಳಲ್ಲಿ 144 ರನ್ ಸೇರಿಸಿತು. ಈ ವೇಳೆ ವಾಷಿಂಗ್ಟನ್ ಸುಂದರ್ 42 ರನ್‌ಗಳಿಗೆ ಆಟ ಮುಗಿಸಿದರು.

ನಾಯಕನ ದ್ವಿಶತಕ
ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ಬೌಲರ್‌ಗಳನ್ನು ಮನ ಬಂದಂತೆ ಕಾಡಿದರು. ಇವರು ಎಚ್ಚರಿಕೆಯ ಬ್ಯಾಟಿಂಗ್ ಮಾಡಿ 387 ಎಸೆತಗಳಲ್ಲಿ 30 ಬೌಂಡರಿ, 3 ಸಿಕ್ಸರ್ ನೆರವಿನಿಂದ 269 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಟೀಮ್ ಇಂಡಿಯಾ ಎರಡನೇ ಟೆಸ್ಟ್‌ನಲ್ಲಿ 587 ರನ್ ಕಲೆ ಹಾಕುವಲ್ಲಿ ಇವರ ಕೊಡುಗೆ ಅಪಾರ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications